ಪುಟ:Mahakhshatriya.pdf/೧೪೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಇಂದ್ರತ್ವವನ್ನೇ ಕೊಡುವೆವು ಎನ್ನುವಿರಿ. ಆಗಲಿ. ಆದರೆ, ನನ್ನ ಪ್ರಾರ್ಥನೆಯನ್ನೂ ಮನ್ನಿಸುವಿರಾ ? ನಾನು ಎರಡು ನಿಬಂಧಗಳನ್ನು ತಮ್ಮ ಮುಂದಿಡಬಹುದೆ ?”

ದೇವಗುರುವು ‘ಆಗಬಹುದು’ ಎಂದನು. ನಹುಷನು ಹೇಳಿದನು ; “ಅಲ್ಲಿಯೂ ವಿರಜಾದೇವಿಯು ನನ್ನ ಪತ್ನಿಯಾಗಿದ್ದು, ಈಗ ಇಲ್ಲಿ ಅರಮನೆಯಲ್ಲಿ ನಾವು ನಡೆಸುವ ಧರ್ಮಗಳನ್ನು ದಿನವೂ ನಡೆಸುತ್ತಿರಲು ಅನುಕೂಲವಿರಬೇಕು ಎಂಬುದೊಂದು. ಜೊತೆಗೆ ಅಲ್ಲಿ ನಾನು ಏನು ಕೇಳಿದರೂ ಅದನ್ನು ರಹಸ್ಯವೆನ್ನದೆ ನನಗೆ ಹೇಳಬೇಕು ಎನ್ನುವುದು ಎರಡನೆಯದು. ಈ ಎರಡು ನಿಯಮಗಳನ್ನು ತಾವು ಒಪ್ಪಿಕೊಳ್ಳಬೇಕು.”

“ಈ ಎರಡು ನಿಯಮಗಳನ್ನು ಒಪ್ಪಿಕೊಳ್ಳಲೇಬೇಕೆ ?”

“ಹಾಗೆಂದು ನಾನು ತಮ್ಮನ್ನು ಪ್ರಾರ್ಥಿಸುವೆನು.”

“ಯೋಚಿಸಿ ನೋಡು. ಒಪ್ಪಿಕೊಂಡುದರಿಂದ ನಮಗೆ ಹಾನಿಯಿಲ್ಲ”

“ಹಾಗಾದರೆ ಒಪ್ಪಿಕೊಳ್ಳಬಹುದಲ್ಲ ?”

“ಒಪ್ಪಿಕೊಂಡಿರುವೆವು. ಇವೆರಡರಿಂದ ಆಗುವ ಹಾನಿಗೆ ನಾವು ಹೊಣೆಯಲ್ಲ. ನೀನೇ ಹೊಣೆ.”

“ಆಗಬಹುದು ದೇವ, ನಾನು ಹೊಣೆಯನ್ನು ಒಪ್ಪಿಕೊಳ್ಳುವೆನು. ಆ ಹೊಣೆಯಲ್ಲಿ ಏನು ವಿಷಯವಿದೆಯೆಂದು ತಿಳಿಯಲಿಲ್ಲ ಅಪ್ಪಣೆಯಾಗಬೇಕು.”

“ನೀನು ಇಂದ್ರತ್ವವನ್ನು ಒಪ್ಪಿಕೊಂಡಿರುವೆ ತಾನೆ ?”

“ಹೌದು ಒಪ್ಪಿಕೊಂಡಿರುವೆನು.”

“ಸರಿ, ಹಾಗಾದರೆ ಹೇಳುವೆನು. ನೀನು ಧರ್ಮಮಾಡುತ್ತಿರಬೇಕು ಎಂದೆ ಅದರರ್ಥವೇನಾಯಿತು ಬಲ್ಲೆಯಾ? ‘ನಾನು ಇಂದ್ರನಾದರೂ ಮನುಷ್ಯ ಧರ್ಮವನ್ನು ಬಿಡುವುದಿಲ್ಲ’ ಎಂದಾಯಿತು. ಎಂದರೆ, ಮನುಷ್ಯರು ಮತರ್ಯ್‌ರು, ಎಂದರೆ ಮರಣಧರ್ಮವುಳ್ಳವರು. ನೀನೂ ಆ ಧರ್ಮವನ್ನು ಒಪ್ಪಿಕೊಂಡಂತಾಯಿತು. ನಾವು ನಿನ್ನನ್ನು ಅಜರ ಅಮರಧರ್ಮಿಯಾಗಿ ಮಾಡಬೇಕೆಂದಿದ್ದೆವು. ನೀನು ಒಂದನ್ನೊಪ್ಪಿಕೊಂಡು ಇನ್ನೊಂದು ಬೇಡವೆಂದ ಹಾಗಾಯಿತು.

ನಹುಷನು ಅದನ್ನು ಕೇಳಿ ನಿಟ್ಟುಸಿರುಬಿಟ್ಟನು. ದಂಪತಿಗಳು ಒಬ್ಬರ ಮುಖವನ್ನೊಬ್ಬರು ನೋಡಿಕೊಂಡು ಒಂದುಗಳಿಗೆ ವಿಷಾದಪಟ್ಟರು. ನಿಟ್ಟುಸಿರುಬಿಟ್ಟರು. ನಹುಷನು ಕೇಳಿದನು : “ಇನ್ನೊಂದು”

“ಅದೇ ? ದೇವಲೋಕದಲ್ಲಿ, ಇಂದ್ರನಾದ ಮೇಲೆ, ನಿನಗೆ ತಿಳಿಯದ