ಪುಟ:Kedage.pdf/೭೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

60 / ಕೇದಗೆ

ಅಸಾಮಾನ್ಯವಾದದ್ದು ಎಂದರೆ ಅದು ವಾಸ್ತವವೇ ಹೊರತು, ಅತಿಶಯದ ಮಾತಲ್ಲ ಎಂಬುದು ಆಟ, ಕೂಟಗಳ ಅರ್ಥಗಾರಿಕೆಯನ್ನು ಕೇಳಿ ಅಭ್ಯಸಿಸಿದವರ ಅನುಭವ.

ಪುರಾಣಗಳ ಪ್ರಪಂಚ, ತನ್ನ ಮಿತಿಗಳಿದ್ದರೂ ಬುದ್ದಿಗೆ ಸವಾಲಾಗುವ ಸಂಕೀರ್ಣವಾದ ಪ್ರಪಂಚ, ಅವಾಸ್ತವ 'ಫ್ಯಾಂಟಸಿ'ಯ ಮಧ್ಯೆ ವಾಸ್ತವವನ್ನು ಸಂಗತಗೊಳಿಸಲು ಸಾಧ್ಯವಿರುವ ವಸ್ತು ಅದು. ಹೀಗಾಗಿ ಅರ್ಥಧಾರಿಯ ವ್ಯಾಪ್ತಿ (ಕ್ಯಾನವಾಸ್) ಬಹಳ ದೊಡ್ಡದು. ಅರ್ಥಗಾರಿಕೆಯಲ್ಲಿ ನಡೆದಿರುವ ಕೃಷಿ ಅದನ್ನು ಪೂರ್ಣ ಪ್ರಮಾಣದಲ್ಲಿ 'ಕಾವ್ಯ' ಸಾಹಿತ್ಯ ಪ್ರಕಾರವಾಗಿ ಸ್ಥಾಪಿಸಿದೆ. ವಾಲ್ಮೀಕಿರಾಮಾಯಣ ಹೇಳುವ “ರಹಸ್ಯಂ ಚ ಪ್ರಕಾಶಂ ಚ” ಎಂಬ ಮಾತಿನಂತೆ ಕಾವ್ಯದ ಸಾಲುಗಳ ಮಧ್ಯೆ ಹುದುಗಿರುವ ರಹಸ್ಯವನ್ನು ಉದ್ಘಾಟಿಸುವುದಕ್ಕೆ ಅರ್ಥಧಾರಿ ಯತ್ನಿಸಬೇಕು.* ಅದನ್ನು, ಅದು ನಮ್ಮ ದಾರ್ಶನಿಕ ಗ್ರಂಥಗಳು, ಉಪನಿಷತ್ತುಗಳು, ಸಂಸ್ಕೃತ ಕನ್ನಡಗಳ ಕಾವ್ಯನಾಟಕಾದಿಗಳು, ಬಹುವ್ಯಾಪ್ತಿಯುಳ್ಳ ವೈವಿಧ್ಯಪೂರ್ಣ ವಿಚಾರಗಳನ್ನುಳ್ಳ ವಿಶ್ವವನ್ನು ನಮ್ಮ ಮುಂದಿಡುತ್ತವೆ. ಸಂಸ್ಕೃತಕಾವ್ಯಗಳ ಮಾನವಾನುಭವ ಎಷ್ಟು ವಿಶಾಲವಾದುದೆಂದರೆ, “ಸಂಸ್ಕೃತಸಾಹಿತ್ಯ ಮುಟ್ಟದ ಅನುಭವವಿಲ್ಲ ಎಂಬ ಹೊಗಳಿಕೆಗೆ ಪಾತ್ರವಾಗುವಷ್ಟು ದೊಡ್ಡ ಆಕರ ಅದು. ವ್ಯತ್ಪನ್ನನಾದ ಅರ್ಥಧಾರಿ ಬಳಸಿದಾಗ ಸೃಷ್ಟಿಯಾಗುವ 'ಅರ್ಥ' ಕಾವ್ಯಾರ್ಥಕಾವ್ಯ. ಆಗ ಅರ್ಥಗಾರಿಕೆ “ವಾಗರ್ಥ ಪ್ರತಿಪತ್ತಿ” ಆಗುತ್ತದೆ. ಶಾಸ್ತ್ರ ಸಾಹಿತ್ಯದ ಒಂದೊಂದು ಶಬ್ದ, ಕಲ್ಪನೆಯ ಕದಗಳನ್ನು ತೆರೆಯಬಲ್ಲುದು. ವೇದಯುಗದಿಂದ ಭಕ್ತಿಯುಗದ ವರೆಗೆ ನಡೆದು ಬಂದ ಭಾರತೀಯ ಸಮಾಜದ ಚಿತ್ರ, ಅದರ ಒಳಸೆಳೆತಗಳು, ಸಂಘರ್ಷಗಳು ಅರ್ಥಧಾರಿಯ ಭಾವದ, ಬುದ್ಧಿಯ ವಿಹಾರಕ್ಕೆ ವ್ಯಾಪಕಕ್ಷೇತ್ರವನ್ನು ಒದಗಿಸುತ್ತವೆ. ಆದರೆ, ಅದನ್ನು ಬಳಸುವಾಗ ಸೃಷ್ಟಿಕ್ರಿಯೆ ಸಾರ್ಥಕವಾಗುವುದು ಪಾಂಡಿತ್ಯದಿಂದಲ್ಲ, ಕಲೆಗೆ ಅಡಿಯಾಳಾಗುವ ಪಾಂಡಿತ್ಯದ ಬಳಕೆಯಿಂದ, ನಮ್ಮ ತತ್ತ್ವದರ್ಶನಗಳ ಪ್ರಪಂಚ ವರ್ಣಮಯವಾದುದು, ಅತ್ಯಂತ ಭಿನ್ನ ವಿಚಾರಧಾರೆಗಳ ಪ್ರವಾಹ ಅದು. ಚಾರ್ವಾಕದಂತಹ ಶುದ್ಧ ನಿರೀಶ್ವರ ದರ್ಶನ ವಿದೆ. ಮೀಮಾಂಸಾದಂತಹ ವಿಲಕ್ಷಣ ವಿಚಾರಮಾರ್ಗವಿದೆ. (ವಿ.ಮಾಂಸೆಯು ವೇದವನ್ನು ಅಂಗೀಕರಿಸಿ, ದೇವರನ್ನು ನಿರಾಕರಿಸುತ್ತದೆ) ವೇದಾಂತದ ದೊಡ್ಡ ಸಾಹಿತ್ಯರಾಶಿ ಇದೆ. ವೇದಾಂತದ ಮತ್ತು ಭಕ್ತಿಮಾರ್ಗದ ದೃಷ್ಟಿಗಳಿಗೆ ವಿಶೇಷ

ಸ್ವರೂಪ ರಹಸ್ಯಂ ಚ ಪ್ರಕಾಶಂ ಚ - ಲಕ್ಷ್ಮೀಶ ತೋಳ್ಳಾಡಿ; ಅರ್ಥಗಾರಿಕೆ ಸಮೀಕ್ಷೆ; ಪೊಳಲಿ ಶಾಸ್ತ್ರಿ ಸ್ಮಾರಕ ಸಮಿತಿ, ಮಂಗಳೂರು 1981 -