ಪುಟ:Mahakhshatriya.pdf/೨೦೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಸಿದ್ಧನಾಗಿರಬೇಕೆಂದು ಹಾಗೆ ಮಾಡಿದ್ದೇನೆ. ಅದರಿಂದ ಉಪಕಾರದ ಭಾರವೂ ಇಲ್ಲ. ಋಣವೂ ಇಲ್ಲ.”

ದೇವಗುರುವು ಯೋಚಿಸಿದನು : “ಈತನು ಬ್ರಹ್ಮವಿದ್ಯಾರ್ಥವಾಗಿ ಸರ್ವವನ್ನೂ ತ್ಯಾಗ ಮಾಡುವಾಗ, ನಾವು ಅಡ್ಡಿ ಬರುವುದು ಸರ್ವಥಾ ಸರಿಯಲ್ಲ. ಅದರಿಂದ ನಾನು ಹೀಗೆ ಹೇಳುವೆನು : ‘ಶಿಬಿಕೋತ್ಸವವಾಗುವವರೆಗೂ ಶಚೀಂದ್ರರು ಈ ಇಂದ್ರನು ಮಿತ್ರರೂ ಅನುಯಾಯಿಗಳೂ ಆಗಿರಲಿ.’

ಅಗ್ನಿ ವಾಯುಗಳು ‘ಆಗಬಹುದು’ ಎಂದರು. ಶಚಿಯು “ಅದುವರೆಗೂ ವಿರಜಾದೇವಿಯು ಇಂದ್ರಾಣಿಯಾಗಿರಲಿ” ಎಂದಳು. ಆಕೆಯು ಒಪ್ಪಲಿಲ್ಲ. ಆಜ್ಞಾಧಾರಿಗಳಾಗಿರುವ ವಿಚಾರದಲ್ಲಿ ಇನ್ನೂ ಅಷ್ಟು ಮಾತುಕಥೆ ನಡೆಯಿತು. ಕೊನೆಗೆ ಸುರಗುರುವು ಹೇಳಿದಂತೆ ಶಚೀಂದ್ರರು ಇಂದ್ರಮಿತ್ರರೂ ಅನುಯಾಯಿಗಳೂ ಆಗಿರುವುದೆಂದು ಗೊತ್ತಾಯಿತು.

* * * *