ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೬೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೨೭


ಭೋಗೀಂದ್ರಾರ್ಚಿತನಂ ರತೀಶವಿಪಿನಪ್ರೋದ್ಭೂತದಾವಾಗ್ನಿಯಂ
ಯೋಗಿವ್ರಾತಪರೀತನಂ ಶರಣಹೃದ್ರಾಜೀವಸಪ್ತಾಶ್ವನಂ
ನಾಗೇಂದ್ರಾಜಿನದಿವ್ಯವಸ್ತ್ರಧರನಂ ಕಂಡೆಂ ವಿರೂಪಾಕ್ಷನಂ
‖ ೩೩ ‖

ಹರನಂ ಶಂಕರನಂ ಶಶಾಂಕಧರನಂ ಕಾಪಾಲಿಯಂ ಕಾಲಸಂ-
ಹರನಂ ಶೂಲಿಯನೀಶನಂ ಗಿರಿಶನಂ ಭಾಳಾಕ್ಷನಂ ನೀಲಕಂ-
ಧರನಂ ಭರ್ಗನನುಗ್ರನಂ ಪರಮನಂ ಸರ್ವಜ್ಞನಂ ಶಂಭುವಂ
ಗಿರಿಜಾವಲ್ಲಭನಂ ಮನೋಜಹರನಂ ಕಂಡೆಂ ವಿರೂಪಾಕ್ಷನಂ‖ ೩೪ ‖

ಎನ್ನಾನಂದಸುಧಾಬ್ಧಿವರ್ಧನಕಳಾಸಂಪನ್ನನಂ ಚೆನ್ನನಂ
ಮುನ್ನಾರುಂ ನೆರೆ ಕಾಣಬಾರದ ಲಸತ್ ಕಾಪಾಲಿಯಂ ಶೂಲಿಯಂ
ಭಿನ್ನಾಭಿನ್ನಮೆನಲ್ಕೆ ತೋರಿದ ಮಹಾನಿಸ್ಸೀಮನಂ ಭೀಮನಂ
ಚೆನ್ನಂಗಂದುರಿ ತನ್ನನಿತ್ತಭವನಂ ಕಂಡೆಂ ವಿರೂಪಾಕ್ಷನಂ
‖ ೩೫ ‖

ಆನಂದಾಮೃತವಾರ್ಧಿಯಂ ಕೃಪೆಯೊಳೆನ್ನಂ ತೊಳ್ತುಗೊಂಡಾಳ್ದನಂ
ನಾನಾದೇವಕಿರೀಟಕೋಟಿವಿಲಸತ್ ಪಾದಾಬ್ಜನಂ ಭೃತ್ಯಸಂ-
ತಾನಾಂಬೋಧಿಸುಧಾಂಶುವಂ ದುರಿತಘೋರಧ್ವಾಂತಮಾರ್ತಾಂಡನಂ
ಭಾನುಜ್ಯೋತಿಗತರ್ಕ್ಯಕಾಂತಿಯುತನಂ ಕಂಡೆಂ ವಿರೂಪಾಕ್ಷನಂ‖ ೩೬ ‖

ಅದೆ ನಾಗಾಸುರನುದ್ಛಚರ್ಮವದೆ ಮೇಣ್ ವ್ಯಾಘ್ರಾಸುರಾಕೃತ್ತಿ ನೋ-
ಡದೆ ನಾರಾಯಣನೊಂದು ದೇಹವದೆ ತನ್ನೇತ್ರಂ ಸುರೇಂದ್ರಾದಿಗಳ್
ಬೆದರಲ್ಕಪ್ರತಿಮಪ್ರತಾಪನಿಧಿಯುಟ್ಟಂ ತೊಟ್ಟನಾರ್ದೆತ್ತಿದಂ
ಪದದೊಳ್ ಪತ್ತಿಸಿ ಬಾಳ್ದ ಭಾಪುರೆ ವಿರೂಪಾಕ್ಷಂ ಲಲಾಟೇಕ್ಷಣಂ ‖ ೩೭ ‖

ಗಣನೆಗೆ ಜಿಹ್ವೆಯುಂಟೆನಿಪ ಗರ್ವದೆ ಸಾವರನೋವಿ ದೇವರೆಂ-
ದೆಣಿಸದಿರಣ್ಣ ಹಂಪೆಯರಸಂ ನಿಟಿಲಂದೆರಿಯಲ್ ಬಳಿಕ್ಕದೆ-