ಪುಟ:Mysore-University-Encyclopaedia-Vol-1-Part-2.pdf/೩೫೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಆಯುರ್ವೇದ ಆಯುರ್ವೆದವನ್ನು ತಿಳಿದುಬಂದು ಋಷಿಗಳಲ್ಲಿ ಪ್ರಚಾರಮಾಡಿದ. ಈ ಋಷಿಸಭೆಯನ್ನು ನಮ್ಮ ದೇಶದ ಮೊತ್ತಮೊದಲನೆಯ ವೈದ್ಯರ ಸಮ್ಮೇಳನವೆನ್ನಬಹುದು. ಇದರಲ್ಲಿ ಬೇರೆ ಬೇರೆ ದೇಶದ ವಿದ್ವಾಂಸರು ಭಾಗವಹಿಸಿದ್ದರು. ಇವರಲ್ಲಿ ಪುನರ್ವಸು, ಆತ್ರೇಯ ತನ್ನ ಆರು ಜನ ಶಿಷ್ಯರಾದ ಅಗ್ನಿವೇಶ, ಭೇಡ, ಜತೂಕರ್ಣ, ಪರಾಶರ, ಹಾರೀತ ಮತ್ತು ಕ್ಷಾರಪಾಣಿಗಳಿಗೆ ಈ ಶಾಸ್ತ್ರವನ್ನು ಹೇಳಿಕೊಟ್ಟ. ಇವರೆಲ್ಲರೂ ಪ್ರತ್ಯೇಕ ಪ್ರತ್ಯೇಕವಾಗಿ ಗ್ರಂಥಗಳನ್ನು ರಚಿಸಿದರು. ಅವುಗಳಲ್ಲಿ ಅಗ್ನಿವೇಶನ ತಂತ್ರವೇ ಶ್ರೇಷ್ಠವೆನಿಸಿತು. ಆದರೆ ಈ ಮೂಲಗ್ರಂಥ ಈಗ ದೊರೆತಿಲ್ಲ. ಪ್ರ.ಶ.ಪೂ. ಸು ೩ ಅಥವಾ ೨ನೆಯ ಶತಮಾನದಲ್ಲಿ ಚರಕಾಚಾರ್ಯ ಈ ತಂತ್ರವನ್ನು ಸಂಸ್ಕರಿಸಿದ. ಅಂದಿನಿಂದೀಚೆಗೆ ಇದಕ್ಕೆ ಚರಕಸಂಹಿತೆ ಎಂದು ಹೆಸರು ಬಂದಿದೆ. ಇತರರ ಗ್ರಂಥಗಳಲ್ಲಿ ಕೆಲವು ದೊರೆತಿಲ್ಲ. ದೊರೆತ ಗ್ರಂಥಗಳಲ್ಲಿ ಎಷ್ಟೋ ಭಾಗಗಳು ನಷ್ಟವಾಗಿದೆ. ಪರಾಶರನು ಹಸ್ತ್ಯಾಯುರ್ವೇದದಲ್ಲೂ ನಿಪುಣನಾಗಿದ್ದನೆಂದು ತಿಳಿದುಬಂದಿದೆ. ಆಯುರ್ವೇದ ಗ್ರಂಥಗಳ ಹಿಂದಿನ ವ್ಯಾಖ್ಯಾನಕಾರರು ಈ ಗ್ರಂಥಗಳಿಂದ ಕೆಲವು ಆಧಾರಗಳನ್ನು ಉಲ್ಲೇಖಿಸಿದ್ದಾರೆ. ಪುನರ್ವಸು ಆತ್ರೇಯ ತ್ರಿದೋಷಸಿದ್ಧಾಂತವನ್ನು ಕ್ರಮಬದ್ಧ ರೂಪಕ್ಕೆ ತಂದ. ಹಿಂದೆ ಮೂಲಿಕಾದಿಗಳನ್ನು ಅನುಭವದಿಂದ ಉಪಯೋಗಿಸುತ್ತಿದ್ದುದನ್ನು ಮಾರ್ಪಡಿಸಿ ಅವುಗಳ ರಸ, ಗುಣ, ವೀರ್ಯ, ವಿಪಾಕ ಮತ್ತು ಪ್ರಭಾವಗಳಾನ್ನು ಕಂಡುಹಿಡಿದು ದೋಷಗಳಿನುಸಾರವಾಗಿ ಚಿಕಿತ್ಸಿಸುವುದನ್ನು ಪ್ರಚಾರ ಮಾಡಿದ. ರಸಗಳು ಆರು ಮಾತ್ರ ಎಂಬುದನ್ನು ಧೃಢಪಡಿಸುವುದಕ್ಕೆ ಒಂದು ಸಮ್ಮೇಳನವನ್ನೇ ನಡೆಸಿದ. ಆಗಿಂದಾಗ್ಯೆ ತದ್ವಿದ್ಯಾಸಂಭಾಷಾ ಪರಿಷತ್ತುಗಳನ್ನು ನಡೆಸುತ್ತಿದ್ದ. ಎಲ್ಲ ಕಡೆಗಳಿಂದಲೂ ಪ್ರಸಿದ್ದ ವೈದ್ಯರು ಸೇರಿ ಚರ್ಚಿಸುತ್ತಿದ್ದರು. ಎಲ್ಲರೂ ಆತ್ರೇಯನ ತೀರ್ಮಾನಗಳನ್ನೇ ಅಂಗೀಕರಿಸುತ್ತಿದ್ದರು. ಈತ ಬಹುಶಃ ಪ್ರ.ಶ.ಪೂ. ೮-೭ನೆಯ ಶತಮಾನದಲ್ಲಿದ್ದನೆಂದು ವಿದ್ವಾಂಸರು ಅಭಿಪ್ರಾಯಪಡುತ್ತಾರೆ. ಆತ್ರೇಯಪಂಥದವರು ವಿಶೇಷವಾಗಿ ಕಾಯಚಿಕಿತ್ಸೆಗೆ ಪ್ರಾಧಾನ್ಯ ಕೊಟ್ಟಿರುತ್ತಾರೆ; ಆಮ್ಲ ಉತ್ಪತ್ತಿ, ಅದರಿಂದಾಗುವ ವಿವಿಧ ರೋಗಗಳು-ಇವನ್ನು ವಿವರಿಸಿರುತ್ತಾರೆ. ಎರಡನೆಯ ಪಂಥವೆಂದರೆ ಭಗವಾನ್ ಧನ್ವಂತರಿಯದು. ಈತ ಕ್ಷೀರಸಮುದ್ರದ ಮಥನಕಾಲದಲ್ಲಿ ಉದ್ಭವಿಸಿದನೆಂದೂ ಕೈಯ್ಯಲ್ಲಿ ಅಮೃತಕಳಶವನ್ನಿಟ್ಟುಕೊಂಡು ಬಂದ ಆದಿದೇವನೆಂದೂ ರಾಮಾಯಣ, ಮಹಾಭಾರತ ಮತ್ತು ಹರಿವಂಶಪುರಾಣಗಳಲ್ಲಿ ಹೇಳಿದೆ. ಇವನ್ನನ್ನು ವಿಷ್ಣುವಿನ ಅವತಾರವೆಂದು ಇಂದಿಗೂ ವೈದ್ಯರು ಪೂಜಿಸುತ್ತಾರೆ. ವಿಷ್ಣು, ಬ್ರಹ್ಮವೈವರ್ತ ಮತ್ತು ವಾಯುಪುರಾಣಗಳ ಪ್ರಕಾರ ಧನ್ವಂತರಿ ಸೂರ್ಯನಿಂದ ಆಯುರ್ವೀದವನ್ನು ಕಲಿತನೆಂದು ತಿಳಿಯುತ್ತದೆ. ಸ್ಕಂದ, ಗರುಡ ಮತ್ತು ಮಾರ್ಕಂಡೇಯ ಪುರಾಣಗಳ ಪ್ರಕಾರ ಗಾಲವಋಷಿಯ ಮಗ ಸರ್ವಶಾಸ್ತ್ರ ಸಂಪನ್ನನಾಗಿದ್ದು ಅಶ್ವಿನಿ ಕುಮಾರರ ಶಿಷ್ಯನಾಗಿ ಧನ್ವಂತರಿ ಎಂಬ ಹೆಸರನ್ನು ಪಡೆದ. ಸುಶ್ರುತಸಂಹಿತೆಯ ಪ್ರಕಾರ ಕಾಶೀರಾಜನಾದ ದಿವೋದಾಸ ಆದಿದೇವ ದನ್ವಂತರಿಯ ಅವತಾರಪುರುಷನೆಂದೂ ಶಲ್ಯತಂತ್ರವನ್ನು ಪ್ರಧಾನವಾಗಿ ಉಪದೇಶ ಮಾಡುವುದಕ್ಕಾಗಿ ಭೂಲೋಕಕ್ಕೆ ಪುನಃ ಬಂದನೆಂದೂ ಹೇಳಿದೆ. ಅಹಂ ಹಿ ಧನ್ವಂತರಿರಾದಿದೇವೋ ಜರಾರುಜಾಮೃತ್ಯುಹರೋಮರಾಣಾಮ್೧ ಶಲ್ಯಾಂಗಮಂಗೈರಪರೈರುಪೇತಂ ಪ್ರಾಪ್ತೋಸ್ಮಿಗಾಂಭೂಯ ಇಹೋಪದೇಷ್ಟುಮ್೧೧ (ಸುಶ್ರುತಸಂಹಿತಾ) ದಿವೋದಾಸನೆಂಬ ಧನ್ವಂತರಿ ಸುಶ್ರುತನನ್ನೇ ಮುಂದಾಗಿಟ್ಟುಕೋಡು ಔಪಧೇನವ, ವೈತರಣ, ಔರಭ್ರ ಮುಂತಾದವರಿಗೆ ಶಲ್ಯಚಿಕಿತ್ಸೆಯನ್ನೇ ಮುಖ್ಯವಾಗಿ ಉಪದೇಶಿಸಿದ. ಚರಕಸಂಹಿತೆಲಲ್ಲಿ ಅನುಸರಿಸಿರುನಂತೆಯೇ ಸುಶ್ರುತಸಂಹಿತೆಯಲ್ಲಿ ದ್ರವ್ಯಗಳ ರಸಾದೆಗಳು, ದೋಷಭೇದ-ಮುಂತಾದವು ವಿವರಿಸಲ್ಪಟ್ಟಿವೆ. ಶಸ್ತ್ರಚಿಕಿತ್ಸೆಗೆ ಅವಶ್ಯವಾಗಿ ಆಮ, ಪಚ್ಯಮಾನ ಮತ್ತು ಪಕ್ವವಿದ್ರಧಿ, ಕ್ರಿಯಾಕಾಲ, ಪೂರ್ವಕರ್ಮ-ಇವು ವಿಶೇಷವಾಗಿ ವರ್ಣಿಸಲ್ಪಟ್ಟಿದೆ. ಮೂಢಗರ್ಭಚಿಕಿತ್ಸೆ ಕ್ಯಾಟರಾಕ್ಟ್ ರೈನೊಪ್ಲಾಸ್ಟ್ರಿ ಎಂಬ ನೇತ್ರ ರೋಗ ನಾಸಾ ರೋಗ ಮುಂತಾದವುಗಳ ಶಸ್ತ್ರಚಿಕಿತ್ಸೆಗಳನ್ನು ಆ ಕಾಲದಲ್ಲಿ ನಡೆಸುತ್ತಿದ್ದರು. ದಿವೋದಾಸ ಇಂದ್ರನ ಶಿಷ್ಯನೆಂದು ಸುಶ್ರುತಸಂಹಿತದಲ್ಲಿ ಹೇಳಿದೆ. ಈತ ಪ್ರ.ಶ.ಪೂ. ೮ನೆಯ ಶತಮಾನದಲ್ಲಿದ್ದನೆಂದು ಗೊತ್ತುಪಡಿಸಿದ್ದಾರೆ. ಧನ್ವಂತರಿಯ ಹೆಸರಿನಲ್ಲಿ ಸುಮಾರು ಎಂಟು ಗ್ರಂಥಗಳು, ದೆವೋದಾಸನ ಹೆಸರಿನ ಚಿಕಿತ್ಸಾದರ್ಶನವೆಂಬೊದು ಮತ್ತು ಕಾಶೀರಾಜನ ಚಿಕಿತ್ಸಾಕೌಮುದೀ ಮತ್ತು ಅಜೀರ್ಣಾಮೃತಗಳೆಂಬ ಗ್ರಂಥಗಳಿವೆ. ಸಿಶ್ರುತ ವಿಶ್ವಾಮಿತ್ರನ ಮಗ. ಈತನ ಸಂಹಿತ ಭಿಕ್ಷು ನಾಗಾರ್ಜುನನಿಂದ ಪ್ರತಿ ಸಂಸ್ಕರಣವಾಗಿ ದೊರೆತಿದೆ. ಮೂಲಗ್ರಂಥದಲ್ಲಿ ಐದು ಸ್ಥಾನಗಳು ದೊಡ್ಡ ಶಸ್ತ್ರಕ್ರಿಯೆಗಳನ್ನೊಳಗೊಂಡಿತ್ತೆಂದೂ ಮುಂದೆ ಬೇರೆಯವರು ನಷ್ಟಭಾಗವನ್ನು ಉತ್ತರ ತಂತ್ರದಲ್ಲಿ ಸೇರಿಸಿದರೆಂದೂ ಸಂಶೋಧಕರು ತಿಳಿಸುತ್ತಾರೆ. ಶಸ್ತ್ರಚಿಕಿತ್ಸೆಯ ಗ್ರಂಥದಲ್ಲಿ ಇದೇ ಮೊದಲನೆಯದು. ಶಸ್ತ್ರಗಳ ವರ್ಣನೆ, ಕ್ರಿಯಾಕರ್ಮ ಮತ್ತು ಪಶ್ಚಾತ್ಕರ್ಮ ಇವು ಎಲ್ಲರಿಗೂ ಆಶ್ಚರ್ಯವನ್ನುಂಟುಮಾಡುತ್ತವೆ. ಅನೇಕರು ಈ ಸಂಹಿತೆಗೆ ವ್ಯಾಖ್ಯಾನ ಮಾಡಿದ್ದಾರೆ. ೮ನೆಯ ಶತಮಾನದಲ್ಲಿ ಈ ಸಂಹಿತ ಅರಬ್ಬಿ ಭಾಷೆಗೆ ಭಾಷಾಂತರಿಸಲ್ಪಟ್ಟಿತು. ಮಹಾಭಾರತದಲ್ಲಿ ಧನ್ವಂತರಿ ಪಂಥದ ಕಾಶ್ಯಪನ ಹೆಸರು ಉಲ್ಲೇಖನವಾಗಿದೆ. ಈತ ವಿಷಚಿಕಿತ್ಸಕನೆಂದೂ ಪರೀಕ್ಷಿತರಾಜನನ್ನು ತಕ್ಷಕನೆಂಬ ಸರ್ಪ ಕಚ್ಚಿದಾಗ ಚಿಕಿತ್ಸಿಸಲು ಹೋಗಿದ್ದನೆಂದೂ ತಿಳಿಸಲಾಗಿದೆ. ಬಾಲೋಪಚಾರ, ಬಾಲರೋಗಗಳ ಚಿಕಿತ್ಸೆಯಲ್ಲಿ ನಿಷ್ಣಾತನಾದ ಕಾಶ್ಯಪ ಪ್ರ.ಶ.ಪೂ ೬ನೆಯ ಶತಮಾನಕ್ಕೆ ಸೇರಿದವ. ಈತ ರಚಿಸಿರುವ ಕಾಶ್ಯಪಸಂಹಿತದಲ್ಲಿ ಬಹುಭಾಗ ನಷ್ಟವಾಗಿದೆ. ಆದರೂ ಇದರಲ್ಲಿ ಅಡಕವಾಗಿರುವ ಅನೇಕ ಸಂಗತಿಗಳು ಸಂಶೋಧನೆ ಮಾಡುವವರಿಗೆ ಉಪಯುಕ್ತವಾಗಿವೆ. ಪ್ರ.ಶ.ಪೂ. ಒಂದನೆಯ ಶತಮಾನದಲ್ಲಿ ಭಿಕ್ಷುರಾತ್ರೇಯನೆಂಬ ಪ್ರಸಿದ್ಧ ಪ್ರಾಧ್ಯಾಪಕ ತಕ್ಷಶಿಲೆಯ ವಿಶ್ವವಿದ್ಯಾನಿಲಯದಲ್ಲಿದ್ದ, ಈತನ ಶಿಷ್ಯ ಜೀವಕ ತಕ್ಷಶಿಲೆಯಲ್ಲಿ ವ್ಯಾಸಂಗ ಮಾಡಿ ಮಗಧದೇಶದ ಅನೇಕ ಕಡೆಗಳಲ್ಲಿ ಸಂಚರಿಸಿ ವೈದ್ಯವೃತ್ತಿಯನ್ನು ನಡೆಸಿದ. ಅನಂತರ ಬುದ್ಧದೇವನ ಆಸ್ಥಾನದ ಹೆಸರುವಾಸಿಯಾದ ವೈದ್ಯನಾದ. ಇವನ ಬುದ್ಧಿಚಾತುರ್ಯ, ಚಿಕಿತ್ಸಾಕೌಶಲಗಳು ಟಿಬೆಟ್, ಚೀನ ಪ್ರಾಂತ್ಯಗಳಲ್ಲೆಲ್ಲ ಹರಡಿದ್ದವು.ಈತನ ಕಾಲ ೬ನೆಯ ಶತಮಾನ. ಬೌದ್ಧಮತ ಪ್ರಚಾರದ ಮೂಲಕ ಆಯುರ್ವೇದ ಚಿಕಿತ್ಸೆ ಹಳ್ಳಿ ಹಳ್ಳಿಯಲ್ಲೂ ನಡೆಯುತಿತ್ತು. ದೇವ ಮತ್ತು ಋಷಿಗಣಗಳಲ್ಲಿ ಇನ್ನೂ ಅನೇಕ ವೈದ್ಯಶ್ರೇಷ್ಠರು ಆಯುರ್ವೇದವನ್ನು ಪ್ರಸಾರ ಮಾಡಿದರು. ಇವರೆಲ್ಲರೂ ಹಚ್ಚಾಗಿ ಗಿಡಮೂಲಿಕೆ ಮತ್ತು ಪ್ರಾಣಿಜದ್ರವ್ಯಗಳನ್ನೇ ಉಪಯೋಗಿಸುತ್ತಿದ್ದರು. ಪಾದರಸ, ಲೋಹಾದಿಗಳ ಪ್ರಯೋಗಗಳು ಬಹಳ ವಿರಳ. ಮೂರನೆಯದು ಶೈವಪಂಥ. ಈ ಪಂಥದ ವೈದ್ಯರು ಪಾದರಸವನ್ನೇ ಶಿವದ ರೂಪವೆಂದು ರಸಲಿಂಗ ಮಾಡಿ ಅದನ್ನು ಪೂಜಿಸುತ್ತಿದ್ದರು. ರಸವಾದದಲ್ಲಿ ಪರಾಕಾಷ್ಠೆಯನ್ನು ಪಡೆದು ಅದ್ಭುತ ಕಾರ್ಯಗಳನ್ನು ಮಾಡುತ್ತಿದ್ದರು. ರಸ, ತಾಮ್ರ ಮುಂತಾದುವನ್ನು ಚಿನ್ನವಾಗಿ ಪರಿವರ್ತಿಸುವುದನ್ನು ಸಾಧಿಸಿದ್ದರು. ಲೋಹಾದಿಗಳನ್ನು ಭಸ್ಮ ಮಾಡಿ ರೂಗಗಳನ್ನು ಚಮತ್ಕಾರವಾಗಿ ಹೋಗಲಾಡಿಸುತ್ತಿದ್ದರು. ಗೋವಿಂದ ಭಿಕ್ಷು, ಭಿಕ್ಷು ನಾಗಾರ್ಜುನ, ಸಿದ್ಧನಾಗಾರ್ಜುನ ಮುಂತಾದವರು ಈ ಶಾಸ್ತ್ರದಲ್ಲಿ ಪ್ರವೀಣರು. ಸಿದ್ಧನಾಗಾರ್ಜುನ ಪೂಜ್ಯಪಾದನೆಂಬ ಜೈನ ವೈದ್ಯನ ಸೋದರಳಿಯ ಪೂಜ್ಯಪಾದನಿಂದ ವಿದ್ಯೆ ಕಲಿತ. ಸ್ವಲ್ಪ ಕಾಲದ ಅನಂತರ ಈತ ಬೌದ್ಧಮತಾವಲಂಬಿಯಾಗಿ ನೇಪಾಳಾ, ಟಿಬೆಟ್ಟುಗಳಲ್ಲೆಲ್ಲ ಮತಪ್ರಚಾರ, ಆಯುರ್ವೇದಪ್ರಚಾರ ಮಾಡುತ್ತ ಕೊನೆಗೆ ಶ್ರೀಶೈಲದಲ್ಲಿ ನೆಲೆಸಿದ. ರಸಸಿದ್ಧಿಯನ್ನು ಪಡೆದುದರಿಂದ ಈತನಿಗೆ ಸಿದ್ಧನಾಗಾರ್ಜುನನೆಂಬ ಹೆಸರು ಬಂದಿದೆ. ಪ್ರ.ಶ.ಸು. ೬ನೆಯ ಶತಮಾನದಲ್ಲಿ ಕಾರ್ನಾಟಕದಲ್ಲಿ ಹುಟ್ಟಿ ಲೋಕಪ್ರಖ್ಯಾತನಾದ ಸಿದ್ಧನಾಗಾರ್ಜುನನನ್ನು ಯಾರೂ ಮರೆಯುವಂತಿಲ್ಲ. ಭದಂತನಾಗಾರ್ಜುನ ಏಳನೆಯ ಶತಮಾನಕ್ಕೆ ಸೇರಿದವ. ಈತನ ಹಲ್ಲುಗಳು ಸ್ವಚ್ಛವಾಗಿ ಹೊಳೆಯುತ್ತಿದ್ದುದರಿಂದ ಭದಂತನಾಗಾರ್ಜುನನೆಂದು ಹೆಸರು ಬಂದಿದೆ. ರಸವೈಶೇಷಿಕಸೂತ್ರವೆಂಬ ಷಡ್ರಸಗಳ ಪಾಂಚಭೌತಿಕತ್ವ, ರಸಭೇದ ಮುಂತಾದುವನ್ನೊಳಗೊಂಡ ಸಂಸ್ಕೃತ ಗ್ರಂಥವನ್ನು ರಚಿಸಿದ್ದಾನೆ. ಹೀಗೆ ಬ್ರಹ್ಮ, ವಿಷ್ಣು, ಮಹೇಶ್ವರರೆಂಬ ತ್ರಿಮೂರ್ತಿಗಳ ಅನುಯಾಯಿಗಳಾಗಿ ಆತ್ರೇಯ ಧಾನ್ವಂತರ ಮತ್ತು ಶೈವ ಪದ್ಧತಿಗಳು ಕ್ರಮೇಣ ಅಭಿವೃದ್ಧಿಗೆ ಬಂದುವು. ಪ್ರ.ಶ ಸುಮಾರು ೪ನೆಯ ಶತಾಮಾನದಲ್ಲಿ ಅಷ್ಟಾಂಗಸಂಗ್ರಹ ಮತ್ತು ಅಷ್ಟಾಂಗಹೃದಯಗಳನ್ನು ಬರೆದ ವಾಗ್ಭಟ ಸಿಂಧೂದೇಶದ ಸಿಂಹಗುಪ್ತನ ಮಗ. ಪ್ರ.ಶ ೧ ಅಥವಾ ೨ನೆಯ ಶತಮಾನದವರೆಗೆ ಕಾಯ, ಬಾಲ, ಗ್ರಹ, ಶಾಲಾಕ್ಯ, ಶಲ್ಯ, ವಿಷ, ರಸಾಯನ ಮತ್ತು ವಾಜೀಕರಣಗಳೆಂಬ ಆಯುರ್ವೇದದ ಎಂಟು ಭಾಗಗಳು ಶಾಸ್ತ್ರೀಯವಾಗಿ ಅಭ್ಯಾಸಲ್ಪಡುತ್ತಿದ್ದವು. ಅಲ್ಲಿಂದ ಮುಂದಕ್ಕೆ ೨೦೦ ವರ್ಷಗಳಲ್ಲಿ ದೇಶದ ರ್ರ್ಜಕೀಯ ಮತ್ತು ಮತೀಯ ಗೊಂದಲಗಳಿಂದ ಶಾಸ್ತ್ರಾಭಿವೃದ್ಧಿ ನಿಂತುಹೋಯಿತು. ಗ್ರಂಥಗಳು ಖಿಲವಾಗುತ್ತಾ ಬಂದವು. ವಾಗ್ಭಟ ತನ್ನ ಕಾಲದಲ್ಲಿ ದೊರೆತಷ್ಟು ವಿಷಯಗಳನ್ನೆಲ್ಲ ಕೂಡಿಹಾಕಿ ಚರಕ, ಸುಶ್ರುತ, ನಿಮಿ ಮುಂತಾದ ಸಂಹಿತೆಗಳ ಆಧಾರದ ಮೇಲೆ ತನ್ನ ಅಷ್ಟಾಂಗ ಗ್ರಂಥವನ್ನು ಬರೆದು ಉಪಕರಿಸಿದ್ದಾನೆ. ರಸರತ್ನಸಮುಚ್ಚಯಾದ ಗ್ರಂಥಕರ್ತ ಇದೇ ಹೆಸರುಳ್ಳ ಬೇರೊಬ್ಬನೆಂದು ಹೇಳಬಹುದು. ಏಕೆಂದರೆ ಶೈಲಿ, ತತ್ವಗಳು ಬೇರೆ ಬೇರೆ. ಅಷ್ಟಾಂಗಹೃದಯದಲ್ಲಿ ರಸದಯೋಗ ಅಥವಾ ಭಸ್ಮಪ್ರಯೋಗಗಳಿಲ್ಲ. ಒಂದೆರಡು ಕಡೆ ಧಾತುಗಳ ಪ್ರಯೋಗವಿದ್ದರೂ ಅವು ಪ್ರತ್ಯೇಕವಾದುವು. ವಾಗ್ಭಟನ ಅನಂತರ ಮಾಧವಕರ ರೋಗ ನಿಶ್ಚಯಮಾಡಲು ಮಾಧವನಿದಾನವನ್ನು ಬರೆದ. ಪಾಠಕ್ರಮಕ್ಕನುಸಾರವಾಗಿ ಪ್ರತ್ಯೇಕ ವಿಷಯವನ್ನುಳ್ಳದ್ದು. ಇದು ಮೊದಲನೆಯ ಗ್ರಂಥ. ಅನಂತ ಗ್ರಂಥಕರ್ತರಾದ ಶಾಧರ, ಭಾವಮಿಶ್ರರು ಮೂಲಿಕೆ ಮತ್ತು ರಸೌಷಧಗಳನ್ನು ತಮ್ಮ ಗ್ರಂಥಗಳಲ್ಲಿ ಸೇರಿಸಿದ್ದಾರೆ. ಮಾದವ ನಿದಾನ, ಶಾಧರಸಂಹಿತೆ ಮತ್ತು ಭಾವಪ್ರಕಾಶಗಳನ್ನು ಲಘು ತ್ರಯಿಗಳೆಂದೂ ಚರಕ. ಸುಶ್ರುತ, ಅಷ್ಟಾಂಗಸಂಗ್ರಹಗಳನ್ನು