ಪುಟ:Mahakhshatriya.pdf/೭೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೬.ಸೋಲೋ ಗೆಲುವೋ?

ವೃತ್ರೇಂದ್ರನು ತ್ರೈಲೋಕ್ಯಾಧಿಪತ್ಯವನ್ನು ಪಡೆದ ದಿವಸ. ಇಂದು ಅಮರಾವತಿಯಲ್ಲಿ ಮಾತ್ರವಲ್ಲ. ಭೋಗವತಿಯಲ್ಲಿಯೂ ದೊಡ್ಡ ಹಬ್ಬ. ಹಬ್ಬವೆಂದರೆ ಇನ್ನೇನು? ಸ್ವಚ್ಛಂದ ಭೋಗ. ಎಲ್ಲರೂ ಹೊಸ ತೊಡಿಗೆ ತೊಟ್ಟು ಔತಣದ ಊಟ ಉಂಡು, ಅಮಿತವಾದ ಭೋಗವನ್ನು ನಿರೀಕ್ಷಿಸುತ್ತ ಸಂಜೆಯಾದೀತೆ ಎಂದು ಕಾದಿದ್ದಾರೆ. ಆವೊತ್ತಿನ ವಿಶೇಷವೆಂದರೆ, ಹಿಂದಿನಿಂದ್ರನು ಇವೊತ್ತಿನಿಂದ್ರನಿಗೆ ತನ್ನ ವಿಶ್ವಾಸದ ಕಾಣಿಕೆಯೆಂದು ಜೀವರತ್ನಗಳ ಮಾಲೆಯೊಂದನ್ನು ಒಪ್ಪಿಸಿದ್ದಾನೆ. ಇಂದ್ರನು ಅದನ್ನು ಮೆಚ್ಚಿಕೊಂಡು ಶಚೀಪತಿಯನ್ನು ಭೋಜನಕ್ಕೆ ಕರೆದು ತನ್ನ ಮಗ್ಗುಲಲ್ಲಿ ಕೂರಿಸಿಕೊಂಡು ಊಟ ಮಾಡಿದ್ದಾನೆ. ಇದುವರೆಗೆ ಅಸುರಾಚಾರ್ಯನಿಂದ ಹಿಡಿದು ದಾನವರೆಲ್ಲರಿಗೂ ಹಿಂದಿನ ಇಂದ್ರನು ಏನು ಸಂಚುಮಾಡುವನೋ ಎಂದು ಸಂಶಯವಿದ್ದುದು ಇಂದು ಮಾಯವಾಗಿದೆ. ಊಟದ ಸಮಯದಲ್ಲಿ ಎಲ್ಲರಿಗೂ ಆನಂದವೋ ಆನಂದ. ಶತ್ರುಗಳಾದ ದೇವದಾನವರು ಇಂದು ಪರಮಸ್ನೇಹಿತರಾಗಿದ್ದಾರೆ. ಇಂದಿನ ಆನಂದದಲ್ಲಿ ಹಿಂದಿನ ದ್ವೇಷವನ್ನೇ ಕೊಟ್ಟುಬಿಟ್ಟು ಶುದ್ಧವಾದ ಹೃದಯದಿಂದ, ಎರಡು ನದಿಗಳು ಬೆರೆಯುವಂತೆ ಬೆರೆತಿದ್ದಾರೆ. ಅಸುರಾಚಾರ್ಯನು “ಇದೇನು ಇಂದಿನ ವಿಶೇಷ? ದೇವತೆಗಳು ತಮ್ಮ ವೈಭವವನ್ನೇ ಮರೆತು ನಮಗೆ ದ್ವಿತೀಯರಾಗಿ ಇರಲು ಒಪ್ಪಿಕೊಂಡಂತೆ ಇದೆಯಲ್ಲ? ಅಥವ ವೃತ್ರಪ್ರಭಾವದ ಮೇಲೆ ತಮ್ಮದೇನೂ ಇನ್ನು ನಡೆಯುವುದಿಲ್ಲವೆಂದು ಮನಗಂಡು ಯತ್ನವಿಲ್ಲದೆ ಈ ಸೋಲಿಗೆ ಒಪ್ಪಿಕೊಂಡಿರುವರೋ?” ಎಂದು ಯೋಚಿಸುತ್ತಿದ್ದಾನೆ. ಆದರೂ ಆ ಅಮಲು ಎಲ್ಲೆಲ್ಲಿಗೋ ಎಳೆದುಕೊಂಡು ಹೋಗುವ ಮನಃಪ್ರವಾಹದಲ್ಲಿ ಕೊಚ್ಚಿಹೋಗುತ್ತಾನೆ.

ಸುರಾಚಾರ್ಯನೂ ಯೋಚಿಸುತ್ತಿದ್ದಾನೆ ; “ವೃತ್ರಪ್ರಭಾವವು ಇಳಿವೇಗವಾಗಿದೆ. ದಾನವೇಂದ್ರನ ತೇಜಸ್ಸು ಅಭಿಭೂತವಾಗುತ್ತಿದೆ. ಇಲ್ಲದಿದ್ದರೆ, ಇವರು ಇಂದು ಸೋತಿರುವ ದೇವತೆಗಳ ಅಂತಸ್ತಿಗೆ ಇಳಿಯುತ್ತಿದ್ದರೆ? ಇವೊತ್ತೇ ಏನು ವೃತ್ರನ ಕೊನೆಯ ದಿನ? ಅಬ್ಬಾ ! ಅಸುರರಿಗೆ ಇಂದು ಏನೂ ಬೇಕಾಗಿಲ್ಲ ಬೇಕಾಗಿರುವುದೆಲ್ಲ ಅನ್ನಪಾನಭೋಗ ! ಆಗಲಿ. ಅವರು ಬೇಕಾದುದನ್ನು