ವಿಷಯಕ್ಕೆ ಹೋಗು

ಪುಟ:ಶತಕ ಸಂಪುಟ.pdf/೮೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೪೩


ಕುರುಡಂ ಕನ್ನಡಿಯಂ ಕವೀಂದ್ರರ ಮಹಾದುರ್ಮಾರ್ಗಿಗಳ್ ತ್ಯಾಗಿಯಂ
ಬರಡಂ ಬಾಲರ ಮುದ್ದ ಬಂಜೆ ಕಡುಚೋರಂ ಚಂದ್ರನಂ ಕಾವ್ಯದ-
ಚ್ಚರಿಯಂ ಗಾಂಪರು ಪಾಪಿಗಳ್ ಸುಜನರಂ ಮಾಣಿಕ್ಯಮಂ ಮರ್ಕಟಂ
ಜರೆಯಲ್ ಸಿಂಗವ ಕುನ್ನಿಯೇಂ ಹರಹರಾ ಶ್ರೀ ಚೆನ್ನಸೋಮೇಶ್ವರಾ ‖ ೯ ‖
ಹರನಿಂದುರ್ವಿಗೆ ದೈವವೇ ಕಿರಣಕಿಂದುಂ ಬಿಟ್ಟು ಸ್ವಾದುಂಟೆ ಪೆ-
ತ್ತರಿಗಿಂತುಂಟೆ ಹಿತರ್ಕಳುಂ ಮಡದಿಯಿಂ ಬೇರೂಪ್ತರಿನ್ನಿರ್ಪರೇ
ಸರಿಯೇ ವಿದ್ಯೆಕೆ ಬಂಧು ಮಾರನಿದಿರೊಳ್ ಬಿಲ್ಲಾಳೆ ಮೂಲೋಕದೊಳ್
ಗುರುವಿಂದುನ್ನತದೈವವೇ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೧೦ ‖

ಹಿತಮಂ ತೋರುವನಾತ್ಮಬಂಧು ಪೊರೆದಾಳ್ವಂ ತಂದೆ ಪಾತಿವ್ರತಾ
ಸತಿಯೇ ಸರ್ವಕೆ ಸಾಧನಂ ಕಲಿಸಲೊಂದಂ ವರ್ಣಮಾತ್ರಂ ಗುರು
ಶ್ರುತಿಮಾರ್ಗ೦ ಬಿಡದಾತ ಸುವ್ರತಿ ಮಹಾಸದ್ವಿದ್ಯೆ ಪುಣ್ಯಪ್ರಭಾ
ಸುತನೇ ಮುಕ್ತಿಗೆ ಮಾರ್ಗವೈ ಹರಹರಾ ಶ್ರೀ ಚೆನ್ನಸೋಮೇಶ್ವರಾ ‖ ೧೧ ‖

ಪಳಿಯರ್‌ ಪೇಸಿಕೆಯಿಂದ ಪುತ್ರವತಿಯೆಂದೆಂಬರ್‌ ಸದಾ ದೇವತಾ
ಕೆಲಸಂ ಮುಂಜಿ ವಿವಾಹ ಶೋಭನಶುಭಕ್ಕಂ ಯೋಗ್ಯವಂ ನೋಡೆ ಕಂ-
ಗಳ ನೀಡಲ್ ಕುಲಕೋಟಿ ಮುಕ್ತಿದಳೆಗುಂ ಸುಜ್ಞಾನದೊಳ್ ಕೂಡಿದಾ
ಕುಲವೆಣ್ಣಿಂಗೆಣೆಯಾವುದೈ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೧೨


ಪ್ರಜೆಯಂ ಪಾಲಿಸಬಲ್ಲೊಡಾತನರಸಂ ಕೈಯಾಸೆಯಂ ಮಾಡದಂ
ನಿಜಮಂತ್ರೀಶ್ವರ ತಂದೆತಾಯ ಸಲಹಲ್ ಬಲ್ಲಾತನೇ ಧಾರ್ಮಿಕಂ
ಭಜಕ೦ ದೈವದ ಭಕ್ತಿಯುಳ್ಳೊಡೆ ಭಟಂ ನಿರ್ಭೀತ ತಾನಾದವಂ
ದ್ವಿಜನಾಚಾರತೆಯುಳ್ಳವಂ ಹರಹರಾ ಶ್ರೀ ಚೆನ್ನಸೋಮೇಶ್ವರಾ‖ ೧೩ ‖

ಮಳೆಯೇ ಸರ್ವಜನಾಶ್ರಯಂ ಶಿವನೆ ದೇವರ್ಕಳ್ಗೆ ತಾನಾಸ್ಪದಂ
ಬೆಳೆಯೇ ಸರ್ವರ ಜೀವನಂ ಬಡವನೇ ಸರ್ವರ್ಗೆ ಸಾಧಾರಣಂ
ಬಳೆಯೇ ಸರ್ವವಿಭೂಷಣಕ್ಕೆ ಮೊದಲೈ ಪುತ್ರೋತ್ಸವವುತ್ಸವದೊಳ್