ಪುಟ:Mahakhshatriya.pdf/೧೨೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಇದೆ. ಸಮಾಜವು ಸ್ವಂತವಾದ ಒಂದು ರೂಪವಿಲ್ಲದ್ದಾದರೂ ಈ ಮೆಟ್ಟಿಲುಮೆಟ್ಟಿಲಾಗಿರುವಿಕೆಯು, ಉಚ್ಚ ನೀಚ ಭಾವವು ಅದರಲ್ಲಿ ಇದ್ದೇ ಇರುವುದು. ಈ ಸೋಪಾನಕ್ರಮವನ್ನು ನಿರಾಕರಿಸಿದವರದೂ ಒಂದು ಗುಂಪುಂಟು. ಅದು ಏಕಪಿಂಡ, ಏಕಜಾತಿ, ಅಲ್ಲಿ ಕೇವಲ ವಯಸ್ಸಿನಿಂದ ಹಿರಿಯತನ. ಅಲ್ಲಿ ಭೋಗಾಧಿಕಾರ ಉಂಟಾದರೂ ಸ್ವತ್ತಾಧಿಕಾರವಿಲ್ಲ. ಸ್ವತ್ತು ಏನಿದ್ದರೂ ಅದು ಕುಲದ್ದು. ಕುಲದವರು ಕೊಟ್ಟಷ್ಟು ತಿಂದುಂಡು ತಾನು ಸಂಪಾದಿಸಿದುದನ್ನೆಲ್ಲಾ ಕುಲಕ್ಕೆ ಕೊಟ್ಟು ಹೋಗಬೇಕು. ಈ ಸೋಪಾನಕ್ರಮವನ್ನು ಅಂಗೀಕರಿಸಿದವರು ವರ್ಣಾಶ್ರಮಧರ್ಮಸಂಪನ್ನರು. ಕೆಲವರು ಜಾತಿಯ ಜನ್ಮದಿಂದ ಲಭ್ಯವಾಗುವುದು ಎಂದರೆ, ಇನ್ನು ಕೆಲವರು ಗುಣದಿಂದಲೂ ವಿದ್ಯಾತಪಸ್ಸುಗಳಿಂದಲೂ ಅದನ್ನು ನಿರ್ಣಯಿಸಬೇಕು ಎನ್ನುವರು. ಕುದುರೆಯ ಮರಿಯು ಕುದುರೆಯೇ ಎನ್ನುವಂತೆ ಮಾತಾಪಿತೃಗಳಿಂದಲೇ ಜಾತಿಯು ಮಕ್ಕಳಿಗು ಸಂಕ್ರಮಿಸುವುದಾದರೂ, ಮನುಷ್ಯ ವಿಷಯದಲ್ಲಿ ಮಾತ್ರ ಆ ಅಧಿಕಾರವು ಸ್ಪಷ್ಟ ಅಸ್ಪಷ್ಟ ಎಂದು ಎರಡು ವಿಧವಾಗಿರುವುದು. ಹುಟ್ಟುತ್ತ ಬರುವ ಅಸ್ಪಷ್ಟಾಧಿಕಾರವು ಆನುವಂಶಿಕ ಗುಣವಾಗಿ ಊರ್ಜಿತವಾಗಲು ಸಂಸ್ಕಾರವನ್ನು ಅಪೇಕ್ಷಿಸುವುದು. ಅದಿಲ್ಲದಿದ್ದರೆ ಸಹಜವಾಗಿ ಗಟ್ಟಿಯಾಗಿ ಕಬ್ಬಿಣವು ಉಪಯೋಗಿಸದೆ ಇಟ್ಟಿದ್ದರೆ, ಇಟ್ಟಕಡೆಯಲ್ಲಿಯೇ ತುಕ್ಕು ಹಿಡಿಯುವಂತೆ, ಸಂಸ್ಕಾರಬಲದಿಂದ ಆನುವಂಶಿಕ ಗುಣವು ಮಸಳಿಸಿ ಹೋಗುವುದು. ಸಂಸ್ಕಾರಬಲದಿಂದ ಇಲ್ಲದ ಗುಣವನ್ನು ಹುಟ್ಟಿಸಬಹುದಾದರೂ, ಸಂಸ್ಕಾರವು ಸಾಮಾನ್ಯವಾಗಿ ಇದ್ದ ಗುಣವನ್ನೇ ವೃದ್ಧಿಪಡಿಸುವುದು. ವೈದ್ಯನು ಪ್ರಾಣಾಪಹಾರಕವಾದ ವಿಷಯವನ್ನು ಪ್ರಾಣದಾಯಕವಾದ ರಸಾಯನವಾಗಿ ಮಾಡಬಲ್ಲನು ಎಂಬ ತತ್ವವನ್ನು ಅಂಗೀಕರಿಸಿದ ಎರಡನೆಯ ಗುಂಪಿನವರು ಇಲ್ಲದ ಗುಣವನ್ನು ಹುಟ್ಟಿಸುವ ವಿಶೇಷ ಗುಣವನ್ನೇ ಸಂಸ್ಕಾರವೆನ್ನದೆ ದೀಕ್ಷೆಯೆನ್ನುವರು. ಈ ದೀಕ್ಷಾಸಂಪ್ರದಾಯದವರು ‘ಮನುಷ್ಯರಿಗೆ ದೇಹತತ್ವಕ್ಕಿಂತಲೂ ಮನಸ್ತತ್ತ್ವ ಹೆಚ್ಚು ಮನೋಬುದ್ಧಿ ಅಹಂಕಾರಗಳೇ ಮುಖ್ಯವಾದ್ದರಿಂದ ಮಾತೃತಃ ಪಿತೃತಃ ಬರುವ ದೇಹಕ್ಕಿಂತಲೂ ಗುರುವಿನಿಂದ ಸಂಸ್ಕಾರವಶನಾಗಿ ಬರುವ ಅಂತಃಕರಣಶುದ್ಧಿಯೇ ಮುಖ್ಯವಾದ್ದರಿಂದ, ಆ ಅಂತಃಕರಣಶುದ್ಧಿಯಿಂದಲೇ ಜಾತಿ ನಿರ್ಣಯವೆನ್ನುವರು.

ವರ್ಣಾಶ್ರಮಧರ್ಮಸಂಪನ್ನರು ಇದನ್ನು ಒಪ್ಪದೆ, ಅಸ್ಪಷ್ಟಾಧಿಕಾರವನ್ನು ಸ್ಪಷ್ಟಾಧಿಕಾರವನ್ನು ಮಾಡುವ, ಒಂದನ್ನು ನೂರುಮಾಡುವ ಸಂಸ್ಕಾರವನ್ನು ಮಾತ್ರ ಅಂಗೀಕರಿಸುವರು. ಅಂತಃಕರಣದ ಶುದ್ಧಿ - ಅಶುದ್ಧಿಗಳು