ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೮೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೪೦
ಶತಕ ಸಂಪುಟ


ಕುಡುವುವೆ ಬೇಡು ಬೇಡೊಲಿದುದೀವ ಮಹಾನಿಧಿಯಂ ಮಹೇಶನಂ
ಮೃಡನನನೂನದಾನಿಯನಲಂಪಿನ ಪೆಂಪಿನ ಹಂಪೆಯಾಳ್ದನಂ‖ ೯೮ ‖
ಎರಗುವೆನೆನ್ನ ಹಂಪೆಯರಸಂಗೆ ಹರಂಗೆ ಶಿವಂಗೆ ಮಿಕ್ಕಿನ-
ರ್ಗೆರಗುವೊಡುಂಟೆ ಪಂಚಮುಖಮುಂಟೆ ಗಜಾಜಿನಮುಂಟೆ ಪತ್ತುತೋಳ್
ಕರೆಗೊರಲುಂಟೆ ಕೆಂಜಡೆಗಳುಂಟೆ ಮರುನ್ನದಿಯುಂಟೆ ಭಾಳದೊಳ್
ಮಿರುಗುವ ನೇತ್ರಮುಂಟೆ ಶಶಿಯುಂಟೆ ವೃಷಧ್ವಜಮುಂಟೆ ದೇವರೊಳ್‌‖ ೯೯


ಜಯಜಯ ಪುಣ್ಯಮಾರ್ಗಮಿದು ಸಾತ್ತ್ವಿಕ ಲಕ್ಷಣಮಿಂತಿದಾದ್ಯರ
ನ್ವಯಮಿದನೂನಭಕ್ತಿರಸಪೂರಮಿದುತ್ತಮಶೀಲಭಕ್ತರಾ-
ಶ್ರಯಮಿದು ತಪ್ಪದೆಂದು ಶರಣರ್ ಮಿಗೆ ಬಣ್ಣಿಸೆ ಪೇಳ್ದನಾಹ ಹಂ-
ಪೆಯ ಹರಿದೇವನೀ ಶತಕಮಂ ಸಕಲೇಷ್ಟಫಲಪ್ರದಾತೃವಂ‖ ೧೦೦


 * * *

ಆಹಾ ಕಷ್ಟಮನೇನ ಬಣ್ಣಿಪೆನದಂ ಸಂಸಾರದಾಯಾಸಮಂ
ಬಾ ಹೋಗೆಂಬರನಾಸೆ ಮಾಡಿ ಪರರಂ ಕೊಂಡಾಡಿ ಬೇಸತ್ತೆನೀ
ದೇಹಕ್ಕೋಸ್ಕರ ದೈನ್ಯಬಟ್ಟೆನಕಟಾ ನೀನಲ್ಲದನ್ಯತ್ರರಂ
ದೇಹೀ ಎಂಬುದ ಮಾಣಿಸೆನ್ನನುಳುಹಾ ಪಂಪಾಪುರಾಧೀಶ್ವರಾ" ‖ ೧೦೧ ‖

ಮೃಡ ನೀಂ ಕಲ್ಲೊಳಗೇಕೆ ಪೊಕ್ಕುಸುರದಿಂತಿರ್ದಪ್ಪೆ ಭಕ್ತರ್ಗೆ ನೀಂ
ಕೊಡೆನಿನ್ನಿಲ್ಲೆನೆ ಸಾಲದೇನಡಗಲೇಕಿಲ್ಲೆಂಬುದಂ ಒಲ್ಲೆವಿ-
ಟ್ಟೊಡಲಿಂಗಿಲ್ಲದೆ ಮೇಣ್ ಪರಾನ್ನದುಣಿಸಿಂ ದಾರಿದ್ರ ನೀನಾವಗಂ
ಬಡವಂ ಬಲ್ಲೆವು ಬೇಡೆವಂಜದಿರೆಲೇ ಪಂಪಾಪುರಾಧೀಶ್ವರಾ"‖ ೧೦೨ ‖

ವಾದಿನ್ನೇಕಬ್ಧಿಯೊಳ್ ಪುಟ್ಟಿದ ಘನಗರಳಂ ಬೆಂಕೊಳಲ್ ಪಕ್ಕೆಗೊಂಡೆ-
ಲ್ಲಾ ದೇವರ್ ಕಾವರಿಲ್ಲೆಂದಭವ ಭವತು ಪಾದಾಬ್ಜದೊಳ್ ಬೀಳೆ ನಂಜುಂ-