ಪುಟ:Mahakhshatriya.pdf/೪೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

“ದಾನವರೆಲ್ಲರೂ ಸೇರಿ ವಿಶ್ವರೂಪನ ವಿಶ್ವಾಸದಿಂದ ತಮಗೆ ಲಭಿಸಿದ ತೇಜಸ್ಸನ್ನೆಲ್ಲಾ ಸಮೂಹಗೊಳಿಸಿ, ಅದನ್ನು ತಮಗೆ ಜಯಪ್ರಾಪ್ತಿಯಾಗುವಂತೆ ಪ್ರಾರ್ಥಿಸಿದರು. ಆ ತೇಜಸ್ಸು “ನಾನು ಏನಿದ್ದರೂ ನಿಮ್ಮನ್ನು ಕಾಪಾಡಬಲ್ಲೆನಲ್ಲದೆ, ದೇವತೆಗಳ ತೇಜಸ್ಸನ್ನು ನುಂಗುವಷ್ಟು ಶಕ್ತಿ ನನಗಿಲ್ಲ. ನೀವು ಹೋಗಿ ತ್ವಷ್ಟೃಬ್ರಹ್ಮನನ್ನು ರೇಗಿಸಿ, ಆತನಿಗೆ ಇಂದ್ರಶತ್ರುವೊಬ್ಬನು ಹುಟ್ಟುವಂತೆ ಒಂದು ಯಾಗ ಮಾಡಿಸಿ, ಅಂಥವನು ಬಂದರೆ, ಆತನಿಗೆ ತನ್ನ ಬಲವನ್ನೂ ಕೊಟ್ಟು ನಿಮ್ಮನ್ನು ಗೆಲ್ಲಿಸುವೆನು’ ಎಂದಿತು. ಈಗ ದಾನವೇಂದ್ರರೆಲ್ಲಾ ತ್ವಷ್ಟೃವಿನ ಬಳಿ ಹೋಗಲಿರುವರು” ಎಂದು ಹೇಳಿದನು.

ಇಂದ್ರನು ಅದನ್ನು ಕೇಳಿ ದಾನವಪ್ರಯತ್ನವು ನಡೆಯದಂತೆ, ತಾನೇ ವಸ್ತ್ರಭೂಷಣಾದ್ಯಲಂಕಾರಗಳನ್ನು ತೆಗೆದುಕೊಂಡು ತ್ವಷ್ಟೃಬ್ರಹ್ಮನ ದರ್ಶನ ಮಾಡಿ ಅ ದಂಪತಿಗಳನ್ನು ಸಾಂತ್ವವಚನಗಳಿಂದ ಆರಾಧಿಸಿ ಅವರ ಕೋಪವನ್ನು ನೀಗಿ ಬರುವುದು ಎಂದುಕೊಂಡನು.

* * * *