ಜಿಸುವೀಶಪ್ರಭುವೀತನೀತನೆ ವಿರೂಪಾಕ್ಷಂ ಲಲಾಟೇಕ್ಷಣಂ"
‖ ೨೮ ‖
ಜಿತಪುಷ್ಪಾಯುಧನೀತನೀತನೆ ಸರೋಜಾತಾಕ್ಷ ವಾಣೀಶವ-
ದಿತ ಸರ್ವೇಶ್ವರನೀತನೀತನೆ ಸಹಸ್ರಾಕ್ಷಪ್ರಮುಖ್ಯಾಮರಾ-
ರ್ಚಿತಪಾದಾಂಬುಜನೀತನೀತನೆ ಕಪಾಳಾಭೀಳಮಾಳಾವಿಮಂ-
ಡಿತವಕ್ಷಃಸ್ಥಳನೀತನೀತನೆ ವಿರೂಪಾಕ್ಷಂ ಲಲಾಟೇಕ್ಷಣಂ
‖ ೨೯ ‖
ನತದೇವಾಧಿಪನೀತನೀತನೆ ವಿರಿಂಚೋಪೇಂದ್ರಮಧ್ಯಸ್ಥಿತೋ-
ದ್ಧತಲಿಂಗೋದ್ಭವನೀತನೀತನೆ ಸಹಸ್ರಾಂಶುಪ್ರಮುಖ್ಯರ್ಕಳು-
ನ್ನತತೇಜೋನಿಧಿಯೀತನೀತನೆ ಪರಂಜ್ಯೋತಿಸ್ವರೂಪಪ್ರಕಾ-
ಶಿತಪುಣ್ಯೋದಯನೀತನೀತನೆ ವಿರೂಪಾಕ್ಷಂ ಲಲಾಟೇಕ್ಷಣಂ
‖ ೩೦ ‖
ತ್ರಿಜಗತ್‌ಪೂಜಿತನೀತನೀತನೆ ಸುರರ್ ಕೊಂಡಾಡೆ ದಿವ್ಯಾಸ್ತ್ರಮಂ
ವಿಜಯಂಗಿತ್ತವನೀತನೀತನೆ ಮನಂ ಮುಟ್ಟಿರ್ಪ ನಿಷ್ಕಾಮಭ
ಕ್ತಜನಕ್ಕಾಶ್ರಯನೀತನೀತನೆ ಲಸತ್ ಸಾಮರ್ಥ್ಯದಿಂದಂ ಶಿರೋ-
ವ್ರಜಮಂ ತಾಳ್ದವನೀತನೀತನೆ ವಿರೂಪಾಕ್ಷಂ ಲಲಾಟೇಕ್ಷಣಂ
‖ ೩೧ ‖
ವೇದಕ್ಕುನ್ನತನೀತನೀತನೆ ಹರಿಬ್ರಹ್ಮಾದಿಗಳ್ ಮಾಳ್ಪ ಸಂ-
ವಾದಕ್ಕಗ್ಗಳನೀತನೀತನೆ ಶರಣ್ಬೊಕ್ಕಿರ್ದ ಭಕ್ತಾಳಿಯಂ
ಕಾದುಂ ರಕ್ಷಿಪನೀತನೀತನೆ ಗಣವ್ರಾತಕ್ಕೆ ತಾಯ್ತಂದೆ ತಾ-
ನಾದಾ ಶಂಕರನೀತನೀತನೆ ವಿರೂಪಾಕ್ಷಂ ಲಲಾಟೇಕ್ಷಣಂ
‖ ೩೨ ‖
ಶ್ರೀ ಗಂಗಾಧರನಂ ಶಶಾಂಕಶಿಖಿಮಾರ್ತಂಡತ್ರಿಣೇತ್ರಾಂಕನಂ
ಪುಟ:ಶತಕ ಸಂಪುಟ.pdf/೬೬
ಗೋಚರ
ಈ ಪುಟವನ್ನು ಪ್ರಕಟಿಸಲಾಗಿದೆ
೨೬
ಶತಕ ಸಂಪುಟ