ಪುಟ:ಶತಕ ಸಂಪುಟ.pdf/೬೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

೨೧


ನೆರೆವೆನದೆಂದೊ ನಿಮ್ಮನತಿನೇಹದೆ ಪೇಳೆಲೆ ಹಂಪೆಯಾಳ್ದನೇ ‖ ೪ ‖

ಕರೆವುದದೆಂದು ಕಾಲ್ವಿಡಿಸಿಕೊಳ್ವುದದೆಂದು ದಯಾಕಟಾಕ್ಷದಿಂ
ಪೊರೆವುದದೆಂದು ಮೆಲ್ನುಡಿಗಳಿಂ ಮದವೇರಿಪುದೆಂದು ಸೋಂಕಿನಿಂ
ದೊರೆವುದದೆಂದು ಸಂತಸದೆ ಪೆರ್ಚಿಪುದೆಂದಮರ್ದಪ್ಪಿನೊಳ್ ಕರಂ
ಕರಗಿಪುದೆನ್ನನೆಂದೊಸೆದು ನೀಂ ಕೃಪೆಯಿಂದೆಲೆ ಹಂಪೆಯಾಳ್ದನೇ ‖ ೫ ‖

ತೆರೆಮಸಗಲ್ ಸುಖಾಶ್ರುವಿದಿರೇರುತಿರಲ್ ಪುಳಕಂ ಬೆಮರ್ ಕರಂ
ಪರಿಯಿಡೆ ಗದ್ಗದಂ ಸುಳಿಗೊಳುತ್ತಿರೆ ಕಂಪನಮುರ್ಕಿ ಲೀಲೆಯೊ-
ತ್ತರಿಸುತಿರಲ್ ನವೀನ ನಿಜಭಕ್ತಿರತಂಗಿಣಿ ಮೀರುತುಬ್ಬರಂ-
ಬರಿಯುತುಮೆನ್ನ ಮೇಲೆ ಮಡುಗಟ್ಟುವುದೆಂದೆಲೆ ಹಂಪೆಯಾಳ್ದನೇ ‖ ೬ ‖

ನಡೆತಂದೆನ್ನಯೆ ಕಣ್ಗಳಲ್ಲಿರು ವಿರೂಪಾಕ್ಷಾ ವಿರೂಪಾಕ್ಷ ನೀಂ
ಬಿಡದಂತೆನ್ನಯೆ ಜಿಹ್ವೆಯಲ್ಲಿರು ವಿರೂಪಾಕ್ಷಾ ವಿರೂಪಾಕ್ಷ ನೀಂ
ಎಡೆಗೊಂಡೆನ್ನಯೆ ಚಿತ್ತದಲ್ಲಿರು ವಿರೂಪಾಕ್ಷಾ ವಿರೂಪಾಕ್ಷ ನೀಂ
ಇಡಿದಂತೆನ್ನೊಳೆ ಕೂಡಿ ನಿಲ್ಲೆಲೆ ವಿರೂಪಾಕ್ಷಾ ವಿರೂಪಾಕ್ಷನೇ ‖ ೭ ‖

ನೋಡದ ಕಣ್ಗಳೇಕೆ ಸಲೆ ಕೇಳದ ಕರ್ಣಮದೇಕೆ ಭಕ್ತಿಯಿಂ
ಪಾಡದ ಬಾಯದೇಕೆ ಪೆಸರ್ಗೊಳ್ಳದ ಜಿಹ್ವೆಯದೇಕೆ ಪೂಜೆಯಂ
ಮಾಡದ ಕೈಗಳೇಕೆ ನೆರೆ ಸೋಂಕದ ದೇಹಮದೇಕೆ ಕೂಡಿಯ-
ಳ್ಕಾಡದ ಚಿತ್ತವೇಕೆನಗೆ ಹಂಪೆಯಲಿಂಗವೆ ನಿಮ್ಮೊಳಳ್ಕರೆಂ
‖ ೮ ‖

ಎಂದುಂ ನಿಮ್ಮೊಳೆಲೇ ಮಹೇಶನೆ ಮನಂ ಬಂದಂತೆ ಚಿಂತಿಪ್ಪ ಕಣ್-
ಬಂದಂತೀಕ್ಷಿಪ ಜಿಹ್ವೆ ಬಂದ ತೆರದಿಂ ಬಣ್ಣಿಪ್ಪ ಮೈಯ್ಯುರ್ಬಿನಿಂ
ಬಂದಂತಾಂ ಪುಳಕಿಪ್ಪ ಕೈಗಳೆನಿತುಂ ಬಂದಂತೆ ಪೂಜಿಪ್ಪ ಕಾಲ್-
ಬಂದಂತಾಡುವ ಸೈಪು ಸಾರ್ವುದೆನಗಿನ್ನೆಂದೋ ವಿರೂಪಾಕ್ಷನೇ‖ ೯ ‖
ಇದು ಚಿತ್ರಂ ವರಮಂತ್ರಸಂತತಿ ವಿರೂಪಾಕ್ಷಂ ವಿರೂಪಾಕ್ಷನೆಂ