ಈ ಪುಟವನ್ನು ಪ್ರಕಟಿಸಲಾಗಿದೆ
ಬೀಳದಂತೆ ಹಿಡಿದುಕೊಂಡರು. ಆತನ ಆಯುಧಗಳೆಲ್ಲವೂ ಸಾಂಗೋಪಾಂಗವಾಗಿ ಬಂದು ಆತನ ಸುತ್ತಲೂ ರಕ್ಷಣೆಗೆ ನಿಂತವು.
ಇತ್ತ ವೃತ್ರನ ದೇಹದಲ್ಲಿದ್ದ ಪ್ರಾಣವಾಯುವು ಹಾರಿಹೋಯಿತು. ಸ್ಥೂಲ ಭೂತಗಳೆಲ್ಲವೂ ಒಂದೇ ರೆಪ್ಪೆಮುಚ್ಚಿನೊಳಗೆ ಆ ದೇಹವನ್ನು ಬಿಟ್ಟು ತಮ್ಮ ತಮ್ಮ ಮೂಲಸ್ಥಾನದಲ್ಲಿ ಐಕ್ಯವಾದುವು. ವೃತ್ರನ ಅಂತಃಕರಣವು ಮಾತ್ರ ಅಲ್ಲಿಯೇ ಏನು ಮಾಡಬೇಕೋ ತಿಳಿಯದೆ ಒದ್ದಾಡುತ್ತಿತ್ತು.
* * * *