ಸತತಂ ತಾನಾಗಿ ಶಾಂತಿಸ್ಥಲದೊಳೆಸೆವ ಸದ್ಭಕ್ತಿಸಪ್ತಾಂಗರಾಜ್ಯ
ಸ್ಥಿತನಾಗಿರ್ಪಂತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೭೩ ‖
ಗುರುವಂ ನಂಬಿರ್ದು ಮತ್ತಾ ಗುರುಕರುಣದೆ ಪಂಚಾಕ್ಷರೀ ಮಂತ್ರಮಂ ತಾ-
ಳ್ದು ರಹಸ್ಯಂ ಭಕ್ತಿಯಿಂದಂ ಜಪಮನೆಣಿಸಿ ಗುರ್ವಾಜ್ಞೆಯಂ ಮೀರದತ್ಯಾ-
ದರದಿಂದಂ ನೆತ್ತಿಯೊಳ್ ಪೊತ್ತನುಪಮಸುಖದಿಂ ಬಾಳ್ವ ಭೃತ್ಯತ್ವಮಂ ಮ-
ದ್ಗುರುವೇ ನೀನಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೭೪ ‖
ಅಲರಿಂ ಕೂರ್ತಿಟ್ಟೊಡಂ ಚಕ್ರದಿನುರೆ ಮುಳಿದಂತಿಟ್ಟೊಡಂ ಹಂಸತೂಲ
ಸ್ಥಲದೊಳ್ ತಾಂ ಬೈತೊಡಂ ಮುಳ್ಗಳ ಹೊಸಹಸೆಯೊಳ್ ಬೈತೊಡಂ ಸ್ನೇಹ ದಿಂದಂ
ನಲವಿಂದಂ ಸ್ತೋತ್ರಮಂ ಮಾಡಿದೊಡೆ ಪಳಿದೊಡಂ ಸರ್ವ ಮೊಂದಂ ದ ಮೆಂ ದಾಂ
ಸಲೆ ಕಾಣ್ಬಂತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೭೫ ‖
ಎಸೆವೀ ಪಂಚಾಕ್ಷರೀಮಂತ್ರಮೆ ಗುರುತರಮಂತ್ರಂ ವಿಶುದ್ಧಾಂಗಲೇಪಂ
ಭಸಿತಂ ರುದ್ರಾಕ್ಷಿಯೇ ಭೂಷಣತತಿ ಪರಮಸ್ವಾಮಿ ನೀಂ ಪೂಜ್ಯನಾನಂ-
ದಸಮೇತಂ ಭಕ್ತನೇ ಸತ್ಕುಲಜನೆನಿಪಿದಂ ನಂಬಿ ಮತ್ತೇನುವಂ ಭಾ-
ವಿಸದಿರ್ಪಂತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೭೬ ‖
ಕರೆವಲ್ಲಿಂ ಮುನ್ನವೋ ಓ ಮಗನೆ ಮಗನೆ ಬಂದೆಂ ದಿಟಂ ಬಂದೆನೆಂದಾ-
ದರದಿಂದಂ ನೀನೆ ಬಂದೆನ್ನವಯವನಿತಂ ಮುಟ್ಟಿ ನೊಂದಾ ಬಳಲ್ದಾ
ಕರೆದಾ ಕಂದಾ ಎನುತ್ತುಂ ಕೃಪೆ ಮಿಗೆ ನಲವಿಂ ನೋಡಿ ಮುಂಡಾಡುತೆಂದುಂ
ಸಿರದೊಳ್ ಕೈಯಿಕ್ಕಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೭೭ ‖
ನಿಮಗೆನ್ನಂ ಮಾರುಗೊಟ್ಟೆಂ ಪುರಹರ ನಿಮಗೆನ್ನಂ ಸದಾ ತೊಳ್ತುಗೊಟ್ಟೆಂ
ನಿಮಗೆನ್ನಂ ಸೂರೆಗೊಟ್ಟೆಂ ನಿಮಗೆ ಹರುಷದಿಂದೊಚ್ಚತಂ ಕೊಟ್ಟೆನಾಹಾ
ನಿಮಗೆನ್ನಂ ಮಚ್ಚುಗೊಟ್ಟೆಂ ಗುರುವೆ ಘನವೆ ಸಂತೋಷದಿಂದೊಪ್ಪುಗೊಟ್ಟೆಂ
ನಿಮಗೆನ್ನಂ ದೇವ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೭೮ ‖
ಪುಟ:ಶತಕ ಸಂಪುಟ.pdf/೫೫
ಗೋಚರ
ಈ ಪುಟವನ್ನು ಪ್ರಕಟಿಸಲಾಗಿದೆ
೧೫