ಪುಟ:Duurada Nakshhatra.pdf/೧೦

ವಿಕಿಸೋರ್ಸ್ ಇಂದ
Jump to navigation Jump to search
ಈ ಪುಟವನ್ನು ಪರಿಶೀಲಿಸುವಾಗ ದೋಷ ಕಂಡುಬಂತು


ಮೊದಲ ಮಾತು

'ದೂರದ ನಕ್ಷತ್ರ'ದ ಮೊದಲ ಮುದ್ರಣದ ಮುನ್ನುಡಿಯ ಕೆಲ ಅಂಶಗಳು ಹೀಗಿವೆ:

xxx

ಉಪಾಧ್ಯಾಯರ ಶಾಲಾ ಶಿಕ್ಷಕರು, ಅಧ್ಯಾಪಕರು, ಮಾಸ್ತರರು] ಪೀವನವನ್ನು ಚಿತ್ರಿಸುವ ಸಣ್ಣ ಕತೆ, ಕಾದಂಬರಿ, ಏಕಾಂಕ ನಾಟಕಗಳು ಕನ್ನಡದಲ್ಲಿ ಈಗಾಗಲೇ ಪ್ರಕಟವಾಗಿವೆ....

...ಇಷ್ಟಿದ್ದರೂ ವಿದ್ಯಾಕ್ಷೇತ್ರದಿಂದಲೇ ಈ ಕಾದಂಬರಿಗೆ ವಸ್ತುವನ್ನು ಆಯ್ದುಕೊಂಡಿದ್ದೇನೆ. ಇದಕ್ಕೆ ಕಾರಣ, ಆ ಕ್ಷೇತ್ರದ ವೈಶಾಲ್ಯ. ಈ ಕಾದಂಬರಿಯೊಂದಕ್ಕೇ ಅಲ್ಲ, ಇನ್ನಷ್ಟು ಕೃತಿಗಳಿಗೂ ಆ ಕ್ಷೇತ್ರ ವಸ್ತುವಾಗಿರುವುದರಲ್ಲಿ ಸಂದೇಹವಿಲ್ಲ.

ತಿ, ಹಲವು ಉಪಾಧ್ಯಾಯರೊಡನೆ ನನ್ನ ಒಡನಾಟದ ಹಾಗೂ ನ ಸೂಕ್ಷ್ಮ ನಿರೀಕ್ಷಣೆಯ ಫಲ, ನನ್ನ ಪಾತ್ರಗಳು ಜೀವಂತ ವ್ಯಂಗ್ಯ ಚಿತ್ರಗಳಲ್ಲ, ಅಥವಾ ಪ್ರತಿರೂಪಗಳೂ ಅಲ್ಲ, ವಾಸ್ತ .೦ಚದಿಂದ ಈ ಕಾಲ್ಪನಿಕ ಚಿತ್ರಗಳನ್ನು ಬರೆದಿದ್ದೇನೆ. ವಿದ್ಯಾ ಸಮಸ್ಯೆಯ ಹಿನ್ನೆಲೆಯಲ್ಲಿ ಮಾನವೀಯವಾದ ಕಥೆಯನ್ನು ಬರೆಯಲು ಯತ್ನಿಸಿದ್ದೇನೆ.

ಇತ್ತೀಚೆಗೆ, ದೂರದ ನಕ್ಷತ್ರ'ವನ್ನು ನಾನು ಬರೆಯುತ್ತಿದಾಗಲೆ; ಬೆಂಗಳೂರಲ್ಲಿ ಮೈಸೂರು ಸಂಸ್ಥಾನದ ಪಾಥಮಿಕ, ಮಾಧ್ಯಮಿಕ, ಹೈಸ್ಕೂಲು ಉಪಾಧಾಯರೆಲ್ಲರ ಸಮ್ಮೇಳನ ಜರುಗಿತು. ಹಿರಿಯ ವಿದ್ಯಾ? తె రేణబ్బరి ಆಹಾನದ ಮೇರೆಗೆ, ಸಂದರ್ಶಕನಾಗಿ ಹೋಗಿ ಉಪಾಧಾ ಯರ ಜತೆಯಲ್ಲಿ ಕುಳಿತು, ವಿಧವಿಧದ ಭಾಷಣಗಳಿಗೆ ನಾನು ಕಿವಿಕೊಟ್ಟೆ,