ಮ್ಮನೆ ಕೆಡಬೇಡ ಬೇಡ ಭರದಿಂ ಸಲೆ ಮಚ್ಚೆಲೆ ಮಚ್ಚು ಮಚ್ಚು ವಂ-
ಚನೆಗಿಡೆ ನಚ್ಚು ನಚ್ಚು ಮಿಗೆ ಬಲ್ವಿಡಿ ಬಲ್ವಿಡಿ ಹಂಪೆಯಾಳ್ದನಂ‖ ೭೧ ‖
ಭರದಿಂ ಲಿಂಗಾರ್ಚನಂ ಮಾಡುವ ಶಿವಕುಲವೊಂದೇ ಶಿವಾಚಾರಮಂ ಸ-
ದ್ಗುರುದೇವನಂ ಪೇಳ್ದನೆಂತೆಂತವರವರೊಲವಿಂ ಸ್ವೇಚ್ಛೆಯಿಂ ಶರ್ವನಂ ಶಂ-
ಕರನಂ ಸರ್ವೇಶನಂ ಪೂಜಿಸುವುದರೊಳೆಯಂತಾಯಿತಿಂತಾಯಿತೆಂದೆ-
ಲ್ಲರುಮೆಂದಾಪೇಕ್ಷೆಯಿಂ ನೀಂ ಕಿಡದೆ ನೆನೆ ವಿರೂಪಾಕ್ಷನಂ ಕಾಂಕ್ಷೆಯಿಂದಂ ‖ ೭೨
‖
ಗುರುಮತದಿಂ ಶ್ರುತಿಸ್ಮೃತಿಮತಂಗಳಿನಿಷ್ಟಮತಂಗಳಿಂದಮಾ-
ದ್ಯರ ಮತದಿಂದೆ ನೀನೊಡೆಯನೆಂದರಿದೀಶ್ವರ ನಿಮ್ಮನರ್ಚಿಸು-
ತ್ತಿರದಿರದೆಲ್ಲರೊಳ್ ಮಥಿಸಿ ತರ್ಕಿಸಿ ನೋಯಿಸಿ ನೋಯುತುಂ ವೃಥಾ
ನೆರಮನೆಗಳ್ತು ಕಣ್ಗಿಡುವರೇಂ ಮರುಳ್ಗೊಂಡರೊ ಹಂಪೆಯಾಳ್ದನೇ ‖ ೭೩ ‖
ತೆಗೆ ತೆಗೆ ಮಿಕ್ಕ ಕೂಟಕುಳಿದೇವರನಾವಗ೧ಮುರ್ಕಿದಳ್ಕರಿಂ೧
ಬಗೆ ಬಗೆ ಚಂದ್ರಚೂಡನ ಪದಾಂಬುಜಮಂ ಮನವಾರೆ ಭಕ್ತಿಯಿಂ-
ದಗಿದಗಿದಂಗದೊಳ್ ಪುಳಕವೇಳ್ತರಲೆಳ್ದು ಪೊರಳ್ದು ಲೀಲೆಯಿಂ
ನೆಗೆನೆಗೆದಾಡಿ ಮೆಯ್ಮರೆದು ಪೂಜಿಸು ಮಾನವ ಹಂಪೆಯಾಳ್ದನಂ‖ ೭೪
‖
ಇದು ದಲಪೂರ್ವಮೀ ಮನುಜಜನ್ಮದೊಳುದ್ಭವಿಸಿರ್ದು ಮೂಗನಾ
ಗದೆ ಸಲೆಯಂಧನಾಗದಿರೆ ಪಂಗುಳನಾಗದೆ ಕೂನದೇಹನಾ
ಗದೆ ವಿಕಟಾಂಗನಾಗದೆ ಕಿವುಂಡನೆಯಾಗದೆ ಹೀನವರ್ಣನಾ
ಗದೆ ಮೆರೆವಲ್ಲಿ ಪೂಜಿಸು ಮಹೋತ್ಸವದಿಂದೆಲೆ ಹಂಪೆಯಾಳ್ದ೨ನಂ೨ | ೭೫ ‖
ಆರುತುಮರ್ಚಿಸುಬ್ಬರಿಸುತರ್ಚಿಸು ಮತ್ತೊಲೆಯುತ್ತುಮರ್ಚಿಸಿಂ-
ಪೇರುತುಮರ್ಚಿಸುನ್ನತಿಯೊಳರ್ಚಿಸು ಕೊರ್ವುತುಮರ್ಚಿಸೆಲ್ಲರೊಳ್
ಪೋರುತುಮರ್ಚಿಸೀ ಜನನಮಂ ಪಡೆದಲ್ಲಿ ಮನುಷ್ಯ ಏನುಮಂ
ಪುಟ:ಶತಕ ಸಂಪುಟ.pdf/೭೫
ಗೋಚರ
ಈ ಪುಟವನ್ನು ಪ್ರಕಟಿಸಲಾಗಿದೆ
೩೫