ಪುಟ:Mahakhshatriya.pdf/೧೨೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಗೋಚರವಾಗುವುದು ಯಾವುದೋ ಒಂದು ವಯಸ್ಸಿಗೆ ಬಂದಾಗ. ಅದು ಕನ್ಯೆಯು ಋತುಮತಿಯಾಗಿ ಸ್ತ್ರೀ ಆದಂತೆ. ಅದುವರೆಗೆ ವ್ಯವಸ್ಥೆ ಇಲ್ಲದಿದ್ದರೆ ಹೇಗೆ ? ಅಲ್ಲದೆ, ಜೊತೆಗೆ ಆನುವಂಶಿಕ ಗುಣಗಳಿಂದಲೇ ಎಲ್ಲವೂ ಸಿದ್ಧವಾಗುವುವು. ಕುದುರೆ, ಒಂಟೆ, ಕುರಿಗಳು ಹಾಲು ಕರೆದರೂ, ಆ ಹಾಲು ಬಿಟ್ಟು ಮತ್ತೇನನ್ನೂ ಉಪಯೋಗಿಸದವರೇ ಇದ್ದರೂ ಅವು ಹಸುಗಳಲ್ಲ. ಅದರಿಂದ, ಮಾತೃತಃ ಪಿತೃತಃ ಬರುವ ಜಾತಿಯೇ ಜಾತಿ ಎಂಬ ತತ್ತ್ವವನ್ನೇ ಅಂಗೀಕರಿಸಿ, ‘ಜನ್ಮಶುದ್ಧಿಯಿಲ್ಲದಿದ್ದಲ್ಲಿ ಸಂಸ್ಕಾರವು ಏನೂ ಮಡಲಾರದು. ಅದರಿಂದ, ಈ ತಜ್ಜಾತರಿಗೆ ಸಂಸ್ಕಾರ’ ಎನ್ನುವರು ಇವರು.

`ನಾವೆಲ್ಲರೂ ಈ ಸಿದ್ಧಾಂತವನ್ನು ಅಂಗಿಕರಿಸಿದವರು. ಜೊತೆಗೆ ಧರ್ಮಕಾಮ ನಲ್ಲದವನಿಗೆ ಸಮಾಜದಲ್ಲಿ ಸ್ಥಾನವಿಲ್ಲ ಎಂಬ ತತ್ತ್ವವನ್ನು ಅಂಗೀಕರಿಸಿದವರು. ಈಗ ನೀನು ತಜ್ಜಾತನಾದುದರಿಂದ ನೀನು ತತ್ಸಂಸ್ಕಾರ ಸಂಪನ್ನನಾಗಬೇಕು. ಸಂಸ್ಕಾರದಿಂದಲೇ ಫಲವಾಗದೇ ಹೋದರೋ ಎಂದರೆ ಒಂದೊಂದು ವೇಳೆ ಸಂಸ್ಕಾರಫಲವು ಸದ್ಯದಲ್ಲಿ ಕಾರಣಾಂತರಗಳಿಂದ ಗೋಚರಿಸದೆ ಹೋದರೂ, ಅದು ಅಪೂರ್ವವಾಗಿದ್ದುಕೊಂಡು ಕಾಲದೇಶಗಳು ಅನುಕೂಲವಾದಾಗ ಮುಂದಿನ ಸಂತಾನದಲ್ಲಿ ಪ್ರಕಟವಾಗುವುದು. ಅದರಿಂದ ಆನುವಂಶಿಕ ಗುಣೋತ್ತೇಜಕವಾದ ಸಂಸ್ಕಾರವನ್ನು ನೀನೂ ಪಡೆದು ಅದನ್ನು ಅನುಷ್ಠಾನ ಮಾಡುವುದಾದರೆ, ನೀನು ದಾಯಾರ್ಹನು.

`ಮೇಲೆ ಹೇಳಿದ ಎರಡು ಗುಂಪುಗಳಲ್ಲಿ ಇನ್ನೊಂದು ವಿಶೇಷವುಂಟು. ಏಕಪಿಂಡ ಜಾತಿಯು ಸಾಮಾಜಿಕ ವ್ಯವಸ್ಥೆಯನ್ನು ಕಾಪಾಡುವುದಕ್ಕೆ ಅತ್ಯವಶ್ಯವಾದ ನಯ ವಿನಯರೂಪವಾದ ಸಾಮಾನ್ಯ ಧರ್ಮವನ್ನು ಅಂಗೀಕರಿಸುವುದು. ಅಲ್ಲಿ ಸೌಜನ್ಯವೇ ಧರ್ಮ. ಹತ್ತು ಜನರು ಸೇರಿ ಮಾಡಿಕೊಂಡ ಕಟ್ಟಳೆಯೇ ಧರ್ಮ. ಆದರೆ ಸೋಪಾನಕ್ರಮದವರು ಇನ್ನೊಂದು ಹೆಜ್ಜೆ ಮುಂದೆ ಹೋಗಿ ‘ಸಮಾಜವು ವ್ಯಕ್ತಿಯಂತೆಯೇ ದೇಶ ಕಾಲ ಕರ್ಮಾನುಗುಣವಾಗಿ ಭಿನೈಸಿದರೂ ಅದು ವಿಶ್ವದ ಒಂದು ಅಂಗ. ಅದರಿಂದ ಸಮಾಜದ ಉತ್ತಮವ್ಯಕ್ತಿಯು ವಿಶ್ವದ ಪ್ರತಿನಿಧಿಯಾಗಿ, ತನ್ನ ಸ್ವಧರ್ಮದ ಪ್ರತೀಕವಾಗಿ ಕಾಲ, ದೇಶ, ಜಾತಿ, ಕುಲಗಳನ್ನು ಮಾತ್ರವಲ್ಲದಲೆ, ವಿಶ್ವಕುಟುಂಬವನ್ನೂ ಲಕ್ಷ್ಯದಲ್ಲಿಟ್ಟುಕೊಂಡು ತನ್ನ ಕಾರ್ಯವನ್ನು ನಿರೂಪಿಸಿಕೊಂಡು, ಆಚರಿಸಬೇಕು. ಈ ಲಕ್ಷ್ಯವು ಮೇಲುಮೆಲಕ್ಕೆ ಹೋಗುತ್ತಾ ಹೆಚ್ಚು ಹೆಚ್ಚು ಪ್ರಕಟವಾಗಿ, ಕೊನೆಯ ಅಂತಸ್ತಿನಲ್ಲಿ ಕಾಣಿಸುವ ಗೋಪುರದ ಶಿಖರದಂತಿರುವುದು. ಗೋಪುರದ ಕಲಶಗಳು, ಆ ಗೋಪುರದ ಅಂತಸ್ತು