ಪುಟ:Mahakhshatriya.pdf/೪೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಒಳ್ಳೆಯದೇ ಆಗುವಂತೆ ಮಾಡೋಣ. ಇಂದ್ರನಿಗೂ ಬುದ್ಧಿಬರಲಿ” ಎಂದು ಸುಮ್ಮನಾದನು. ಅದರೂ ಜಗತ್ಕಲ್ಯಾಣ ಬುದ್ಧಿಯಿಂದ ಅದನ್ನು ಮತ್ತೆ ವಿಚಾರಮಾಡಿ ನೋಡಿ “ತ್ವಷ್ಟೃವಿನ ಸಂಕಲ್ಪವೂ ಹಾನಿಯಾಗಬಾರದು. ಇಂದ್ರನೂ ಇಲ್ಲವಾಗಬಾರದು. ಹಾಗೆ ಮಾಡು” ಎಂದು ಸರಸ್ವತಿಗೆ ಹೇಳಿ ತಾನು ಸುಮ್ಮನಾದನು.

ಯಾಗವು ನಡೆಯಿತು. ಪೂರ್ಣಾಹುತಿಯನ್ನು ಕೊಡುವಾಗ ತ್ವಷ್ಟೃವಿಗೆ ಕೊಂಚ ವಿಸ್ಮೃತಿಯಾಯಿತು. “ಇಂದ್ರಶತ್ರೋ ! ವರ್ಧಸ್ವ ! ಇಂದ್ರ ಶತ್ರುವೇ ವರ್ಧಿಸು” ಎಂದು ಹೋಮಮಾಡಿದನು. ಸರಸ್ವತಿಯು ಇಂದ್ರನ ಶತ್ರುವೆ ಎಂಬ ತ್ವಷ್ಟೃವಿನ ಅಭಿಪ್ರಾಯವು ಭಿನೈಸುವಂತೆ ಮಾಡಿ, ಇಂದ್ರನು ಯಾವನಿಗೆ ಶತ್ರುವೋ ಅವನು ಎಂದು ಅಭಿಪ್ರಾಯ ಬರುವಂತೆ ಸ್ವರಭೇದ ಮಾಡಿಬಿಟ್ಟಳು. ಅದನ್ನು ಯಜಮಾನನಾದಿಯಾಗಿ ಬ್ರಹ್ಮನವರೆಗೆ ಯಾರೂ ಗಮನಿಸಲಿಲ್ಲ. ಪೂರ್ಣಾಹುತಿಯಾಗುತ್ತಲೂ ಕರಾಳಾಕೃತಿಯೊಂದು ಹುಟ್ಟಿಬಂತು : “ನನ್ನನ್ನು ಏತಕ್ಕೆ ಸೃಷ್ಟಿಸಿದಿರಿ?” ಎಂದು ಗರ್ಜಿಸಿತು. “ನೀನು ಇಂದ್ರನನ್ನು ಧ್ವಂಸಮಾಡು ಹೋಗು’' ಎಂದು ಯಜಮಾನನು ಅದಕ್ಕೆ ವಿಧಾಯಕ ಮಾಡಿದನು. ಎಲ್ಲರೂ ಸೇರಿ ಆ ಕೃತ್ಯದ ಪ್ರಭಾವವು ದಿನಕ್ಕೊಂದು ಬಾಣಪ್ರಮಾಣ ಸುತ್ತಲೂ ಬೆಳೆಯುವಂತೆ ವರವನ್ನು ಕೊಟ್ಟರು. ಅದು ಹುಟ್ಟಿ ಬಂದು, ಇವರು ವರಪ್ರದಾನ ಮಾಡುತ್ತಿದ್ದ ಹಾಗೆಯೇ ಮೂವತ್ತು ವರುಷದ ವೀರಪುರುಷನಾಯಿತು. ದಾನವೇಂದ್ರರು ಬಂದು “ಅಯ್ಯಾ, ನೀನು ನಮಗೆ ಒಂದು ವರ ಕೊಡಬೇಕು. ಈ ಯಾಗದಲ್ಲಿ ನಮ್ಮ ಗುರುಗಳು ವಹಿಸಿ ಭಾಗವನ್ನು ಗಮನಿಸಿ ನಮ್ಮ ಪ್ರಾರ್ಥನೆಯನ್ನು ಗೌರವಿಸು” ಎಂದು ಪ್ರಾರ್ಥಿಸಿದರು. ಆ ವೀರಪುರುಷನು “ಆಗಬಹುದು” ಎಂದು ವರವನ್ನು ಕೊಡಲು, “ನೀನು ನಮ್ಮ ಮುಖಂಡನಾಗಿರು. ನಮ್ಮಲ್ಲಿ ವಿಶ್ವರೂಪಾಚಾರ್ಯನು ಅನುಗ್ರಹ ಮಾಡಿರುವ ತಪಸ್ಸಿದೆ. ಅದನ್ನು ನಿನಗೆ ಒಪ್ಪಿಸುವೆವು, ನೀನು ಅದನ್ನು ಸ್ವೀಕರಿಸು. ನೀನು ಇಂದ್ರನ ಮೇಲೆ ದಾಳಿಯಿಡುವಾಗ ನಿನ್ನೊಡನೆ ಬರಲು ಅಸುರ ಸೇನೆಗೆ ಅಪ್ಪಣೆಯನ್ನು ಕೊಡು?” ಎಂದರು. ಅವನು ‘ಆಗಲಿ’ ಎಂದು ವರವನ್ನು ಕೊಟ್ಟನು. ಎಲ್ಲರೂ ಸೇರಿ ಅವನಿಗೆ ‘ವೃತ್ರ’ ಎಂದು ಹೆಸರಿಟ್ಟರು. ಆತನಿಗೆ ಶುಕ್ರನು ಆಚಾರ್ಯನಾದನು. ತಾನು ಸುರನಲ್ಲ ಸುರಪತಿಯ ವಿನಾಶಕ್ಕಾಗಿ ಹುಟ್ಟಿದವನು ಎಂದು ಅವನು ತನ್ನನ್ನು ವೃತ್ರಾಸುರನೆಂದು ಕರೆದುಕೊಂಡನು.

ಮಹೇಂದ್ರನು ತಾನು ಮಾಡಿದ ಅಡ್ಡಿಗಳು ಯಾವುವೂ ಫಲಿಸದೆ, ಯಾಗವು