ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೮೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೪೨
ಶತಕ ಸಂಪುಟ


ಳಿದ ಸೋಮಂ ಸುಜನರ್ಕಳೀ ಶತಕದೊಳ್ ತಪ್ಪಿರ್ದೊಡಂ ತಿದ್ದಿ ತೋ-
ರ್ಪುದು ನಿಮ್ಮುತ್ತಮ ಸದ್ಗುಣಂಗಳ ಜಗದ್ವಿಖ್ಯಾತಮಂ ಮಾಳ್ಪುದುಂ
ಮುದದಿಂ ನಿಮ್ಮವನೆಂಬುದೈ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೩ ‖
ಮುಕುರಂ ಕೈಯೊಳಿರಲ್ಕೆ ನೀರನೆಳಲೇಕೈ ಕಾಮಧೇನಿರ್ದುಮೂ-
ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್‌ ಪಾಲುಂಡು ಮೇಲುಂಬರೇ
ಶುಕನೋದಿಂದತಿ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ
ಸಖರಿಂದುನ್ನತ ವಸ್ತುವೇ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೪ ‖

ಸವಿವಣ್ಣಲ್ಲಿನಿಮಾವು ಸರ್ವರಸದೊಳ್ ಶೃಂಗಾರ ಸಂಭಾರದೊಳ್
ಲವಣಂ ಭಾಷೆಗೆ ಬಾಲಭಾಷೆ ಸಿರಿಯಲ್ಲಾರೋಗ್ಯ ದೈವಂಗಳೊಳ್
ಶಿವ ಬಿಲ್ಲಾಳಿನೊಳಂಗಜಂ ಜನಿಸುವಾ ಜನ್ಮಂಗಳೊಳ್ ಮಾನವಂ
ಕವಿತಾವಿದ್ಯೆ ಸುವಿದ್ಯೆಯೊಳ್ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೫ ‖

ಕವಿಯೇ ಸರ್ವರೊಳುತ್ತಮಂ ಕನಕವೇ ಲೋಹಂಗಳೊಳ್ ಶ್ರೇಷ್ಠ ಜಾ-
ಹ್ನವಿಯೇ ತೀರ್ಥದೊಳುನ್ನತಂ ರತುನದೊಳ್ ಸ್ತ್ರೀರತ್ನಮೇ ವೆಗ್ಗಳಂ
ರವಿಯೇ ಸರ್ವಗ್ರಹಂಗಳೊಳ್ ರಸಗಳೊಳ್ ಶೃಂಗಾರವೇ ಬಲ್ಮೆ ಕೇಳ್
ಶಿವನೇ ದೈವ ಜಗಂಗಳೊಳ್ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೬ ‖

ರವಿಯಾಕಾಶಕೆ ಭೂಷಣಂ ರಜನಿಗಾ ಚಂದ್ರಂ ಮಹಾಭೂಷಣಂ
ಕುವರಂ ವಂಶಕೆ ಭೂಷಣಂ ಸರಸಿಗಂಭೋಜಾತಗಳ್ ಭೂಷಣಂ
ಹವಿ ಯಜ್ಞಾಳಿಗೆ ಭೂಷಣಂ ಸತಿಗೆ ಪಾತಿವ್ರತ್ಯವೇ ಭೂಷಣಂ
ಕವಿಯಾಸ್ಥಾನಕೆ ಭೂಷಣಂ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೭ ‖

ಧರಣೀಶಂ ಧುರಧೀರನಾಗೆ ಧನಮುಳ್ಳಂ ತ್ಯಾಗಿಯಾಗಲ್ ಕವೀ-
ಶ್ವರ ಸಂಗೀತ ಜಾಣನಾಗೆ ಸುಕಲಾಪ್ರೌಢಂಗಂ ಚೆಲ್ವೆ ಕೈಸೇರಲುಂ
ಬರೆವಂ ಧಾರ್ಮಿಕನಾಗೆ ಮಂತ್ರಿ ಚತುರೋಪಾಯಂಗಳಂ ಬಲ್ಲೊಡಂ
ದೊರೆವೋಲ್ ಚಿನ್ನಕೆ ಸೌರಭಂ ಹರಹರಾ ಶ್ರೀ ಚೆನ್ನಸೋಮೇಶ್ವರಾ ‖ ೮ ‖