ಪುಟ:ಶತಕ ಸಂಪುಟ.pdf/೭೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ
೩೯


ಬಗೆವೊಡೆ ಭಕ್ತನೊರ್ವನದರೊಳ್ ನೆರೆ ಸತ್ಯಮನಾಡಲಾತನೇ
ಪಗೆಯೆನಿಸಿರ್ಪುದೇಕೆನಲಸತ್ಯಮೆ ತಾಂ ಪಿರಿದಾಗೆಯಂತದಂ
ಬಗೆಯದೆ ಸತ್ಯಮಂ ನುಡಿಯುತರ್ಚಿಸು ಮಾನವ ಹಂಪೆಯಾಳ್ದನಂ‖ ೯೩ ‖

ಹರಿಯಂ ಕೃಷ್ಣಾವತಾರಾಂತ್ಯದೊಳೆ ಶಬರನುಂ ಕಾಲನೆಚ್ಚಲ್ಲಿ ಪೋಗಲ್
ಹರಣಂ ಕೊಂಡಾಡುತಿರ್ಪರ್ ಕೆಲಬರವನನಾ ವಿಷ್ಣುದೇಹಂಗಳಂ ಶಂ-
ಕರನುಟ್ಟಂ ತೊಟ್ಟನೆಂದೀ ಶರಣರೆನೆ ಕರಂ ಕಾಯ್ವರಯ್ಯೋ ವಿವೇಕ೦
ಪರಮಾಣ೦ ಪುಟ್ಟದೀ ಶಾಪಹತರ ನುಡಿಯೇವಾಳ್ತೆ ಪಂಪಾಧಿನಾಥಾ‖ ೯೪ ‖

ಹರಿನಯನಾರ್ಚಿತಾಂಘ್ರಿಯುಗಳಂ ಹರಿ ವೇಮನಿಕಾಯ ಭೂಷಣಂ
ಹರಿಹರನೆಂದು ನಿನ್ನ ನಿಜಕೀರ್ತನೆಯಂ ಶರಣಾಳಿ ಕೂಡೆ ಡಂ-
ಗುರಿಸುತೆ ಸತ್ಯಮಂ ನುಡಿಯೆ ಸೇರದು ಶಾಪಹತರ್ಗೆ ನಿಂದೆಯಂ-
ತರ ಸಲುತಿರ್ಪುದಿಂತಿವರ ಪಾಪಮಿದಚ್ಚರಿ ಹಂಪೆಯಾಳ್ದನೇ
‖ ೯೫ ‖

ಪುಸಿಯಂ ಪೇಳ್ವುದೆ ನಿಂದೆ ಸತ್ಯಮೆ ಕರಂ ಸ್ತೋತ್ರಂ ಹರಂ ಮಾಡಿತಂ
ಪುಸಿಯಲ್ಲಂತದರಿಂದೆ ವಿಷ್ಣುನಯನಾಂಭೋಜಾರ್ಚಿತಂ ವಿಷ್ಣು ಸಂ-
ವಸನಂ ವಿಷ್ಣು ಶರೀರಶೂಲಧರನಾ ವಿಷ್ಣುಪ್ರದಂ ಭಾಪು ವಿ-
ಷ್ಣುಶಿರೋವೇಷ್ಟನನಿಂತು ಸಂಸ್ತುತಿಯಿಪೆಂ ಪಂಪಾವಿರೂಪಾಕ್ಷನಂ‖ ೯೬ ‖

ಕೇಳೆಲೆ ವೈಷ್ಣವಾದಿಗಳೆ ನಿಮ್ಮ ನೃಸಿಂಹನನಂದು ಕಾಣುತುಂ
ಕಾಳೆಗದಲ್ಲಿಯೆಮ್ಮ ಶರಭಂ ನುಡಿದೇನದನಕ್ಕಟಾ ನಿರೋ-
ಧಾಳಿಯನಿನ್ನುಮೊಂದನೆಲೇ ಪೇಳ್ವೆನೆ ದಕ್ಷನ ಯಾಗದಲ್ಲಿ ಚಿಃ
ಪೇಳಲದೇಕೆ ದೇವನಣುಗಂ ನಿಮಗೊಡ್ಡಿದ ಭಂಗಮೆಲ್ಲಮಂ
‖ ೯೭ ‖

ಸಡಿ ಫಡ ಮಾನವರ್ ಕುಡುವರೆಂಬುದನಾಡದಿರೆನ್ನ ಮುಂದೆ ಕ–
ಪ್ಪಡದ ಶರೀರಿಗಳ್ ತೃಣದ ಹಾಹೆಗಳಕ್ಕಟ ಮಣ್ಣ ಬೊಂಬೆಗಳ್