ಪುಟ:Mahakhshatriya.pdf/೫೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ನಿರ್ವಿಘ್ನವಾಗಿ ನೆರವೇರಿತು ಎಂದು ಬಹುವಾಗಿ ಹೆದರಿದನು. ತನ್ನ ಇಂದ್ರತ್ವವು ಮಾತ್ರವಲ್ಲ ತಾನೂ ವಿಶ್ವರೂಪಾಚಾರ್ಯನಂತೆ ವೃತ್ರಾಸುರನಿಗೆ ಬಲಿಯಾಗುವೆನೆಂಬ ಶಂಕೆಯು ತಾನೇತಾನಾಯಿತು. ಜೊತೆಗೆ ಶತ್ರುವು ಅಸುರನೆಂದು ಹೆಸರಿಟ್ಟು ಕೊಂಡುದೂ, ದಾನವೇಂದ್ರನು ಅವನನ್ನು ಪ್ರಾರ್ಥಿಸಿದುದೂ, ಅವನು ಒಪ್ಪಿದುದೂ, ಶುಕ್ರಾಚಾರ್ಯನನ್ನು ವರಿಸಿದುದೂ ಎಲ್ಲವೂ ತನ್ನ ವಿನಾಶಕ್ಕೆ ಕಾರಣಗಳು ಎಂದು ತಿಳಿದು ಏನು ಮಾಡಬೇಕೋ ತಿಳಿಯದೆ ಚಿಂತಾಗ್ರಸ್ಥನಾದನು.

ಸರಸ್ವತಿಯ ಸ್ವರಭೇದದಿಂದ ಅರ್ಥಭೇದವಾಗುವಂತೆ ಮಾಡಿದ ರಹಸ್ಯವು ಆತನಿಗೂ ತಿಳಿದಿರಲಿಲ್ಲ.

* * * *