ಪುಟ:Mysore-University-Encyclopaedia-Vol-2-Part-1.pdf/೧೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಆಲೀ, ಸಲೀಂ. ಪುಸ್ತಕಗಳು ಸಲೀಂ ಆಲೀಯವರಿಗೆ ಜೀವನದುದ್ದಕ್ಕೂ ಒಂದು ಗೀಳಿನಂತೆಯೇ ಅಂಟಿಕೊಂಡಿದ್ದವು. ಮಿಲರ್ಡ್ ಅವರ ಈ ಕೃಪೆಯನ್ನು ಸಲೀಂ ಆಲೀ ಅನೇಕ ಸಂದರ್ಶನಗಳಲ್ಲಿ ಕೃತಜ್ಞತೆಯಿಂದ ಸ್ಮರಿಸಿದ್ದಾರೆ. ಈ ಘಟನೆಯಾದ ಅನಂತರ ತಮ್ಮ ಬದುಕಿನ ಗುರಿ ತಿಳಿದ ಸಾಧಕನಂತೆ ಕಾರ್ಯವೆಸಗತೊಡಗಿದ ಸಲೀಂ ಮುಂದೆಂದೂ ಹಿಂದಿರುಗಿ ನೋಡಲಿಲ್ಲ. ಭಾರತದಲ್ಲಿ ಶೈಶವಾವಸ್ಥೆಯಲ್ಲೂ ಇದ್ದಿರದ ಪಕ್ಷಿಗಳ ಅಧ್ಯಯನ ಇವರ ಏಕಮೇವ ಗುರಿಯಾಯಿತು.

ತಮ್ಮ ಇತರ ಸಹೋದರಿಯರೊಂದಿಗೆ ಜನಾನ ಮೆಡಿಕಲ್ ಮಿಷನ್ ಶಾಲೆಗೆ (ಹೆಣ್ಣು ಮಕ್ಕಳ ಪ್ರೌಢಶಾಲೆಗೆ) ಸೇರಿದರು. ಇಲ್ಲಿ ಬಾಲಕರು ಮಾಧ್ಯಮಿಕ ಶಾಲೆಯವರೆಗೆ ಓದಲು ಅವಕಾಶವಿತ್ತು. ಅನಂತರ ಸಂತ ಜೇóವಿಯರ್ ಶಾಲೆಯನ್ನು ಸೇರಿದರು. ಒಬ್ಬ ಸಾಧಾರಣ ಬುದ್ಧಿಮತ್ತೆಯ ವಿದ್ಯಾರ್ಥಿಯಾಗಿದ್ದ ಸಲೀಂ ಆಲೀಗೆ ಶಾಲಾದಿನಗಳಲ್ಲಿ ಬಂದ ಒಂದೇ ಒಂದು ಬಹುಮಾನವೆಂದರೆ ಒಳ್ಳೆಯ ನಡತೆಗಾಗಿ ಇರಿಸಿದ್ದ ಅವರ್ ಅನಿಮಲ್ಫ್ರೆಂ ಡ್ಸ್ ಪುಸ್ತಕ ಬಹುಮಾನ! ಮುಂದೆ ತಮ್ಮ ಶಾಲಾದಿನಗಳನ್ನು ನೆನೆಸಿಕೊಂಡು ಸಲೀಂ ಹೇಳುತ್ತಾರೆ “...ಶಾಲೆಯ ಆ ತಿಳಿಗೇಡಿ ಲೆಕ್ಕಗಳನ್ನು ಮಾಡುವ ಬದಲು ಕಾಡಿನಲ್ಲಿ ಹಕ್ಕಿಗಳನ್ನು ಅಟ್ಟಿಕೊಂಡು ತಿರುಗುವುದು ಎಷ್ಟೋಪಾಲು ಸಂತೋಷದಾಯಕ ಕೆಲಸ...ಕಳೆದ ಅರ್ಧ ಶತಮಾನಕ್ಕೂ ಹೆಚ್ಚುಕಾಲ ಪಕ್ಷಿವೀಕ್ಷಣೆಯನ್ನು ಅದು ನೀಡುವ ಆತ್ಮಸಂತೋಷಕ್ಕಾಗಿ ಮಾಡಿದ್ದೇನೆ. ಪಕ್ಷಿಯವೀಕ್ಷಣೆ, ಅಧ್ಯಯನ ನನಗೆ ಈ ಯಾಂತ್ರಿಕ ಜಗತ್ತಿನ ಸಂದಿಗ್ಧ ನಾಗರಿಕತೆಯಿಂದ ಪಾರಾಗಿ ಕಣ್ಮನಗಳಿಗೆ ಆನಂದ ತುಂಬುವ ವಾತಾವರಣದಲ್ಲಿ ಆಶ್ರಯ ಪಡೆಯಲು ಇದು ಸಕಾರಣವಾದ ಸಬೂಬು. ಇದನ್ನು ಪಲಾಯನವಾದ ಎನ್ನಬಹುದು. ಆದರೆ ಈ ಪಲಾಯನವಾದ ಸಮರ್ಥನೆಯನ್ನೇನೂ ಹುಡುಕಬೇಕಾಗಿಲ್ಲ” ಎನ್ನುತ್ತಾ.

ಶಿಕ್ಷಣ ತ್ಯಜಿಸಿದ ಸಲೀಂ ಮಯನ್ಮಾರ್‍ನಲ್ಲಿ ಸಹೋದರ ನಡೆಸುತಿದ್ದ ಗಣಿಯನ್ನು ಸೇರಿಕೊಂಡರು. ಅಲ್ಲಿ ಮಾನವನಿಂದ ಹಾನಿಗೊಳಗಾಗದ ಕಾಡುಗಳಲ್ಲಿ ಸಾಕಷ್ಟು ಪಕ್ಷಿವೀಕ್ಷಣೆಮಾಡಲು ಸಲೀಂಗೆ ಅವಕಾಶಗಳು ಸಿಕ್ಕವು. 1914-17ವರೆಗೆ ಮತ್ತು ಮುಂದೆ 1919-23ರವರೆಗೆ ಮಯನ್ಮಾರ್‍ನಲ್ಲಿದ್ದರು (ಹಿಂದಿನ ಹೆಸರು ಬರ್ಮಾ). ಅವರು ಹಿಂದಿರುಗಲು ಕಾರಣ ಅವರ ಜೀವನ ಪಕ್ಷಿಗಳಾಗಿತ್ತೇ ಹೊರತು ವ್ಯಾಪಾರ ವ್ಯವಹಾರವಲ್ಲ.

ಎರಡನೇ ಬಾರಿ ಮಯನ್ಮಾರ್‍ಗೆ ಹೋಗುವ ಮುನ್ನ ಸಲೀಂ ಆಲೀಯವರಿಗೆ 1918 ಡಿಸೆಂಬರ್‍ನಲ್ಲಿ ಮುತ್ತಿನ ವ್ಯಾಪಾರಿ ಸಿ.ಎ.ಲತೀಫ್óರ ಪುತ್ರಿ ತೆಹ್ಮೀನಾರೊಂದಿಗೆ ವಿವಾಹವಾಯಿತು. ಕಾನ್ವೆಂಟ್ ಶಿಕ್ಷಣ ಪಡೆದು ವಿದೇಶದಲ್ಲಿದ್ದವರಾಗಿದ್ದರೂ ಸಲೀಂ ಆಲೀಯವರೊಂದಿಗಿನ ಕಾಡುಗಳಲ್ಲಿನ ಜೀವನಕ್ಕೆ ಹೊಂದಿಕೊಂಡರು. ತೆಹ್ಮೀನಾರಿಗೆ ಇಂಗ್ಲಿಷ್ ಭಾಷೆಯ ಮೇಲೆ ಅದ್ಭುತ ಹಿಡಿತವಿತ್ತು. ಸಲೀಂ ಆಲೀ ಹಸ್ತಪ್ರತಿಗಳನ್ನು ಸಿದ್ಧಪಡಿಸುವಾಗ ಭಾಷೆಯನ್ನು ಸರಳಮಾಡುವುದರಲ್ಲಿ ಇವರು ಸಾಕಷ್ಟು ಸಹಾಯ ಮಾಡಿದರು. ಆದರೆ, ಪುಸ್ತಕ ಪ್ರಕಟವಾದುದನ್ನು ನೋಡಲು ತೆಹ್ಮೀನಾ ಬದುಕಿರಲಿಲ್ಲ. ಪಕ್ಷಿಗಳ ಅಧ್ಯಯನವನ್ನು ಮುಂದುವರಿಸಲು ಒತ್ತಾಸೆಯಾಗಿದ್ದ ಹಾಗೂ ಆರ್ಥಿಕವಾಗಿ ಅತ್ಯಂತ ದುರ್ಭರವಾಗಿದ್ದ ಕಾಲದಲ್ಲೂ ಎದೆಗುಂದದೆ, ಸಲೀಂ ಆಲೀಯವರ ಎಲ್ಲ ಕೆಲಸಕ್ಕೆ ಸ್ಫೂರ್ತಿಯಾಗಿದ್ದ ತೆಹ್ಮೀನಾ 1939ರಲ್ಲಿ ಒಂದು ಶಸ್ತ್ರಚಿಕೆತ್ಸೆಯಾದ ಅನಂತರ ನಂಜೇರಿ ತೀರಿಹೋದರು. ತೆಹ್ಮೀನಾ ಇಲ್ಲದ ಡೆಹರಾಡೂನ್‍ನಲ್ಲಿ ಇರಲು ಸಾಧ್ಯವಾಗದೆ ಅಲೀ ಮುಂಬೈಗೆ ಬಂದು ನೆಲೆಸಿದರು. ಮಕ್ಕಳಿರದಿದ್ದ ಸಲೀಂ ಆಲೀ ಮರು ವಿವಾಹವಾಗಲಿಲ್ಲ. ಮುಂದೆ ಒಂದು ಸಂದರ್ಶನದಲ್ಲಿ “..ನನ್ನ ಜೀವನದ ದೊಡ್ಡ ಅದೃಷ್ಟವೆಂದರೆ, ಮಡದಿ ತೆಹ್ಮೀನಾ. ಈಗ ಹಿಂದಿರುಗಿ ನೋಡಿದರೆ ನನ್ನ ಸಾಧನೆಗಳಿಗೆ ಪ್ರಮುಖ ಕಾರಣ ಅವಳೇ ಎಂದೆನಿಸುತ್ತದೆ. ಏಕೆಂದರೆಏಕಾಭಿಪ್ರಾಯದ ಸಂಗಾತಿ ಇಲ್ಲದೇ ಏನನ್ನೂ ಸಾಧಿಸಲಾಗುವುದಿಲ್ಲ” ಎಂದು ನೆನೆಪಿಸಿಕೊಂಡಿದ್ದಾರೆ.

ಸೇಂಟ್ ಜೇóವಿಯರ್ ಕಾಲೇಜಿನಲ್ಲಿ ವಾಣಿಜ್ಯ ಮತ್ತು ಲೆಕ್ಕಪತ್ರಗಳ ಅಧ್ಯಯನಕ್ಕೆ ಸೇರಿದ ಸಲೀಂ ತಮ್ಮ ಅಧ್ಯಯನಕ್ಕೆ ಪ್ರಾಣಿಶಾಸ್ತ್ರವನ್ನೂ ಸೇರಿಸಿಕೊಂಡರು. ಪ್ರಾಣಿಶಾಸ್ತ್ರದ ತರಗತಿಗಳಾಗುತ್ತಲೇ ಬಿಎನ್‍ಎಚ್‍ಎಸ್‍ಗೆ ದೌಡಾಯಿಸುತಿದ್ದ ಇವರು, ದಿನಗಟ್ಟಲೆ, ವಾರಗಟ್ಟಲೆ ಅಲ್ಲಿನ ಗ್ರಂಥಾಲಯ ಹಾಗೂ ಸಂಗ್ರಹಾಲಯದಲ್ಲಿ ಅಧ್ಯಯನನಿರತರಾಗಿಬಿಡುತಿದ್ದರು. ಎರಡು ವರ್ಷಗಳ ಕಾಲ ಮುಂಬೈನ ಪ್ರಿನ್ಸೆಸ್ ಆಫ್ó ವೇಲ್ಸ್ ಪ್ರಕೃತಿ ಇತಿಹಾಸ ಸಂಗ್ರಹಾಲಯದಲ್ಲಿ ಮಾರ್ಗದರ್ಶಕ-ಉಪನ್ಯಾಸಕರಾಗಿದ್ದರು. ಆದರೆ, ಹೇಳಿದ್ದನ್ನೇ ಹೇಳುವ ಈ ಕೆಲಸ ಅವರಿಗೆ ಬೇಸರ ತರಿಸಿತು. ಪಕ್ಷಿಶಾಸ್ತ್ರದ ಅಧ್ಯಯನ ಮಾಡಲು ತವಕಿಸುತಿದ್ದ ಅವರಿಗೆ ಅಂದಿನ ಭಾರತದ ಯಾವುದೇ ಕಾಲೇಜಿನಲ್ಲಿ ಈ ವಿಜ್ಞಾನದ ಶಾಖೆಗಳಿರಲಿಲ್ಲ. ಅನಂತರ ಇಂಗ್ಲೆಂಡ್ ಹಾಗೂ ಜರ್ಮನಿಯಲ್ಲಿ ಅಧ್ಯಯನಕ್ಕೆ ಅವಕಾಶ ಇರುವುದನ್ನು ಮನಗಂಡ ಸಲೀಂ, ಕೊನೆಗೆ ಬರ್ಲಿನ್ ವಿಶ್ವವಿದ್ಯಾಲಯದ ಎರ್ವಿನ್ ಸ್ಟ್ರೆಸ್‍ಮನ್‍ಅವರ ಮಾರ್ಗದರ್ಶನದಲ್ಲಿ ಪಕ್ಷಿಶಾಸ್ತ್ರವನ್ನು ಕ್ರಮಬದ್ಧವಾಗಿ ಅಧ್ಯಯನಮಾಡಿದರು. ಅವರ ಬರ್ಲಿನ್ ವಾಸದಲ್ಲಿ ಪರಿಚಿತರಾದ ಅನೇಕ ಪಕ್ಷಿವಿಜ್ಞಾನ ವಿಜ್ಞಾನಿಗಳಿಂದ ಪಕ್ಷಿಗಳ ಬಗ್ಗೆ ಅಧ್ಯಯನ ನಡೆಸುವುದು, ಸರ್ವೇಕ್ಷಣೆ ಹಾಗೂ ಉಂಗುರ ತೊಡಿಸಿ ಮಾಡುವ ಅಧ್ಯಯನಗಳ ಬಗ್ಗೆ ಪ್ರಾಯೋಗಿಕ ತರಬೇತಿ ಪಡೆದರು. ಪಕ್ಷಿ ವಲಸೆಯನ್ನು ಅಧ್ಯಯನ ಮಾಡಿದರು. ಇವೆಲ್ಲದರ ಸಾರ್ಥಕ ಪ್ರಯೋಜನವನ್ನು ಸಲೀಂ ಆಲೀ ಭಾರತದಲ್ಲಿ ಸರ್ವೇಕ್ಷಣೆಗಳನ್ನು ನಡೆಸುವಾಗ ಪಡೆದುಕೊಂಡರು.

ವಿಶ್ವದರ್ಜೆಯ ತರಬೇತಿ ಮುಗಿಸಿ ಭಾರತಕ್ಕೆ ಮರಳಿದಾಗ ಅವರಿಗೆದುರಾದದ್ದು ನಿರುದ್ಯೋಗ. ಆರ್ಥಿಕ ಕಾರಣಗಳಿಗಾಗಿ ಅವರ ಹುದ್ದೆಯನ್ನು ರದ್ದುಮಾಡಲಾಗಿತ್ತು. ಈ ನಿರುದ್ಯೋಗ ಪರ್ವದಲ್ಲಿ ಸಲೀಂ ಅಲೀ ತಮಗೆ ದೊರೆತಿದ್ದ ತರಬೇತಿಯ ಯುಕ್ತ ಬಳಕೆಗೆ ಒಂದು ಪರಿಯೋಜನೆಯನ್ನು ಸಿದ್ಧಪಡಿಸಿದರು. ಆಗ ಭಾರತದ ಯಾವುದೇ ಸಂಸ್ಥಾನಗಳ ಪಕ್ಷಿಗಳ ಸರ್ವೇಕ್ಷಣೆ ನಡೆದಿರಲಿಲ್ಲ. ಈ ಕಾರ್ಯ ಕೈಗೆತ್ತಿಕೊಳ್ಳುವುದಾಗಿ ಸಲೀಂ ಅಲೀ ತೀರ್ಮಾನಿಸಿದರು. ಸರ್ವೇಕ್ಷಣಾ ಪರಿಯೋಜನೆಗಳು ಬಿಎನ್‍ಎಚ್‍ಎಸ್ಮೂ ಲಕ ನಡೆಯುವುದು. ಪ್ರಾಯೋಜಕರು ಕೇವಲ ಸರ್ವೇಕ್ಷಣೆಯ ವೆಚ್ಚ ನೀಡುವುದು; ತಮ್ಮ ಸೇವೆ ಸಂಪೂರ್ಣ ಉಚಿತ ಈ ಸೂತ್ರದ ಮೇಲೆ ಸರ್ವೇಕ್ಷಣಾ ಕಾರ್ಯಯೋಜನೆ ಸಿದ್ಧಪಡಿಸಿದ್ದರು. ಅಂದಿನ ಅನೇಕ ಸಂಸ್ಥಾನಗಳ ರಾಜ ಮಹಾರಾಜರುಗಳು, ಅಧಿಕಾರಿಗಳು ಈ ಯೋಜನೆಯನ್ನು ಸ್ವಾಗತಿಸಿದರು. ಹೀಗಾಗಿ ಭಾರತದ ಅನೇಕ ಸಂಸ್ಥಾನಗಳ ಪಕ್ಷಿ ಸರ್ವೇಕ್ಷಣೆ ಸಾಧ್ಯವಾಯಿತು. ಜೊತೆಗೆ, ಸಲೀಂ ಅಲೀಯವರಿಗೆ ಪಕ್ಷಿಗಳ ಸರ್ವೇಕ್ಷಣೆಯಲ್ಲಿ ತೊಡಗಿಕೊಳ್ಳಲು ಆಂಶಿಕವಾಗಿ ಪ್ರೇರಕವಾಗಿದ್ದ ಸ್ಟವರ್ಟ್‍ರ ಫಾನಾ ಆಫ್ó ಬ್ರಿಟಿಷ್ ಇಂಡಿಯ ಪುಸ್ತಕದ ವಿಮರ್ಶೆಯಲ್ಲಿದ್ದ ....ಇಡೀ ಪುಸ್ತಕದಲ್ಲಿ ಭಾರತೀಯ ಪ್ರಕೃತಿ ಶಾಸ್ತ್ರಜ್ಞರಿಗೆ ಎಂದು ಹೆಸರಿಸಬಹುದಾದ ಕೊಡುಗೆ ಏನೂ ಇಲ್ಲ. ಬಹುಶಃ ಯುರೋಪಿಯನ್ನರು ಭಾರತ ಬಿಟ್ಟು ಹೋದರೆ, ಆ ಭೂಭಾಗದ ಜೀವಿವೈವಿಧ್ಯದ ವರದಿಗಳು ನಿಂತೇ ಹೋಗುತ್ತವೆ ಎಂಬ ಭವಿಷ್ಯವಾಣಿಯನ್ನು ಸುಳ್ಳುಮಾಡಿತು. ಬ್ರಿಟಿಷರಲ್ಲದವರಿಗೆ ಸಾಮಾನ್ಯವಾಗಿ ದೊರಕದ ಬ್ರಿಟಿಷ್ ಪಕ್ಷಿಶಾಸ್ತ್ರಜ್ಞರ ಸುವರ್ಣಪದಕ ಸಲೀಂ ಅಲೀ ಅವರಿಗೆ ದೊರಕಿಸಿತು(1967).

ಈ ಪರಿಯೋಜನೆಗಾಗಿ ಪ್ರಾರಂಭವಾದ ಪಕ್ಷಿಯಾತ್ರೆ ಸಲೀಂ ಅಲೀಯವರ ಜೀವನದ ಕೊನೆಯ ಒಂದು ವರ್ಷದವರೆಗೂ ಮುಂದುವರೆಯಿತು. ಉತ್ತರದ ಕಾಶ್ಮೀರದಿಂದ ದಕ್ಷಿಣದ ಕೇರಳ ಮತ್ತು ಪೂರ್ವದ ಕಚ್‍ನಿಂದ ಪಶ್ಚಿಮದ ಮಿಶ್ಮಿ ಪರ್ವತಗಳವರಗೆ ಇವರ ಪಕ್ಷಿಗಾಗಿ ಅಲೆದಾಟ ಸಾಗಿತ್ತು. ಇವುಗಳಲ್ಲಿನ ಮುಖ್ಯ ಸರ್ವೇಕ್ಷಣೆಗಳೆಂದರೆ:

ಈ ಸರ್ವೇಕ್ಷಣೆಗಳಿಂದ ಮಹತ್ತ್ವದ ವೈಜ್ಞಾನಿಕ ಫಲಿತಾಂಶಗಳು ದೊರೆಯುವುದ ರೊಂದಿಗೆ, ಭಾರತದಲ್ಲಿನ ಪಕ್ಷಿಗಳ ಬಗೆಗೆ ಅಗಾಧ ಪ್ರಮಾಣದ ಮಾಹಿತಿ ಸಂಗ್ರಹಿತವಾದವು. ಈ ಸರ್ವೇಕ್ಷಣಾ ಸಮಯದಲ್ಲಿ ಅವರು ಅನೇಕ ಹೊಸ ಸಂಗತಿಗಳನ್ನು ವರದಿ ಮಾಡಿದರು. ಮರುಭೂಮಿ ಪ್ರದೇಶಗಳಲ್ಲಿÀ ಅತಿನೇರಳೆ ಕಿರಣಗಳ ಪ್ರಭಾವದಿಂದ ಅಲ್ಲಿನ ಪಕ್ಷಿ ಪ್ರಾಣಿಗಳ ಬಣ್ಣ ಪೇಲವವಾಗುವುದು ತಿಳಿದ ವಿಷಯವಾಗಿತ್ತು. ಆದರೆ, ಮಳೆ ಬಂದು ಈ ಕಿರಣಗಳ ಪ್ರಭಾವ ಕಡಮೆಯಾದಂತೆಯೇ ಇದೇ ಪ್ರಾಣಿಗಳ ಬಣ್ಣ ಗಾಢವಾಗುತ್ತದೆ ಎಂಬುದನ್ನು ಸಲೀಂ ಅಲೀ ಪತ್ತೆಹಚ್ಚಿದರು. ಇದೇ ಕಛ್ ಪ್ರದೇಶದಲ್ಲಿ ಐದು ಲಕ್ಷಕ್ಕೂ ಹೆಚ್ಚು ರಾಜಹಂಸಗಳು ವಂಶಾಭಿವೃದ್ಧಿ ನಡೆಸುವುದನ್ನು ಅಧ್ಯಯನಮಾಡುತ್ತಾ ಅಲ್ಲಿಯೇ ಅವೋಸೆಟ್ ಹಕ್ಕಿಗಳು ಮತ್ತು ರಾಜಹಂಸ ಬಳಸಿ ಬಿಟ್ಟ ಗೂಡನ್ನು ಬಳಸುತ್ತಿದ್ದ ಹೆಜ್ಜಾರ್ಲೆಗಳ ವರ್ತನೆಯನ್ನು ವರದಿಮಾಡಿದರು.

ಸರ್ವೇಕ್ಷಣೆಯ ಸಮಯದಲ್ಲಿ ಹಕ್ಕಿಗಳ ಸಂಗ್ರಹವನ್ನೂ ಮಾಡಿದ್ದರಿಂದ ಬಿಎನ್‍ಎಚ್‍ಎಸ್‍ನ ಹಾಗೂ ಇತರ ಪ್ರಾಕೃತಿಕ ಇತಿಹಾಸ ಸಂಗ್ರಹಾಲಯಗಳ ಹಕ್ಕಿ ಸಂಗ್ರಹವೂ ಬೆಳೆಯಿತು. ಸಂಗ್ರಹಕ್ಕಾಗಿ ಹಕ್ಕಿಗಳನ್ನು ಕೊಲ್ಲುವ ವಿಷಯವಾಗಿ ಸಲೀಂ ಅಲೀ ಒಮ್ಮೊಮ್ಮೆ ಭಾವುಕರಾಗುತಿದ್ದರು. ಅನಂತರ ಅಧ್ಯಯನ ಹಾಗೂ ಸಂರಕ್ಷಣೆಗಾಗಿ ಕೆಲವು ಹಕ್ಕಿಗಳನ್ನು ಕೊಲ್ಲಬೇಕಾಗುತ್ತದೆ ಎಂದು ಸಮಾಧಾನ ಹೇಳಿಕೊಳ್ಳುತ್ತಿದ್ದರು! ಅವರ ಅವಿರತ ಶ್ರಮದ ಫಲವಾಗಿ ಇಂದು ಬಿಎನ್‍ಎಚ್‍ಎಸ್‍ನಲ್ಲಿ ದೊಡ್ಡ ಸಂಗ್ರಹ ಅಧ್ಯಯನಾಸಕ್ತರಿಗೆ ಲಭ್ಯವಿದೆ.

ಸಲೀಂ ಅಲೀಯವರ ಮಹತ್ತರ ಕೊಡುಗೆಗಳಲ್ಲಿ ಒಂದು ಅವರು ನೇಕಾರ ಹಕ್ಕಿಗಳ ಸಂತಾನಾಭಿವೃದ್ಧಿ ಸಮಯದ ಕುತೂಹಲಕಾರಿ ನಡೆವಳಿಕೆಯನ್ನು ಕಂಡುಹಿಡಿದದ್ದು. ಇವುಗಳಲ್ಲಿ ಗಂಡುಗಳು ನಾರಿನಿಂದ ಗೂಡನ್ನು ಅರ್ಧರಚಿಸಿ, ಹೆಣ್ಣಿನ ಅನುಮೋದನೆಗೆ