ಪುಟ:ಶತಕ ಸಂಪುಟ.pdf/೫೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

೧೮

ಶತಕ ಸಂಪುಟ


ಕ್ಷರ ಗರ್ಭಾವಾಸ ಮಾದ್ಯತ್ ಪ್ರಮಥಜನಪರೀತೋಷ ವಿಶ್ವೇಶ ತತ್ತ್ವಾ-
ಕರ ತಾರಾದ್ರೀಶ ನಾರಾಯಣನಯನಲಸತ್ಪಾದ ನಾದಾತ್ಮ ಭಕ್ತಾ-
ತುರಚಿತ್ತಗ್ರಾಹಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ
‖ ೯೦ ‖
ಶಿವ ನಿಮ್ಮಿಂ ಪುಟ್ಟಿತೀ ಮಾಯೆ ಗಡೆನಿಪಿದನಾಂ ಸೈರಿಸೆಂ ಪುಟ್ಟಿತೆಂಬೊಂ-
ದವಿಚಾರಂ ನಿಷ್ಕ್ರಿಯಾತ್ಮಪ್ರಭುತನಕೆ ಕರಂ ಹಾನಿ ಶುದ್ಧಾತ್ಮನೊಳ್ ಶಂ-
ಭುವಿನೊಳ್ ಸಮ್ಯಕ್ ಪರಾನಂದದ ತವನಿಧಿಯೊಳ್ ನಿನ್ನೊಳೀ ಭ್ರಾಂತಿಯೆಂಬಾ
ಶ್ರವೆಯಂ ತರ್ಗೊತ್ತಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ‖ ೯೧ ‖

ಮೊದಲಿಂದಂ ಕೂರ್ಮರೋಮಂ ಬಗೆಯ ಶಶಿವಿಷಾಣಂ ವಿಯತ್ ಪುಷ್ಪದಂತಿ-
ಲ್ಲದುದೇ ಸತ್ಯಂ ಪ್ರಪಂಚೆಂದಳೆದು ತಿಳಿದು ನಿಷ್ಕಾಮ ನಿರ್ಮಾಯ ನಿತ್ಯಾ-
ಭ್ಯುದಯಾನಂದೈಕತೇಜೋನಿಧಿ ನಿರುಪಮ ನಿರ್ಲೇಪ ನಿರ್ವಾಣ ನೀನೆಂ-
ಬಿದನೇ ಸೈತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೯೨ ‖

ತೋರುತ್ತಿರ್ಪೀ ಜಗಂ ತಾನಣಿವಿನ ಮುಖದೊಳ್ ತೋರದಿರ್ಪಂತೆ ತೋರ್ಕುಂ
ತೋರಲ್ ಪೇಳಲ್ಕೆ ಕೇಳಲ್ಕಸದಳಮೆನಿಪಾ ಬ್ರಹ್ಮತಾ ಬ್ರಹ್ಮವಾಗು-
ತ್ತಾರುಂ ಬಣ್ಣಕ್ಕಮೇಳುಂ ತನುವಿನ ಪೊರೆಗೆಂಟುಂ ಶರೀರಕ್ಕೆ ಮಿಕ್ಕುಂ
ಮೇರೆರ್ಪಂತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೯೩ ‖

ತೊಳಗುತ್ತಿರ್ಪರ್ಕನಿಂದಾಗಸವೆನಿತನಿತಂ ಮಾಡಿದಂತಿರ್ಪ ಧಾತ್ರೀ-
ತಳಮೆಲ್ಲಂ ಚಂದ್ರನಿಂದಂ ಸಮೆದುದೆನಿಸಿದಂತಿರ್ಪ ದಿಕ್ಸಂಕುಳಂ ನಿ-
ರ್ಮಳವಿದ್ಯುಲ್ಲೇಖೆಯಿಂ ನಿರ್ಮಿಸಿದವೊಲೆಸೆದಿರ್ಪಾ ಪರಂಜ್ಯೋತಿಯೆನ್ನೊಳ್
ಬೆಳಗುತ್ತಿರ್ಪಂತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ‖ ೯೪ ‖

ಗುರುವಿಂ ಸುದ್ದಾತ್ಮನಾದೆಂ ಗುರುವಿನ ಕೃಪೆಯಿಂದಂ ಜಗತ್ ಪೂಜ್ಯನಾದೆಂ
ಗುರುವಿಂ ನಿಷ್ಕಾಮನಾದೆಂ ಘನತರಗುರುವಿಂ ಶಾಂತಿಸಂಪನ್ನನಾದೆಂ
ಗುರುವಿಂ ಸರ್ವಜ್ಞನಾದೆಂ ದಿಟವೆನಿಪಿದನೆನ್ನೊಳ್ ದಿಟಂ ಮಾಡುತುಂ ಮದ್
ಗುರುವೇ ಗೌರೀಶ ಪಂಪಾಪುರದರಸ ವಿರೂಪಾಕ್ಷ ರಕ್ಷಿಪುದೆನ್ನಂ‖ ೯೫ ‖