ಪುಟ:Kedage.pdf/೫೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

38/ ಕೇದಗೆ

ಒಂದುದಿನ ಸತ್ರದಲ್ಲಿ ನೆರೆದುದು | ಬಂದು ದಿಕ್ಷಾಲಾದಿ ಸುಮನಸ |
ವೃಂದ ಸಹಿತೊಟ್ಟಿರುವ ಸಭೆಗಾ ದಕ್ಷನೈತಂದ ||
ವೃಂದವೆದ್ದಿದಿರಾಗಿ ಭಯದಲಿ | ವಂದಿಸುತ್ತಿರಲೀಶನೇಳದೆ |
ಚಂದದಿಂ ಕುಳಿತಿರಲು ಕಂಡಾ ದಕ್ಷ ಖತಿಗೊಂಡ ||

ಇಲ್ಲಿ ಕಥಾರಂಭಕ್ಕೆ ಬೇಕಾದ ಸನ್ನಿವೇಶನಿರ್ಮಾಣಕ್ಕೆ, ದಕ್ಷನ ಪ್ರವೇಶ, ಅವನು ಸಭೆಯನ್ನು ನೋಡುವುದು ಇವಾವುದಕ್ಕೂ ಅವಕಾಶವಿಲ್ಲ.*ಕೃಷ್ಣ ಸತ್ಯಭಾಮಾ ಸಂವಾದ, ಸುಧನ್ವ ಕಾಳಗದ ಸುಧನ್ವ ಪ್ರಭಾವತಿ ಸಂವಾದ ಇವೆರಡೂ ಪೂರ್ತಿಯಾಗಿ ಝಂಪೆ ತಾಳದಲ್ಲಿವೆ. ಇದು ಶೃಂಗಾರಕ್ಕೆ ಹೊಂದಿಕೆಯಾಗದ ನಡೆ.

ಕೃಷ್ಣಸಂಧಾನದಲ್ಲಿ ಕೃಷ್ಣನು ಪಾಂಡವರನ್ನು ಬೀಳ್ಕೊಂಡು, ವಿದುರನ ಮನೆಗೆ ಹೋಗುವುದು, ವಿದುರನು ಅವನನ್ನು ಕಂಡು ಆನಂದಗೊಳ್ಳುವುದು, ಅದಕ್ಕೆ ಕೃಷ್ಣನ ಪ್ರತಿಕ್ರಿಯೆ - ಇವಿಷ್ಟು ವಾರ್ಧಿಕ, ಭಾಮಿನಿಗಳಲ್ಲಿವೆ. ವಿದುರನ ಭಾವಗಳೆಲ್ಲ ಒಂದೇ ಒಂದು ಪದ್ಯದಲ್ಲಿವೆ, (ನೋಡಿದಂ ಕಣ್ಮಣಿಯ ಚಿನ್ಮಯನ ಮೂರ್ತಿಯಂ.... ಪಾಡಿದಂ.... ಕೊಂಡಾಡಿದಂ..... ಓಲಾಡಿದಂ.... ಇತ್ಯಾದಿ.)

ಮುದ್ದಣ ಕವಿಯ ಕುಮಾರವಿಜಯದ ಉತ್ತರಾರ್ಧ ರಂಗದೃಷ್ಟಿಯಿಂದ ಒಳ್ಳೆಯ ಭಾಗ, ಅದರ ಪೂರ್ವಾರ್ಧದಲ್ಲಿ ಬರುವ ನಾರದ - ಶೂರಪದ್ಮಸಂವಾದ, ಇಂದ್ರ - ಶಚೀಸಂವಾದ. ಇಲ್ಲಿ ಸಂದರ್ಭದ ಗಣನೆ ಇಲ್ಲದೆ ಇಂತಿಂತಹ ಬಂಧದ ಪದ್ಯಗಳನ್ನು ಸೇರಿಸಲೇಬೇಕು ಎಂಬ ಪೂರ್ವನಿರ್ಧಾರದಿಂದಲೇ ರಚಿಸಿದಂತಿದೆ.

ದುಃಖಿತನಾದ ಇಂದ್ರನನ್ನು ಶಚಿ : “ಏನಿದು ದುಗುಡಪ್ರಿಯ | ನಿರ್ಜರ ರಾಯ” ಎಂಬಲ್ಲಿಂದ ಆರಂಭವಾಗುವ ಮೂರು ಸುದೀರ್ಘ ಪದ್ಯಗಳಿಂದ ಪ್ರಶ್ನಿಸುತ್ತಾಳೆ. ಮುಂದೆ ಇಂದ್ರನ ಉತ್ತರವೂ ಹಾಗೇ ಸಂದರ್ಭಕ್ಕೆ ಸಲ್ಲದಂತೆ ದೀರ್ಘವಾಗಿದೆ. ಮೇಲಾಗಿ ಇಂದ್ರನು ಹೇಳುವ ಘಟನೆ ರಂಗದಲ್ಲಿ ಆಗಲೇ ನಡೆದು ಹೋಗಿರುತ್ತದೆ.

ಪುನರಾವರ್ತನೆಯ ಸಮಸ್ಯೆ ರಂಗದಲ್ಲಿ, ಅದೂ ಇಂದಿನ ಸನ್ನಿವೇಶದಲ್ಲಿ,ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕಾದುದು. ಒಂದು ಕಾಲಕ್ಕೆ ನಿಧಾನವಾಗಿ ಪುನರಾವರ್ತನೆಗಳೊಂದಿಗೆ ಸಾಗುವ ರೀತಿ ಬೇಕಾಗಿತ್ತೇನೋ, ಈಗ ಇಂತಹ ಎಡೆಗಳಲ್ಲಿ ಸಂಕ್ಷೇಪವಾಗಿ ಮುಂದುವರಿಸಬೇಕು. ವಾಲಿವಧೆಯ ಉದಾಹರಣೆಯನ್ನೇ ನೋಡೋಣ. ಆ ಒಂದು ಪ್ರಸಂಗದಲ್ಲಿ ರಾಮನ ಪೂರ್ವಕತೆ, ವಾಲಿ - ಸುಗ್ರೀವರ
_______________________________________________________________________ * ಇದು ಯಕ್ಷಗಾನ ರಂಗತಂತ್ರವು ಸಾಕಷ್ಟು ಬೆಳೆಯದಿದ್ದ ಕಾಲದಲ್ಲಿ ರಚಿತವಾದ ಕೃತಿಯೆಂದೂ, ಪ್ರಸಂಗಗಳ ಅಧ್ಯಯನದಿಂದ ರಂಗತಂತ್ರದ ಬೆಳವಣಿಗೆಯನ್ನು ಅಭ್ಯಸಿಸ ಬಹುದೆಂದೂ ಮುಳಿಯ ಮಹಾಬಲ ಭಟ್ಟರು ಸೂಚಿಸಿದ್ದಾರೆ. 'ನೇತ್ರಾವತಿ' ದ. ಕ. ಜಿಲಾ ಸಾಹಿತ್ಯ ಸಮ್ಮೇಲನ ಸಂಚಿಕೆ, 1985 ಮಂಗಳೂರು.