ಪುಟ:Mahakhshatriya.pdf/೮೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ನನಗೆ ಅದರಿಂದ ಅಪಪ್ರಥೆ. ನೀನು ಸತ್ತರೆ, ಏಕಾಂತದಲ್ಲಿ ಮಿತ್ರನನ್ನು ಹೊಡೆದು ಕೊಂದೆಯೆಂದು ನನಗೆ ಕೆಟ್ಟ ಹೆಸರು. ಹೀಗೆ ನೀನು ಮಾಡಬಹುದೇ? ಹಾಗೂ ಕೆಟ್ಟ ಹೆಸರು. ಅದರಿಂದ ಈ ಕಾರ್ಯ ನನಗೆ ಬೇಡ.”

“ನಿನ್ನ ಪೌರುಷವನ್ನಾದರೂ ನೋಡೋಣ, ಹೊಡೆ ನಿನಗೆ ಕೆಟ್ಟ ಹೆಸರು ಬರದಿರಲಿ.”

ಮತ್ತೆ ಇಂದ್ರನು ಒಳಗೆ ಮಹಾವಿಷ್ಣುವಿನ ಪ್ರಾರ್ಥನೆಯನ್ನು ಮಾಡಿದನು. ನಾರಾಯಣನು ಅಂತರ್ಹೃದಯದಲ್ಲಿ ಗೋಚರನಾಗಿ, “ಹೊಡೆ, ಸಾಯಲೆಂದೇ ಹೊಡೆ, ಅದರಲ್ಲಿ ನಿನ್ನ ವಜ್ರಾಯುಧವನ್ನು ಅಭಿಮಂತ್ರಿಸಿ ಹೊಡೆ. ಶತ್ರುನಾಶವಾಗಲಿ” ಎಂದನು. ವೃತ್ರನೂ ಮತ್ತೆಯೂ ಬಲವಂತ ಮಾಡಿದನು.

ಇಂದ್ರನು ಯೋಚಿಸುವವನಂತೆ ಹೊರಗೆ ವಿಮುಖನಾಗಿದ್ದು ಒಳಗೆ ಚಿಂತಿಸಿದನು. “ಹೌದು. ಕಾಲವು ಹಗಲಲ್ಲ. ರಾತ್ರಿಯಲ್ಲ ಸಂಜೆ. ನೊರೆಯು ಒಣಗಿದುದಲ್ಲ ಹಸಿಯದಲ್ಲ. ಯಾವ ಆಯುಧವೂ ಇಲ್ಲ. ಭೂತವೂ ಸಾಯಲು ಸಿದ್ಧವಾಗಿದೆ. ಸರಿ” ಎಂದು ವಜ್ರವನ್ನು ಆ ನೊರೆಯಲ್ಲಿ ಆರೋಪಿಸಿ, “ಇದೋ ವೃತ್ರ, ನನ್ನ ಸರ್ವಶಕ್ತಿಯನ್ನೂ ಪ್ರಯೋಗಿಸಿ, ಈ ನೊರೆಯಿಂದ ನಿನ್ನನ್ನು ಹೊಡೆಯುವೆನು. ನನಗೆ ಮಿತ್ರದ್ರೋಹವು ಬರದಿರಲಿ. ಇದರಿಂದ ನೀನು ಸಾಯಬೇಕು” ಎಂದು ಅವನನ್ನು ಹೊಡೆದನು.

ನೊರೆಯು ಅವನ ಮೈಗೆ ತಾಕಿತೋ ಇಲ್ಲವೋ, ವಜ್ರಾಯುಧವು ತನ್ನ ಕೆಲಸವನ್ನು ಮಾಡಿತು. ಆ ಪರ್ವತಾಕಾರದ ದೇಹದಲ್ಲಿ ಒಂದು ಪರ್ವತಶೃಂಗದ ಮೇಲೆ ನಿಂತಿದ್ದ ಮತ್ತೊಂದು ಗಿರಿಯಂತಿದ್ದ ತಲೆಯು ಥಟ್ಟನೆ ಕತ್ತರಿಸಿಬಿತ್ತು. ಪರ್ವತಾಕಾರದ ಆ ದೇಹವು ಉರುಳಿ ಬಿತ್ತು.

ಇಂದ್ರನು ತಟ್ಟನೆ ತನ್ನ ಶಚಿಪತಿತ್ವವನ್ನೂ, ದೇವರಾಜತ್ವವನ್ನು ಧಾರಣ ಮಾಡಿಕೊಂಡು, “ಇದೊ ! ದೇವರಾಜನಾಗಿ, ಶಚಿಪತಿಯಾಗಿ ಅಪ್ಪಣೆಮಾಡುತ್ತಿರುವೆನು. ಈ ಪರ್ವತಾಕಾರದ ಶರೀರವನ್ನು ಹೊತ್ತು ನಿಂತಿದ್ದ ಪ್ರಾಣವು ಈಚೆಗೆ ಬರಲಿ ! ಶರೀರವನ್ನು ರಚಿಸಿರುವ ಪಂಚಭೂತಗಳೆಲ್ಲವೂ ಈ ಕ್ಷಣದಲ್ಲಿ ವಿಘಟಿತವಾಗಿ ಭೂತಗಳೊಡನೆ ಸೇರಿಹೋಗಲಿ.......” ಎಂದನು.

ಇನ್ನೂ ಏನು ಹೇಳಬೇಕೆಂದಿದ್ದನೋ, ಅಷ್ಟರಲ್ಲಿ ನೀರಿನಲ್ಲಿ ತೊಯ್ದು ಹೋಗಿ ತನ್ನ ಅಸ್ತಿತ್ವವನ್ನೇ ಕಳೆದುಕೊಂಡು ಬಟ್ಟೆಯು ಮುದ್ದೆಯಾಗಿ ಬೀಳುವಂತೆ, ಶುದ್ಧವಾಗಿ ನಿಶ್ಯಕ್ತನಾಗಿ ‘ಅಯ್ಯೋ !’ ಎಂದು ಬಿದ್ದುಬಿಟ್ಟನು.

ಅಗ್ನಿ, ವಾಯು, ಶಚೀ, ಬೃಹಸ್ಪತಿಗಳು ಕೂಡಲೇ ಅಲ್ಲಿಗೆ ಬಂದು ಇಂದ್ರನನ್ನು