ಪುಟ:Mysore-University-Encyclopaedia-Vol-6-Part-2.pdf/೪೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಇಲ್ಲಿ ಎದುರಾಗುವ ಪ್ರಧಾನ ಅಂಶಗಳಿವು: 0 ಎನ್ನುವುದು ಒಂದು ಸ್ಥಿರೀಕೃತ ಬಲಕೇಂದ್ರ. P ಎನ್ನುವ ಒಂದು ಕಣದ ಮೇಲೆ ಇದು ಆಕರ್ಷಣ ಬಲವನ್ನು ದತ್ತ ನಿಯಮಾನುಸಾರ ಪ್ರಯುಕ್ತಿಸು ವುದು. ಈ ಬಲ OP ರೇಖೆಯ ಮೇಲೆ 0 ನೆಡೆಗೆ ನಿರ್ದೇಶಿತವಾಗಿರುತ್ತದೆ. ಆಗ P ರೇಖಿಸುವ ವಕ್ರರೇಖೆಗೆ ಕೇಂದ್ರೀಯ ಕಕ್ಷೆ ಎಂದು ಹೆಸರು.

  ಸೌರವ್ಯೂಹದ ಉದಾಹರಣೆಯನ್ನೇ ತೆಗೆದುಕೊಂಡರೆ ಇಲ್ಲಿ ಸೂರ್ಯ ಬಲಕೇಂದ್ರ (S); ಭೂಮಿ (E) ರಾಶಿ m ಇರುವ ಒಂದು ಕಣ. ಸೂರ್ಯ- ಭೂಮಿಯ ಮೇಲೆ ಪ್ರಯುಕ್ತಿಸುವ ಬಲ ಸೂರ್ಯ ಭೂಮಿ ದೂರದ ವ್ಯಸ್ತ ವರ್ಗಾನುಪಾತದಲ್ಲಿದೆ