ಪುಟ:Mysore-University-Encyclopaedia-Vol-6-Part-15.pdf/೫೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಗ್ರಹಣ ಖಗೋಳಿಯ ನೆರಳಿನ ಶಂಕುವಿನ ಮೂಲಕ ಹಾದುಹೋಗುವ ಸಂಭಾವ್ಯತೆ ಉಂಟು. ದಟ್ಟ ನೆರಳಿನ ಭಾಗದ ಒತ್ತಿಗೆ ಅರೆನೆರಳಿನ ಭಾಗಗಳು ಇವೆ. ಆದ್ದರಿಂದ ಚಂದ್ರ ದಟ್ಟ ನೆರಳಿನ ಭಾಗವನ್ನು ಪ್ರವೇಶಿಸುವ ಮುನ್ನ ಮತ್ತು ಅದನ್ನು ಹಾದುಹೋದ ತರುವಾಯ ಅರೆನೆರಳಿನ ಭಾಗದ ಮೂಲಕ ಹೋಗಲೇಬೇಕು.

  ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯ ಸುತ್ತ ಸಂಚರಿಸುವಾಗ ಭೂಮಿಯ  ನೆರಳಿನೊಳಕ್ಕೆ ಬಂದರೆ ಆಗ ಚಂದ್ರಗ್ರಹಣವಾಗುತ್ತದೆ. ಈ ಗ್ರಹಣವಾಗಬೇಕಾದರೆ ಸೂರ್ಯ, ಭೂಮಿ ಮತ್ತು ಚಂದ್ರ ಇವು ಮೂರು ಸುಮಾರಾಗಿ ಒಂದೇ  ಸರಳರೇಖೆಯಲ್ಲಿರಬೇಕು. ಚಂದ್ರ ತನ್ನ ಪಥದ ಒಂದು ಪಾತಬಿಂದುವಿನಲ್ಲೋ ( ರಾಹು ಇಲ್ಲವೆ ಕೇತು ) ಇಲ್ಲವೇ ಅದರ ಹತ್ತಿರವೋ ಇದ್ದು ಸೂರ್ಯನೊಂದಿಗೆ ವಿಯುತಿಯಲ್ಲಿದ್ದರೆ ( ಅಪೊಸಿಷನ್ ) ಅಂದರೆ ಹುಣ್ಣಿಮೆಯಾಗಿದ್ದರೆ ಆಗ ಚಂದ್ರ ಗ್ರಹಣವಾಗುತ್ತದೆ. ಚಂದ್ರಪಥ ನೇರವಾಗಿ ದಟ್ಟ ನೆರಳಿನ ಮಧ್ಯೆ ಹಾದುಹೋಗಬಹುದು ಇಲ್ಲವೇ ಸ್ವಲ್ಪ ಮೇಲೆ ಅಥವಾ ಕೆಳಗೆ ಹೋಗಬಹುದು. ಇವು ಪಾತರೇಖೆಯ ವಿನ್ಯಾಸವನ್ನು ಅವಲಂಬಿಸಿರುತ್ತವೆ. ಚಿತ್ರ (೪)ರಲ್ಲಿ ಚಂದ್ರನು ಭೂಮಿಯ ದಟ್ಟ ನೆರಳಿನೊಳಗಿದ್ದು ಪೂರ್ಣಚಂದ್ರಗ್ರಹಣವಾಗಿರುವುದನ್ನು ತೋರಿಸಲಾಗಿದೆ. ಅರೆನೆರಳಿನ ಮೂಲಕ ಚಂದ್ರ ಬಿಂಬಿಸುವ ಬೆಳಕು ಸ್ವಲ್ಪ ಮಂಕಾಗಬಹುದು. ದಟ್ಟ ನೆರಳಿನ ಹತ್ತಿರ ಹೋದಹಾಗೆಲ್ಲ ಈ ಬೆಳಕು ಕಡಿಮೆಯಾಗುತ್ತ