ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೫೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೧೭


ಗುರುವೇ ನೀನಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೮೪ ‖

ಅಪರಿಚ್ಛಿನ್ನಂ ಸ್ವತಂತ್ರಂ ನಿರವಧಿಯಮಳಂ ಶಂಕರಂ ನಿತ್ಯನಾನಂ-
ದಪದಂ ಶಾಂತಾರ್ಕಕೋಟಿಪ್ರಭನಜರನಚಿಂತ್ಯಂ ಪರಂಧಾಮರೂಪಂ
ವಿಪುಳಜ್ಞಾನಾಬ್ಧಿ ಸತ್ಯಂ ನಿರುಪಮನಿಧಿ ನೀನೆಂಬಭಿಜ್ಞಾನಮಂ ನೀಂ
ಕೃಪೆಯಂ ಮಾಡುತ್ತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೮೫ ‖

ಸ್ಥೂಲಂ ಸೂಕ್ಷ್ಮಂ ಸುಸೂಕ್ಷ್ಮಂ ಸುಲಭಸುಲಭಂ ಪುಣ್ಯಪಾಪಪ್ರದೂರಂ
ನೀಲಗ್ರೀವಂ ಚಿದಾತ್ನಂ ಭವನಭವನನೂನಾದ್ಯನಾದ್ಯಂತಶೂನ್ಯಂ
ಕಾಲಘ್ನಂ ಕಾಲರೂಪಂ ನತನಕರವಿಪಜ್ಜಾಲವಿಚ್ಛೇದಲೀಲಾ
ಲೋಲಂ ನೀಂ ನೀನೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೮೬ ‖

ಶಿವ ಸರ್ವಾಧಾರ ಗಂಗಾಧರ ಪುರಹರ ಸರ್ವಜ್ಞ ಸರ್ವೇಶ ಗೌರೀ-
ಧವ ನೀಲಗ್ರೀವ ಕಾಲಾಂತಕ ಪಶುಪತಿ ಫಾಲಾಕ್ಷ ಭೋಗೀಂದ್ರಭೂಷಾ-
ಭವ ರುದ್ರೇಶಾನ ಭರ್ಗ ಪ್ರಮಥನಿಧಿ ಮಹಾದೇವ ಮಾರಾರಿ ನಿತ್ಯೋ-
ತ್ಸವ ಸತ್ಯಪ್ರೇಮಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೮೭ ‖

ಗಿರಿಶ ಶ್ರೀಕಂಠ ದಕ್ಷಾಧ್ವರಹರ ವೃಷಭಾರೂಢ ಕಾಪಾಲಿಯಂಧಾ-
ಸುರವೈರಿ ವ್ಯೋಮಕೇಶ ಕ್ರತುಕುಲನೃಪತಿ ಸ್ಥಾಣು ಭೂತೇಶ ಪಂಚಾ-
ವರಣಪ್ರತ್ಯಕ್ಷ ಪಂಚಾನನ ಮೃಡ ಗಜಚರ್ಮಾಂಬರ ಶ್ರೇಷ್ಠ ವಿಶ್ವೋ-
ದರ ಸದ್ಯೋಜಾತ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೮೮ ‖

ಹರ ಭೀಮ ತ್ರ್ಯಕ್ಷ ಭಕ್ತವ್ರಜಹೃದಯ ಪಿನಾಕಿ ತ್ರಿಶೂಲಿ ತ್ರಿಕಾಲಾ-
ಕ್ಷರ ನಿರ್ದೇಹಾಭವಾ ಧೂರ್ಜಟಿ ಜಟಿಲ ಶಿರೋಮಾಲಿ ಶಂಭು ಪ್ರಪಂಚೋ-
ತ್ತರ ಪಂಚಬ್ರಹ್ಮ ಪಂಚಾಧಿಕ ಹಿಮಕರಚೂಡಾಮಣೀ ವೀರಭದ್ರೇ-
ಶ್ವರ ಕಾಲಾತೀತ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೮೯ ‖

ವರಕಾರುಣ್ಯಾಬ್ಧಿ ಷಡ್ದರ್ಶನಹಿತ ಪರಮಸ್ವಾಮಿ ಸರ್ವಜ್ಞ ಪಂಚಾ-