ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೮೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೪೧


ಡಾದಂ ಮೈದೋರಿ ಕೂರ್ಪಿ೦ ಸರಸತಿ ಮುಂತಾದರಿಟ್ಟೋಲೆಗಾದಾ
ಮಾದೇವಂ ನೀನೆ ಮತ್ತಾರ್ ತ್ರಿಭುವನವಿಭು ಪಂಪಾವಿರೂಪಾಕ್ಷಲಿಂಗಾ"‖ ೧೦೩


 * *



 *
ಸೋಮೇಶ್ವರಶತಕ

ಶ್ರೀಮತ್ಕೈಲಾಸವಾಸಂ ಸ್ಮಿತಮೃದುವಚನಂ ಪಂಚವಕ್ತ್ರಂ ತ್ರಿಣೇತ್ರಂ
ಪ್ರೇಮಾಬ್ಧೀಪೂರ್ಣಕಾಯಂ ಪರಮಪರಶಿವಂ ಪಾರ್ವತೀಶಂ ಪರೇಶಂ
ಧೀಮಂತಂ ದೇವದೇವಂ ಪುಲಿಗೆರೆನಗರೀ ಶಾಸನಾ೦ಕಂ ಮೃಗಾಂಕ೦
ಸೋಮೇಶಂ ಸರ್ಪಭೂಷಂ ಸಲಹುಗೆ ಜಗಮಂ ಸರ್ವದಾ ಸುಪ್ರಸನ್ನಂ‖ ೧


ಕೆಲವಂ ಬಲ್ಲವರಿಂದೆ ಕಲ್ತು ಕೆಲವಂ ಶಾಸ್ತ್ರಂಗಳಿಂ ಕೇಳಿ ತಾಂ
ಕೆಲವಂ ಮಾಳ್ಪವರಿಂದೆ ಕಂಡು ಕೆಲವಂ ಸ್ವಜ್ಞಾನದಿಂ ನೋಡುತಂ
ಕೆಲವಂ ಸಜ್ಜನ ಸಂಗದಿಂದಲರಿಯಲ್ ಸರ್ವಜ್ಞನಪ್ಪಂತೆ ಕೇಳ್
ಪಲವುಂ ಪಳ್ಳ ಸಮುದ್ರವೈ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೨ ‖

ಅದರಿಂ ನೀತಿಯೆ ಸಾಧನಂ ಸಕಲಲೋಕಕ್ಕೆಲ್ಲ ಬೇಕೆಂದು ಪೇ-