ಪುಟ:Kedage.pdf/೮೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

70/ ಕೇದಗೆ

ತುಳು ಯಕ್ಷಗಾನಗಳ ಪರವಾಗಿ ಮತ್ತು ವಿರುದ್ಧವಾಗಿ ಬಂದಿರುವ ಎರಡು ಮುಖ್ಯವಾದ ವಿಚಾರಧಾರೆಗಳನ್ನು ಇಲ್ಲಿ ಗಮನಿಸಬಹುದು. ತುಳು ಯಕ್ಷಗಾನಗಳಿಗೆ, ತಾತ್ವಿಕವಾದ ನೆಲೆಯಲ್ಲಿ ಪ್ರಬಲ ಸಮರ್ಥನೆ ನೀಡುವ ಅಭಿಪ್ರಾಯ ಹಿರಿಯ ಸಾಹಿತಿ, ಕಲಾಭಿಜ್ಞ ಶ್ರೀ ಅಮೃತ ಸೋಮೇಶ್ವರರದು. ತುಳು ಯಕ್ಷಗಾನಗಳಿಗೆ, ವಿರೋಧಕ್ಕೆ, ಕಾರಣಗಳಿಗೆ ಪಟ್ಟಿ ಮಾಡುತ್ತ ಅವರು ಯಕ್ಷಗಾನವು ಕನ್ನಡದ್ದೆ ಕಲೆ ಎಂಬ ಹಟ, ಪುರಾಣ ಪ್ರಸಂಗಗಳ ಬಗೆಗಿನ ಭ್ರಮೆ, ಪ್ರಯೋಗಗಳ ಬಗೆಗೆ ತಾತ್ಸಾರ, ತುಳು ಸಂಸ್ಕೃತಿ ಬಗೆಗಿನ ತಾತ್ಸಾರ, ಸಾಂಪ್ರದಾಯಿಕ ಮನೋವೃತ್ತಿ, ಕಲೆಯ ಇತಿಹಾಸವನ್ನು ತಿಳಿಯದಿರುವುದು - ಮುಂತಾದ ಕಾರಣಗಳನ್ನು ಹೇಳಿದ್ದಾರೆ. ಇಲ್ಲಿ ಕಲಾಪರಂಪರೆಯ ನಾಶಕ್ಕೆ ಕಾರಣವಾಗುತ್ತದೆ ಎಂಬ ಒಂದೇ ಕಾರಣಕ್ಕಾಗಿ ವಿರೋಧಿಸುವ, ಅದಕ್ಕೆಂದೇ ನಿಜವಾಗಿ ಗಂಭೀರವಾಗಿ ಪರಿಗಣಿಸಬೇಕಾದ ಆಕ್ಷೇಪವನ್ನು ಅವರು ಪರಿಗಣಿಸಿಲ್ಲ. ತುಳುವಿನಲ್ಲಿ ಉತ್ತಮ ಪ್ರಸಂಗ ಸಾಧ್ಯವೆಂದೂ, ಆರ್ಯ ಪುರಾಣಗಳಷ್ಟೇ ಸ್ಥಳೀಯ ಪ್ರಾಚೀನ ಕತೆಗಳು ಆದರಣೀಯವೆಂದೂ ಹೇಳಿ ಕಲೆಯಲ್ಲಿ ಬದಲಾವಣೆಯು ಅನಿವಾರ್ಯವಾದ ಬೆಳವಣಿಗೆ ಎಂದೂ, ಪರಿವರ್ತನಶೀಲತೆಯು ಪ್ರಗತಿಶೀಲ ಲಕ್ಷಣವೆಂದೂ ಹೇಳಿದ್ದಾರೆ.

ಇವೆಲ್ಲ ನಿಜ. ಕಲೆಗೆ ಬೆಳವಣಿಗೆ ಸುಧಾರಣೆ ಬೇಕು. ಆಟವು ವೈದಿಕ ಸಂಸ್ಕೃತಿಯ ಸೊತ್ತಲ್ಲ. ಪ್ರಾದೇಶಿಕ ಆಶಯಗಳು ಬಂದಷ್ಟೂ ಕಲೆಗೆ ಒಳಿತೇ. ತಾತ್ವಿಕವಾಗಿ ತುಳು ಯಕ್ಷಗಾನಗಳನ್ನು ಆಕ್ಷೇಪಿಸುವುದು ಅಸಾಧ್ಯ. ತಮಿಳು, ಮಲಯಾಳ ಮುಂತಾದ ಎಲ್ಲ ಭಾಷೆಗಳಲ್ಲಿ ಸಾಂಪ್ರದಾಯಿಕ, ಶಾಸ್ತ್ರೀಯ, ಜಾನಪದ ಕಲೆಗಳಿವೆ. ಅಲ್ಲಿ ಸಾಧ್ಯವಾದದ್ದು ತುಳು ಯಕ್ಷಗಾನದಲ್ಲಿ ಅಸಾಧ್ಯವೇ ? ಅಮೃತರ ವಾದದ ತಾತ್ವಿಕ ಪಕ್ಷಕ್ಕೆ ನನ್ನ ಅಭ್ಯತಂರವಿಲ್ಲ.

ಆದರೆ, ಇಂತಹ ಶುದ್ಧ ತಾತ್ವಿಕ ಸಮರ್ಥನೆ ಹೊಂದುವ ಅರ್ಹತೆ ನಮ್ಮ ತುಳು ಯಕ್ಷಗಾನಗಳಿಗಿದೆಯೆ ? ಎಂಬ ಪ್ರಶ್ನೆ ಯಾವುದೇ ಕಲಾದೃಷ್ಟಿ ಇಲ್ಲದೆ ಮಾಡಿದ ಕಳಪೆಯಾದ ವಿಕೃತಿಯನ್ನೂ ಕಲಾತತ್ತ್ವಗಳ ಆಧಾರದಿಂದ ಸಮರ್ಥಿಸಲು ಬರುತ್ತದೆ. ಆಕ್ಷೇಪಿಸುವವನನ್ನು ಬಾಯಿ ಮುಚ್ಚಿಸಲು ಮತ್ತು ಜನರನ್ನು ಭ್ರಮೆಗೊಳಿಸುವುದಕ್ಕೂ ಇಂತಹ ವಾದವನ್ನು ಹೂಡಬಹುದು. ಇಂತಹ ವಾದಗಳು, ಒಂದು ವಿಶಿಷ್ಟ ಕಲಾಸಂದರ್ಭದಲ್ಲಿ ಎಷ್ಟು ಪ್ರಸ್ತುತ, ಎಷ್ಟು ಪ್ರಾಮಾಣಿಕ ಎಂಬುದನ್ನು ನೋಡಬೇಕು. ಕಲೆಯಲ್ಲಿ ಬದಲಾವಣೆ ಆಗಲೇಬೇಕು ಎಂಬುದು ಒಂದು ನಿಯಮವಲ್ಲ, ಬದಲಾವಣೆ ಆಗುತ್ತದೆ ಎಂಬುದು ಲೋಕ ಸ್ವಭಾವ. ಆಗಿರುವ ಬದಲಾವಣೆ ಅಷ್ಟಕ್ಕಾಗಿಯೇ ಸಮರ್ಥನೀಯವೂ ಆಗಲಾರದು. ಒಂದು ವಿಶಿಷ್ಟ ಕಾರಣಕ್ಕಾಗಿ ಒಂದು ಪ್ರಯೋಗವನ್ನು