ಪುಟ:Mysore-University-Encyclopaedia-Vol-2-Part-1.pdf/೧೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಆಲೂಗೆಡ್ಡೆ. ಕಾಯುತ್ತವೆ! ಗೂಡನ್ನು ಹೆಣ್ಣು ಒಪ್ಪಿ ಅದರಲ್ಲಿ ಪ್ರವೇಶಿಸಿದರೆ, ಗಂಡು ಆ ಗೂಡನ್ನು ಪೂರ್ಣಗೊಳಿಸುತ್ತದೆ. ಮುಂದೆ ಗಂಡು ಹೆಣ್ಣುಗಳ ಮಿಲನವಾಗಿ ಹೆಣ್ಣು ಮೊಟ್ಟೆ ಇಡುತ್ತದೆ. ಒಂದು ಪಕ್ಷ ಗೂಡು ಒಪ್ಪಿಗೆಯಾಗದಿದ್ದಲ್ಲಿ ಆ ಗೂಡನ್ನು ಅಷ್ಟಕ್ಕೇ ಬಿಟ್ಟು ಇನ್ನೊಂದು ಗೂಡನ್ನು ರಚಿಸುತ್ತದೆ. ಒಪ್ಪಿದ ಹೆಣ್ಣು ಮುಂದೆ ಮೊಟ್ಟೆ ಇಟ್ಟು ಮರಿಮಾಡಿದರೆ, ಗಂಡು ಇನ್ನೊಂದು ಗೂಡು ರಚಿಸಿ ಮತ್ತೊಂದು ಹೆಣ್ಣಿಗಾಗಿ ಕಾಯುತ್ತದೆ. ಬಹುಪತ್ನಿತ್ವ ಈ ಹಕ್ಕಿಗಳಲ್ಲಿನ ಪದ್ಧತಿ. ಆ ಅಧ್ಯಯನ ಕ್ಷೇತ್ರಕಾರ್ಯದ ಪ್ರಾಮುಖ್ಯವನ್ನು ಸ್ಥಾಪಿಸಿತು. ಕ್ಷೇತ್ರಕಾರ್ಯ ಆಧಾರಿತ ಸಂಶೋಧನಾ ಲೇಖನಗಳು ಬರತೊಡಗಿದವು. ಒಂದು ರೀತಿಯಲ್ಲಿ ಈ ಕ್ಷೇತ್ರಕಾರ್ಯಕ್ಕೆ ಮಹತ್ತ್ವ ತಂದುಕೊಟ್ಟಿದ್ದೂ ಸಲೀಂ ಅಲೀಯವರ ಒಂದು ಹೆಗ್ಗಳಿಕೆ.

ತಮ್ಮ ಸರ್ವೇಕ್ಷಣೆಗಾಗಿ ರಾಷ್ಟ್ರದಾದ್ಯಂತ ಪ್ರವಾಸ ಮಾಡುತ್ತಿದ್ದಾಗ ಕಂಡುಹಿಡಿದ ಪಕ್ಷಿಧಾಮ ಕರ್ನಾಟಕದ ರಂಗನ ತಿಟ್ಟು. ಇದನ್ನು ಪತ್ತೆಮಾಡಿದ್ದಲ್ಲದೆ ಅದಕ್ಕೆ ಸೂಕ್ತ ರಕ್ಷಣೆ ಕೊಡಿಸುವಲ್ಲಿಯೂ ಇವರು ಸಫಲರಾದರು. ಕರ್ನಾಟಕದ ದೇವರಾಯನದುರ್ಗಕ್ಕೆ ಇವರು ನಾಲ್ಕು ಬಾರಿ ಭೇಟಿ ನೀಡಿದ್ದರು.

ತಮ್ಮೆಲ್ಲ ಅಲೆದಾಟದಿಂದ ಲಭ್ಯವಾದ ಜ್ಞಾನವನ್ನು ಪುಸ್ತಕಗಳ ಮೂಲಕ ಜಗತ್ತಿನೊಂದಿಗೆ ಹಂಚಿಕೊಂಡರು. ಪ್ರತಿ ಕ್ಷೇತ್ರಕಾರ್ಯದಲ್ಲೂ ಜಾಗರೂಕತೆಯಿಂದ ತಮ್ಮ ಸುಂದರವಾದ ಕೈಬರೆಹದಲ್ಲಿ ಮಾಡಿಕೊಂಡ ಟಿಪ್ಪಣಿ ಪುಸ್ತಕದಿಂದ ಮಾಹಿತಿಯನ್ನು ಪ್ರತಿ ಪ್ರಭೇದಕ್ಕೆ ಅವರು ಇರಿಸಿದ್ದ ಪ್ರತ್ಯೇಕ ಪುಸ್ತಕಕ್ಕೆ ವರ್ಗಾಯಿಸುತಿದ್ದರು. ಇವುಗಳ ಸಹಾಯದಿಂದ ಬಂದ ಪುಸ್ತಕಗಳಲ್ಲಿ ಮುಖ್ಯವಾದದ್ದು ದಿ ಬುಕ್ ಆಫ್ ಇಂಡಿಯನ್ ಬರ್ಡ್ಸ್ 1941ರಲ್ಲಿ ಪ್ರಕಟವಾಯಿತು. ಬಹಳ ಜನಪ್ರಿಯವಾದ ಈ ಪುಸ್ತಕ ಮುಂದೆ ಹಲವಾರು ಮುದ್ರಣಗಳನ್ನು ಕಂಡು, ಇದೀಗ (2006) 13ನೆಯ ಪರಿಷ್ಕರಣ ಎರಡನೇ ಮುದ್ರಣದಲ್ಲಿದೆ. ಇದರಿಂದ ಬಂದ ಹಣ ಸಲೀಂ ಅಲೀಯರಿಗೆ ತಮ್ಮ ಸಾಲ ತೀರಿಸಲು ಉಪಯೋಗವಾಯಿತು. ಇದು ಹಿಂದೀ, ಪಂಜಾಬಿ ಹಾಗೂ ಉರ್ದು ಭಾಷೆಗಳಿಗೆ ಅನುವಾದಗೊಂಡಿದೆ. ಲೀಯಿಪ್ಫು ತೇಅಲೀಯೊಂದಿಗೆ ಬರೆದ ಸಾಮಾನ್ಯ ಪಕ್ಷಿಗಳು ಪುಸ್ತಕ ನ್ಯಾಷನಲ್ ಬುಕ್ ಟ್ರಸ್ಟ್ ಮೂಲಕ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿದೆ. ಮುಂದೆ ಇವರ ಪ್ರಕಟಣೆಗಳು ಅವಿರತ ಕ್ಷೇತ್ರಕಾರ್ಯ, ಅಧ್ಯಯನ (ಸಲೀಂ ಅಲೀ ಒಬ್ಬ ಗೀಳು ಹಿಡಿದಂತಂಹ ಓದುಗಾರರಾಗಿದ್ದರು)ಮುಂದುವರೆದಂತೆ ಕಡಿಮೆಯಾಗದೆ ಮುಂದುವರೆದಿದ್ದು ಪಕ್ಷಿಶಾಸ್ತ್ರದ ಪಾಲಿಗೆ ಒಂದು ವರ. ‘ದಿ ಬರ್ಡ್ಸ್ ಆಫ್ó ಕಛ್, 195, ‘ಹಿಲ್ ಬರ್ಡ್ಸ್ ಆಫ್ó ಇಂಡಿಯ’ 1949, ದಿ ಬರ್ಡ್ಸ್ ಆಫ್ó ಕೇರಳ (ಮೂರನೇ ಮುದ್ರಣ 1985), ಬರ್ಡ್ಸ್ ಆಫ್ó ಸಿಕ್ಕಿಂ, 1962, ದಿ ಫೀಲ್ಢ್ ಗೈಡ್ ಟು ದ ಬರ್ಡ್ಸ್ ಆಫ್ó ಈಸ್ಟ್ರನ್ ಹಿಮಾಲಯಾಸ್, 1977. ಅವರ ಬರೆಹ ಜೀವನದ ದೈತ್ಯ ಸಾಧನೆ ಎಂದರೆ ಹತ್ತು ಸಂಪುಟಗಳಲ್ಲಿ ಪ್ರಕಟವಾದ ದಿ ಹ್ಯಾಂಡ್ ಬುಕ್ ಆಫ್ó ಬರ್ಡ್ಸ್ ಆಫ್ó ಇಂಡಿಯ ಅಂಡ್ ಪಾಕಿಸ್ತಾನ್ ಅವರ ನಿಡುಗಾಲದ ಗೆಳೆಯ ಸಿಡ್ನಿ ಡಿಲಾನ್ ರಿಪ್ಲೈ (ಸ್ಮಿತ್‍ಸೋನಿಯನ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದವರು) ಇದರ ಸಹ ಲೇಖಕರು. ಈ ಪುಸ್ತಕಕ್ಕಾಗಿ ಸಲೀಂ ಅಲೀ ದಿನಕ್ಕೆ 12-15 ಗಂಟೆಗಳ ಕೆಲಸಮಾಡುತ್ತಿದ್ದರು. ಪುಸ್ತಕದ ಮೊದಲ ಕರಡುಪ್ರತಿಯನ್ನು ಸ್ವತಃ ತಯಾರಿಸಿದರು. ಇದರ ಎಲ್ಲ 10 ಸಂಪುಟಗಳು ಆರೇ ವರ್ಷಗಳಲ್ಲಿ ಪ್ರಕಟವಾಯಿತೆಂದರೆ (1968-74) ಸಲೀಂ ಅಲೀಯವರ ಕರ್ತೃತ್ವಶಕ್ತಿಯ ಅರಿವಾಗುತ್ತದೆ.

ಕೇವಲ ಪಕ್ಷಿಗಳ ಅಧ್ಯಯನ ಮಾತ್ರ ಇವರಿಗೆ ತೃಪ್ತಿನೀಡುತ್ತಿರಲಿಲ್ಲ. ಅವುಗಳ ಸಂರಕ್ಷಣೆಗೆ ಪಣ ತೊಟ್ಟು ಕೆಲಸಮಾಡಿದವರು ಸಲೀಂ ಅಲೀ. ಅವರ ಅವಿರತ ಪ್ರಯತ್ನದಿಂದ ಸಾಧಿತವಾದದ್ದು ಭರತಪುರ ವನ್ಯಧಾಮ. ರಾಜರ ಖಾಸಗಿ ಬೇಟೆ ಪ್ರದೇಶವಾಗುವ ಅಪಾಯವಿದ್ದ ಈ ಕಾಡನ್ನು ವನ್ಯಜೀವಿಧಾಮವನ್ನಾಗಿಸಿದ್ದು ಸಲೀಂ ಅಲೀಯವರ ಪರಿಶ್ರಮ. ಕೇರಳದ ಮೌನಕಣಿವೆ ಕಾಡಿನ ಹೋರಾಟ ತಂದ ವಿಜಯ, ಭಾರತದ ಪರಿಸರ ಪರ ಹೋರಾಟದ ಮಹತ್ತ್ವದ ಮೈಲುಗಲ್ಲು. ಇದರಲ್ಲಿ ಸಲೀಂ ಅಲೀಯವರದು ಮಹತ್ತ್ವದ ಪಾಲು.

ನಾಶವಾಗಿ ಹೋಗಿದೆ ಎಂದೇ ನಂಬಲಾಗಿದ್ದ ಹನಿಗೈಡ್ ಪಕ್ಷಿಯನ್ನು ಪತ್ತೆ ಮಾಡಿದ ಶ್ರೇಯಸ್ಸು ಸಲೀಂ ಅಲೀ ಅವರ ತಂಡಕ್ಕೆ ಸಲ್ಲುತ್ತದೆ. 150ವರ್ಷಗಳಿಂದ ಕಂಡಿರದಿದ್ದ ಈ ಅಪರೂಪದ ಹಕ್ಕಿಯನ್ನು ಭೂತಾನ್ ಪಕ್ಷಿ ಸರ್ವೇಕ್ಷಣೆ ಸಮಯದಲ್ಲಿ ಈ ತಂಡ ಕಂಡಿತು. ಸಲೀಂ ಅಲೀ ಭಾರತದಲ್ಲಿ ಕಂಡುಬರುವ ಹಕ್ಕಿಗಳಲ್ಲಿ ಅನೇಕವನ್ನು ಮೊದಲಬಾರಿಗೆ ಗುರುತಿಸಿದರು. ಉಪಪ್ರಭೇದಗಳನ್ನು ಪತ್ತೆಹಚ್ಚಿ ವರ್ಗೀಕರಣವನ್ನು ಸರಿಪಡಿಸಿದರು. ಇತರ ಪಕ್ಷಿಶಾಸ್ತ್ರಜ್ಞರು ಪತ್ತೆಹಚ್ಚಿದ ಹೊಸ ಪ್ರಭೇದ ಅಥವಾ ಹೊಸ ಉಪಪ್ರಭೇದಕ್ಕೆ ಸಲೀಂ ಅಲೀಅವರ ಮತ್ತು ಅವರ ಪತ್ನಿ ತೆಹ್ಮೀನರ ಹೆಸರಿಟ್ಟು ಅವರಿಗೆ ಗೌರವತೋರಿದ್ದಾರೆ. ಅವೆಂದರೆ: ಬಿಳಿಗಣ್ಣ ಹಕ್ಕಿ (ಜೊóಸ್ಟೆರೋಪ್ಸ್ ಪಲಪೆಬ್ರೊಸ ಸಲೀಂಅಲೀ), ರಕ್ ಬುಶ್ಕ್ವೇ ಯಿಲ್ (ಪೆರಡಿಕ್ಯಲ ಅರ್‍ಗೂಂಡಾ ಸಲೀಂಅಲೀ), ಹಾಡ್‍ಸನ್ಸ್ ಸ್ಕಿಮಿಟಾರ್ ಬ್ಯಾಬ್ಲರ್ (ಪೊಮಟೊರ್ಹಿನಸ್ ಹಾರ್ಸ್‍ಫಿóಲ್ಡೈ ಸಲೀಂಅಲೀ), ಫಿನ್ಸ್ ನೇಕಾರ ಹಕ್ಕಿ (ಪ್ಲೋಸಿಯಸ್ಮೆ ಗರಿಂಚಸ್ ಸಲೀಂಅಲೀ), ದಿ ಗೋಲ್ಡ್ ಕ್ರೆಸ್ಟ್ (ರೆಗುಲುಸ್ ರೆಗುಲುಸ್)ಎಮೆರಾಲ್ಡ್ ಡೊವ್ (ಚಾಲ್ಕೊಫಾಪ್ಸ್ ಇಂಡಿಕಾ ಸಲೀಂಅಲೀ), ಹೊಂಬಣ್ಣದ ಬೆನ್ನಿನ ಮರಕುಟುಕದ ಒಂದು ಉಪಪ್ರಭೇದ ಡಿನೊಪಿಯಮ್ ಬೆಂಗಾಲೆನ್ಸ್ ತೆಹ್ಮೀನೇ ಇತ್ಯಾದಿ. ಸಲೀಂ ಅಲೀ ಆಗಾಗ್ಗೆ ಹೇಳುತ್ತಿದ್ದುದುಂಟು ಪ್ರತಿ ಪಕ್ಷಿವೀಕ್ಷಕನೂ ಪಕ್ಷಿಗಳಲ್ಲಿ ಹೊಸದಾದ ಅಥವಾ ಆಶ್ಚರ್ಯಕರವಾದ ವಿಚಾರಗಳನ್ನು ಕಂಡುಹಿಡಿಯಲು ಸಾಧ್ಯವಿಲ್ಲ. ಆದರೆ, ಎಚ್ಚರಿಕೆಯಿಂದ ನಿರ್ವಹಿಸಿದ ದೀರ್ಘಾವಧಿ ಪಕ್ಷಿವೀಕ್ಷಣೆ ಹಾಗೂ ಅಧ್ಯಯನ ಆನಂದದ ಮೂಲವಾಗುತ್ತದೆ, ಒಂದು ಅಹ್ಲಾದಕರ ಹವ್ಯಾಸವಾಗುತ್ತದೆ. ಇಷ್ಟೇ ಅಲ್ಲದೆ, ವಿಜ್ಞಾನದ ಬೆಳೆವಣಿಗೆಗೆ ಸಹಕಾರಿಯಾಗುತ್ತದೆ.

ಬ್ರಿಟಿಷ್ ಪಕ್ಷಿವಿಜ್ಞಾನಿಗಳ ಒಕ್ಕೂಟದ ಚಿನ್ನದ ಪದಕ, ವನ್ಯಜೀವಿ ಸಂರಕ್ಷಣೆಗಾಗಿಪ್ರತಿಷ್ಠಿತ ಜೆ.ಪಾಲ್‍ಗೆಟಿ ಅಂತಾರಾಷ್ಟ್ರೀಯ ಪ್ರಶಸ್ತಿ, ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯ- ಸಿ.ವಿ. ರಾಮನ್ ಪದಕ, ದೆಹಲಿ, ಆಂಧ್ರ ಮತ್ತು ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯಗಳಗೌರವ ಡಾಕ್ಟೊರೇಟ್ ಹಾಗೂ ಭಾರತ ಸರ್ಕಾರದಿಂದ ಪದ್ಮಭೂಷಣ ಮತ್ತು ಪದ್ಮವಿಭೂಷಣಪ್ರಶಸ್ತಿಗಳು ಇವರ ಸಾಧನೆಯನ್ನನುಸರಿಸಿ ಬಂದವು. ಪಾಲ್‍ಗೆಟಿ ಪ್ರಶಸ್ತಿಯಿಂದ ಬಂದ ಹಣದಲ್ಲಿ ಸಿಂಹಪಾಲನ್ನು ಬಿಎನ್‍ಎಚ್‍ಎಸ್ ಸಂಸ್ಥೆಗೆ ನೀಡಿ “ಸಲೀಂ ಆಲೀ ಪ್ರಕೃತಿ ಸಂರಕ್ಷಣಾ ನಿಧಿ” ಸ್ಥಾಪಿಸಿದರು. ಇದರಿಂದ ಆನೇಕ ಉಪಯುಕ್ತ ಅಧ್ಯಯನಗಳು ನಡೆದಿವೆ.

ಸಲೀಂ ಆಲೀಯವರ ಸಂದೇಶಗಳಲ್ಲೊಂದು: “ಪಕ್ಷಿಗಳನ್ನು ವೀಕ್ಷಿಸುವುದರಿಂದಲೇ ಜೀವಿಸುವುದು ಸಾಧ್ಯವಿಲ್ಲ ಎಂದು ಮನುಷ್ಯ ಹೇಳುತ್ತಾನೆ. ಅದು ನಿಜ. ಆದರೆ, ಕೇವಲ ಆಹಾರದಿಂದಲೇ ಮನುಷ್ಯ ಜೀವಿಸಲು ಸಾಧ್ಯವಿಲ್ಲ ಎಂಬುದೂ ನಿಜ. ಕೆಲಸದಿಂದ ನಿವೃತ್ತಿಯಾದ ಅನಂತರ ಕೇವಲ ಗಡಿಯಾರ ನೋಡುವುದರಲ್ಲೇ ಕಾಲಕಳೆಯುತ್ತಾನೆ. ಇದಕ್ಕೆ ಬದಲು ಪಕ್ಷಿವೀಕ್ಷಣೆ ಪ್ರಾರಂಭಿಸಿದರೆ ನಿಸರ್ಗದಲ್ಲಿ ವೇಳೆಯನ್ನು ಕಳೆಯುವುದರಿಂದ ಅವನ ಆರೋಗ್ಯ ಮತ್ತು ಆಯುಸ್ಸು ವೃದ್ಧಿಸುವುದೆಂದು ಅವನು ತಿಳಿಯಬೇಕು”.

ಅತ್ಯಂತ ಸರಳ ಮಾನವರಾಗಿದ್ದ ಸಲೀಂ ಆಲೀ, ತಮ್ಮ ಶ್ರೀಮಂತಿಕೆಯ ಸಮಯದಲ್ಲೂ ಯಾವುದೇ ರೀತಿಯ ವೈಭವದ ಜೀವನ ನಡೆಸಿದವರಲ್ಲ. ತಮ್ಮ ಕಾರ್ಯಗಳಿಗಾಗಿ ಪ್ರಾಯೋಜಕರಿಂದ ಪಡೆದುಕೊಳ್ಳುತ್ತಿದ್ದ ಹಣದ ಪ್ರತಿಯೊಂದು ಪೈಸೆಗೂ ಲೆಕ್ಕಕೊಟ್ಟು ಉಳಿದ ಹಣವನ್ನು ಹಿಂದಿರುಗಿಸುತ್ತಿದ್ದರು. ಅವರ ಮಾತು ಹಾಸ್ಯಮಿಳಿತವಾಗಿದ್ದರೂ ಲೋಕಾಭಿರಾಮ ಕಡಿಮೆ. ಕಡಿಮೆ ಸಮಯದಲ್ಲಿ ಹೇಳಬಹುದಾದದಕ್ಕೆ ಹೆಚ್ಚು ಸಮಯ, ಹೆಚ್ಚು ಪದಗಳನ್ನು ಪೋಲುಮಾಡಬಾರದೆಂದು ಹೇಳುತಿದ್ದರು. ಯಾವುದೇ ಸಮಿತಿ, ಉಪಸಮಿತಿಗಳಲ್ಲಿ ಸೇರಲು ಬಯಸುತ್ತಿರಲಿಲ್ಲ. ಸಮ್ಮೇಳನಗಳಲ್ಲಿ ಚರ್ಚೆ ವೈಜ್ಞಾನಿಕವಾಗಿ ಹಗುರಾಗಿ ಕಂಡರೆ, ತಮ್ಮ ಶ್ರವಣಸಾಧನವನ್ನು ನಿಷ್ಕ್ರಿಯಗೊಳಿಸಿ ಸ್ವಸ್ಥವಾಗಿ ಕುಳಿತುಬಿಡುತಿದ್ದರು. ಸದಾ ಕೆಲಸವನ್ನಷ್ಟೇ ಬಯಸಿದ, ಮಾಡಿದ ಕರ್ಮಯೋಗಿ ಸಲೀಂ ಆಲೀ. ಅದಕ್ಕಾಗಿ ತಮ್ಮ ಆರೋಗ್ಯವನ್ನು ಜಾಗ್ರತೆಯಿಂದ ಕಾಪಾಡಿಕೊಳ್ಳುತ್ತಿದ್ದರು. ತಮ್ಮ ಜೀವನದ ಕೊನೆಯ ವರ್ಷದವರೆಗೂ ಕ್ಷೇತ್ರಕಾರ್ಯ ಮಾಡುತ್ತಿದ್ದರು. ತಮ್ಮ ಆರೋಗ್ಯದ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ಒಮ್ಮೆ ಕೆಲವರು ತಮ್ಮ ಕ್ಷೇತ್ರಕಾರ್ಯಕ್ಕೆ ಸಲೀಂ ಅಲೀ ಅವರನ್ನು ಕರೆಯಬೇಕೆಂದು ಬಯಸಿ, ಈ ವಯಸ್ಸಿನಲ್ಲಿ ಅವರಿಗೆ ಕ್ಷೇತ್ರಕಾರ್ಯ ಕಷ್ಟವಾಗಬಹುದೆಂದು ಭಾವಿಸಿ ಸಲಹೆಯನ್ನಷ್ಟೇ ಕೇಳೋಣ ಎಂದು ತೀರ್ಮಾನಿಸಿ ಅವರಲ್ಲಿಗೆ ಬಂದಾಗ, ಸಲೀಂ ಆಲೀ ಸೈಬೀರಿಯದ ಕೊಕ್ಕರೆಗಳನ್ನು ಹುಡುಕಿಕೊಂಡು ದುರ್ಗಮ ಹಿಮಾಲಯದ ಬೆಟ್ಟಗಳಲ್ಲಿ ಅಲೆಯುತ್ತಿದ್ದರು! ಆಗ ಅವರ ವಯಸ್ಸು 84. ಗುಜರಾತಿನ ವಾನ್ಸ್ಡ ರಾಷ್ಟ್ರೀಯ ಉದ್ಯಾನವನದಲ್ಲಿ ಕೈಗೊಂಡ ಕ್ಷೇತ್ರಕಾರ್ಯ ಅವರ ಜೀವನದಲ್ಲಿ ಕೊನೆಯದು. ಆಗ ಅವರ ವಯಸ್ಸು 90 ದಾಟಿತ್ತು. ಸ್ವಲ್ಪ ಕಾಲ ಪ್ರಾಸ್ಟೇಟ್ ಕ್ಯಾನ್ಸರ್‍ನಿಂದ ಬಳಲಿದ ಸಲೀಂ ಆಲೀ, 20, ಜೂನ್ 1987ರಂದು ತಮ್ಮ 91ನೇ ವಯಸ್ಸಿನಲ್ಲಿ ನಿಧನರಾದರು.

ಆಲೂಗೆಡ್ಡೆ: ಸೊ¯ನೇಸೀ ಕುಟುಂಬಕ್ಕೆ ಸೇರಿದ ತರಕಾರಿ ಸಸ್ಯ. ವೈe್ಞÁನಿಕನಾಮ ಸೊಲೇನಂ ಟ್ಯೊಬರೋಸ. ಪಟೇಟೋ, ಬಟಾಟೆ. ತರಕಾರಿಯಾಗಿ ಇದರ ಮುಖ್ಯ ಉಪಯೋಗ : ಉದ್ದಿಮೆಗಳಲ್ಲಿ ಕಚ್ಚಾವಸ್ತುವಾಗಿಯೂ ಬಳಕೆಯಲ್ಲಿದೆ. ಹಿತಕರ ರುಚಿ, ಉಪಯೋಗ ವೈವಿಧ್ಯ,. ರಕ್ಷಿಸಿದರೆ ದೀರ್ಘಕಾಲ ಕೆಡದೆ ಉಳಿಯುವಿಕೆ, ದಾಸ್ತಾನು ಸಾಗಾಣಿಕೆಗಳಲ್ಲಿ ಸೌಲಭ್ಯ- ಈ ಕಾರಣಗಳಿಂದ ಆಲೂಗೆಡ್ಡೆ ಜನಪ್ರಿಯತೆ ಗಳಿಸಿದೆ.

ದಕ್ಷಿಣ ಅಮೆರಿಕದ ಚಿಲಿ ಪ್ರದೇಶದಲ್ಲಿಯೂ ಪೆರು, ಈಕ್ವೆಡಾರ್, ಬೊಲೀವಿಯ ವಲಯದಲ್ಲಿಯೂ ಆಲೂಗಡ್ಡೆಯ ಮೂಲವನ್ನು ಗುರುತಿಸಿದ್ದಾರೆ. ಇದರ ಕಾಡು ಪ್ರಭೇದಗಳು ನೂರಾರು ಬಗೆಯಲ್ಲಿ ಅಲ್ಲಿ ಇವೆ. 1577ರ ಸುಮಾರಿಗೆ ಯುರೋಪಿನಾವಿಕರು ಅಮೆರಿಕದ ಇಂಡಿಯನ್ ಜನಾಂಗ ಆಲೂಗೆಡ್ಡೆಯನ್ನು ಆಹಾರವಾಗಿ ಉಪಯೋಗಿಸುತ್ತಿದ್ದುದನ್ನು ಗಮನಿಸಿದರು. ಸ್ಪೇನ್ ದೇಶದ ನಾವಿಕರು ಇವರ ಅನುಕರಣೆ ಮಾಡಿದುದರ ಫಲವಾಗಿ ಆಲೂಗೆಡ್ಡೆ ಹಡಗುಗಳಲ್ಲಿನ ಒಂದು ಮುಖ್ಯ ಆಹಾರವಾಗಿ ಪರಿಣಮಿಸಿತು. ಈ ತೆರನಾಗಿ ಆಲೂಗೆಡ್ಡೆ ಅಟ್ಲಾಂಟಿಕ್ ಸಾಗರ ದಾಟಿ ತನ್ನ ವ್ಯಾಪ್ತಿಯನ್ನು ಯುರೋಪ್ ಖಂಡದಲ್ಲಿಯೂ ಬ್ರಿಟಿಷ್ ದ್ವೀಪಗಳಲ್ಲಿಯೂ ಪಸರಿಸಿತು. ಸು.1588ರಲ್ಲಿ ಇದರ ಬೆಳೆ ಐರ್ಲೆಂಡಿನಲ್ಲಿ ತೆಗೆದುದಕ್ಕೆ ಆಧಾರ ಉಂಟು. ಆ ದ್ವೀಪದಲ್ಲಿ ಇದರ ಪ್ರಾಬಲ್ಯ ಅಧಿಕವಾದುದರ ಪರಿಣಾಮವಾಗಿ ಐರಿಷ್ ಆಲೂಗಡ್ಡೆ ಎಂಬ ರೂಢಿಯನಾಮ ಜನಪ್ರಿಯವಾಯಿತು (1719). ಭಾರತಕ್ಕೆ