ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೭೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೩೩


ಇವನಂ ನೋಡಿದ ಕಣ್ಗೆ ಮತ್ತೆ ಕೆಲವುಂ ರೂಪೇ ವಿರೂಪಾಕ್ಷನೆಂ-
ಬವನಂ ಮುಟ್ಟಿದ ಕೈಗೆ ಮತ್ತೆ ಕೆಲವುಂ ಮೆಯ್ಯೇ ಪೆಸರ್ಗೇಳ್ದ ಮ-
ಚ್ಭ್ರವಣಕ್ಕಕ್ಕಟ ನೋಡೆ ಮತ್ತೆ ಕೆಲವುಂ ನಾಮಂಗಳೇ ಸ್ತೋತ್ರಮಂ
ಸವಿವಾ ನಾಲಗೆಗೊರ್ಮೆ ಮತ್ತೆ ಕೆಲವುಂ ಮಾಣ್ ಮಾಣು ಶಬ್ದಂಗಳೇ ‖ ೬೧


ಮೃಡನಿರ್ದಂತಿರೆ ಕೋಟಿಕೂಟಕುಳದೈವಕ್ಕಾಸೆಯಂ ಮಾಡಿ ನೀಂ
ಕಿಡದಿರ್ ಮಾನವ ಬೇಡ ಬೇಡೆಲೆಲೆ ಪೂಣ್ಗೊಂಡಕ್ಕಟಾ ಸಾರಿದೆಂ
ನಡೆನೋಡರ್ಚಿಸು ಕೀರ್ತಿಸಾದರಿಸು ಪೆರ್ಚಾನಂದದಿಂ ಬೇಡು ಬ-
ಲ್ವಿಡಿ ನಂಬೀಗಳೆ ನಚ್ಚು ಮಚ್ಚು ನಲವಿಂದೆಂದುಂ ವಿರೂಪಾಕ್ಷನಂ ‖ ೬೨ ‖

ಸಾಲದೆ ನಿನ್ನ ಚಂಚಲತೆ ಸಾಲದೆ ನಿನ್ನ ಮದೋದ್ದತಾಗುಣಂ
ಸಾಲದೆ ನಿನ್ನ ದುರ್ಮಮತೆ ಸಾಲದೆ ನಿನ್ನ ತಮೋವಿವರ್ಧನಂ
ಸಾಲದೆ ನಿನ್ನ ದುಷ್ಪಕೃತಿ ಸಾಲದೆ ನಿನ್ನ ದುರಾಶೆಯುಜ್ಜುಗಂ
ಸಾಲದೆ ಮೋಹದಿಂಪು ಮನವೇ ನೆನೆ ಹಂಪೆಯ ದೇವರಾಯನಂ ‖ ೬೩ ‖

ಅಕ್ಷಯಸಂಪದಂ ಕಿಡದ ಕೀರ್ತಿಯನೂನಪರಾಕ್ರಮಂ ಧರಾ
ಈಕ್ಷಣಶಕ್ತಿ ದರ್ಪಕನನೇಳಿಪ ರೂಪಿನಿತೆಲ್ಲವಣ್ಣ ಕೇಳ್
ಈಕ್ಷಣದಿಂದೆ ಬರ್ಪುವೆಲೆ ಮಾನವ ನಂಬಿಯಹರ್ನಿಶಂ ವಿರೂ-
ಪಾಕ್ಷನನರ್ಚಿಸುನ್ನತನನರ್ಚಿಸಜಾತನನರ್ಚಿಸಳ್ಕರಿಂ

‖ ೬೪ ‖

ಬಿಡು ಕರ್ಮ೦ ದೈವಮೆಂದೆಂಬವರಳಿನುಡಿಯಂ ಬ್ರಹ್ಮರೊಳ್ ದಕ್ಷನೆಂಬಂ
ಮೃಡನೇಕೆಂದೆಲ್ಲರಂ ಬಲ್ಲರನೆ ನೆರಪಿ ಕೊಂಡಾಡಿದಾ ಯಜ್ಞ ಕರ್ಮ೦
ಗಡ ಭಸ್ಮೀಭೂತವೇನಾಗದೆ ಸುಡು ಸುಡು ಮತ್ತಂ ವೃಥಾಕರ್ಮಮೆಂದು-
ಗ್ಗಡಿಸಲ್ವೇಡೊಲ್ದು ಬೇಡೆಮ್ಮಭವನನೊಸೆದೀವಂ ವಿರೂಪಾಕ್ಷಲಿಂಗಂ ‖ ೬೫ ‖

ಬಿಡು ಮಾಣ್ ಮಾಣೆಲೆ ಬೊಮ್ಮವಾದಿ ಮೊಲೆಯೊಳ್ ಕೇಳ್ ನಂಬಿಗೋ ಎನ್ನನೇ