ಪುಟ:Mahakhshatriya.pdf/೩೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಶಿಕ್ಷೆಯು ಯಾರಿಗೆ ? ರಕ್ಷಾರಹಿತರಿಗೆ. ಇತರರಿಗೆ ರಕ್ಷೆಯನ್ನು ಕೊಡಬಲ್ಲವರು, ಆತ್ಮರಕ್ಷೆಯನ್ನೂ ಮಾಡಿಕೊಳ್ಳಬಲ್ಲರು ಎಂಬುದೂ ವಿದಿತವಷ್ಟೆ ?”

“ಹೀಗೆ ಮಾಡಬಾರದುದನ್ನು ಮಾಡಿ ಅನರ್ಥಪರಂಪರೆಗೆ ಕಾರಣವಾಗುವುದು ಸರಿಯಲ್ಲ.”

“ಹೌದು. ಅನರ್ಥವಾಗುವುದು. ಆದರೆ, ಅದು ನಮಗಲ್ಲ ಅನರ್ಥವೆಂದವರು ಯಾರಿಗೆ ಎಂದು ತಿಳಿದುಕೊಂಡಿದ್ದರೆ ಒಳ್ಳೆಯದು.”

ತುಂಟಕುದುರೆಯಂತೆ ಯಾವುದಕ್ಕೂ ಸಗ್ಗದ ಆಚಾರ್ಯನಿಂದ ಅವಮಾನಿತನಾಗಿ ಅದರಿಂದ ಖೇದಪಡುತ್ತ ದೇವರಾಜನು ಸಭ್ಯತನವನ್ನು ತಿರಸ್ಕರಿಸಲಾಗದೆ, ಯಥೋಚಿತವಾಗಿ ಗೌರವಿಸಿ, ಬೀಳ್ಕೊಂಡು ಹೊರಟು ಹೋದನು.

* * * *