ವಿಷಯಕ್ಕೆ ಹೋಗು

ಪುಟ:Mysore-University-Encyclopaedia-Vol-6-Part-4.pdf/೧೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಗಾಂಧೀ, ಮೋಹನ್ ದಾಸ್ ಕರಮ್ ಚಂದ್


ಪ್ರತಿಯೊಬ್ಬ ಭಾರತೀಯನೂ ತನ್ನ ಬೆರಳ ಗುರುತುಗಳನ್ನು ನೋಂದಾಯಿಸ ಬೇಕೆಂದು ವಿಧಿಸುವ ಮಸೂದೆಯೊಂದಕ್ಕೆ ಟ್ರಾನ್ಸ್ ವಾಲ್ ಸಕಾ೯ರ 1906ರಲ್ಲಿ ಅನುಮೋದನೆ ನೀಡಿದಾಗ ಹೋರಟ ಬಿರುಸಾಯಿತು. ಸ್ರೀಪಯರುಷರೆಂಬ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಅನ್ವಯಿಸುತ್ತಿದ್ದ ಈ ಕಾನೂನಿನಂತೆ ನಡೆಯದವರು ದಂಡ ಕಾರಾಗೃಹವಾಸಗಳ ಶಿಕ್ಷೆಗೆ ಒಳಗಾಗಬೇಕಾಗುತ್ತಿತ್ತು. ಅಪಮಾನಕವಾದ ಈ ಕಾನೂನಿಗೆ ವಿಧೇಯತೆ ತೋರಿಸಬಾರದೆಂದು ಗಾಂಧಿಯವರು ಭಾರತೀಯರಿಗೆ ಹೇಳಿದರು. ಅವರ ನಾಯಕತ್ವದಲ್ಲಿ 2,000 ಸ್ರೀಯರು ಪ್ರತಿಭಟನೆಯ ಮೆರವಣಿಗೆ ನಡೆಸಿದರಜ್ಯೆು. ಜೈಲಿಗೂ ನಡೆದರು.

ಗಾಂಧಿಯವರು ಆರಂಭಿಸಿದ ಸತ್ಯಾಗ್ರಹದಲ್ಲಿ ಅನೇಕ ಭಾರತೀಯ ವತ೯ಕರೂ ವಕೀಲರೂ ಸಾಮಾನ್ಯರೂ ಭಾಗವಹಿಸಿ ಕಾರಾಗೃಹವಾಸ ಅನುಭವಿಸಿದರು. ಗಡೀಪಾರು, ಅಥಿ೯ಕ ಒತ್ತಾಯ ಮುಂತಾದ ಯಾವುದಕ್ಕೂ ಸತ್ಯಾಗ್ರಹಿಗಳು ಜಗ್ಗಲಿಲ್ಲ. ಗಾಂಧಿಯವರ ನಾಯಕತ್ವದಲ್ಲಿ ಅವರ ನಂಬಿಕೆ ಅಷ್ಟು ಆಗಾಧವಾಗಿತ್ತು. 1912ರಲ್ಲಿ ಗೋಪಾಲಕೃಷ್ಣ ಗೋಖಲೆಯವರ ದಕ್ಷಿಣ ಅಫ್ರಿಕಕ್ಕೆ ಭೇಟಿಯಿತ್ತುದರ ಪರಿಣಾಮವಾಗಿ ವಣ೯ಭೇದನೀತಿ ನಿಲ್ಲುವುದೆಂದೂ ಭಾರತೀಯರು ತೆರಬೇಕಾಗಿದ್ದ ತೆರಿಗೆ ರದ್ದಾಗುವುದೆಂದೂ ಆಶೆ ಜನಿಸಿತು. ಆದರೆ ಅದು ಭಗ್ನವಾಯಿತು. ಕ್ರೈಸ್ತ ವಿವಾಹಪದ್ಧತಿಗನುಗುಣವಾಗಿ ವಿವಾಹ ದಾಖಲಾತಿ ಹೊಂದದ ಎಲ್ಲ ಹಿಂದೂ, ಮುಸ್ಲಿಂ ಮತ್ತು ಪಾಸೀ೯ ವಿವಾಹಗಳೂ ನ್ಯಾಯಬದ್ಧವಲ್ಲವೆಂಬುದು ಶ್ರೇಷ್ಠ ನ್ಯಾಯಾಲಯವಿತ್ತ ಒಂದು ತೀಪಿ೯ನ ಫಲ. ಇದು ಭಾರತೀಯರ ಆತ್ಮಗೌರವವನ್ನು ಪೂಣ೯ವಾಗಿ ನಾಶಮಾಡಿತು. ಸತ್ಯಾಗ್ರಹ ಚಳವಳಿಗೆ ಇದರಿಂದ ಪುಟವಿಟ್ಟಂತಾಯಿತು.

ಈ ಸತ್ಯಾಗ್ರಹ ಹೋರಾಟದಲ್ಲಿ ಪುರುಷರ ಜೊತೆಗೆ ಸ್ರೀಯರೂ ಭಾಗವಹಿಸಿದರು. ಶಾಸನವನ್ನು ಉಲ್ಲಂಘಿಸಿ ನಟಾಲಿನಿಂದ ಟ್ರಾನ್ಸ್ ವಾಲಿಗೆ ಪ್ರವೇಶಿಸುವುದೇ ಆಗಿನ ಸತ್ಯಾಗ್ರಹದ ಕ್ರಮ. 1913ರ ನವೆಂಬರ್ 6ರಂದು ನಡೆದ ಶಾಸನೋಲ್ಲಂಘನ ಯಾತ್ರೆಯಲ್ಲಿ ಆಸಂಖ್ಯ ಹೆಂಗಸರೂ ಮಕ್ಕಳೂ ಭಾಗವಹಿಸಿದರು. ದಕ್ಷಿಣ ಆಫ್ರಿಕ ಸಕಾ೯ರ ಸತ್ಯಾಗ್ರಹಿಗಳ ಮೇಲೆ ನಡೆಸಿದ ಅತ್ಯಾಚಾರ ಬಹಳ ಹೇಯವಾದ್ದು. ಕೊನೆಗೆ ಗಾಂಧೀ ಮತ್ತು ಜನರಲ್ ಸ್ಮಟ್ಸರ ನಡುವೆ ಮಾತುಕತೆ ನಡೆದು ಒಂದು ಒಪ್ಪಂದವಾಯಿತು. 8 ವಷ೯ಗಳ ಸತ್ಯಾಗ್ರಹ ಕೊನೆಗೊಂಡಿತು. ಭಾರತೀಯರ ಬೇಡಿಕೆಗಳು ಸ್ವೀಕೃತವಾದುವು. ತೆರಿಗೆ ರದ್ದಾಯಿತು. ಭಾರತೀಯ ಸಂಪ್ರದಾಯದ ಪ್ರಕಾರ ನಡೆದ ವಿವಾಹಗಳು ಶಾಸನಬದ್ದವೆಂದು ಘೋಷಿತವಾದುವು. ಇದರಿಂದ ದಕ್ಷಿಣ ಆಫ್ರಿಕದ ಭಾರತೀಯರ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರಕದಿದ್ದರೂ ಭಾರತೀಯರು ಆತ್ಮಗೌರವಕ್ಕಾಗಿ ಹೋರಾಡುವ ಶಕ್ತಿಯನ್ನು ಕಂಡುಕೊಂಡರು. ಅಲ್ಲದೆ ಈ ಹೋರಾಟದ ನಾಯಕತ್ವವಹಿಸಿದ್ದ ಗಾಂಧಿಯವರು ಅಪಾರ ಅನುಭವ ಪಡೆದಿದ್ದರು. ಸಾಮಾಜಿಕ, ರಾಜಕೀಯ ಚಳವಳಿಗಳನ್ನು ನಡೆಸಲು ಹೊಸದೊಂದು ತಂತ್ರವೇ ಅವರಿಂದ ಸೃಷ್ಟಿಯಾಗಿತ್ತು.

ಗಾಂಧಿಯವರು ಹೂಡಿದ ಈ ಹೋರಾಟವನ್ನು ಮೊದಲು ನಿಶ್ಯಸ್ತ್ರ ಪ್ರತಿಭಟನೆ ಎಂದೇ ಕರೆಯಲಾಗುತ್ತಿತ್ತು. ಅನಂತರ ಅವರು ಇದನ್ನು ಸದಾಗ್ರಹವೆಂದೂ ಕೊನೆಗೆ ಸತ್ಯಾಗ್ರಹ ಚಳವಳಿ ನಡೆಯಿತು.

ತಮ್ಮ ವಕೀಲಿಯಿಂದ ಚೆನ್ನಾಗಿ ಸಂಪಾದನೆ ಮಾಡುತ್ತಿದ್ದ ಗಾಂಧಿಯವರು ಕ್ರಮೇಣ ಅದನ್ನೂ ಬಿಟ್ಟುಕೊಟ್ಟರು. ತಮ್ಮ ವೇಳೆಯನ್ನೆಲ್ಲ ಅವರು ಮುಂದಿರಿಸಿಕೊಂಡ ಉದ್ದೇಶಕ್ಕಾಗಿಯೇ ಮೀಸಲಾಗಿರಿಸಿದರು. ಜೀವನದ ಬಗ್ಗೆ ಅವರ ಧೋರಣೆ ಶೀಘ್ರವಾಗಿ ಬದಲಾಗುತ್ತಿತ್ತು. ಗೀತೆ ಉಪನಿಷತ್ತು ಕುರಾನ್ ಬೈಬಲ್ ಗಳನ್ನು ಅವರು ಆಳವಾಗಿ ಅಭ್ಯಾಸ ಮಾಡಿದರು. ಗೀತೆಯಂತೂ ಅವರಿಗೆ ಬಾಯಿಪಾಠವಾಗಿತ್ತು ಅದು ಅವರ ಜೀವನಧಮ೯ಸೂತ್ರ, ಅವರ ಮೇಲೆ ತುಂಬ ಪರಿಣಾಮ ಮಾಡಿದ ಇನ್ನೊಂದು ಪುಸ್ತಕವೆಂದರೆ ದಸ್ಕಿನನ ಅಂಟು ದಿಸ್ ಲಾಸ್ಟ್, ಎಲ್ಲರ ಒಳಿತಾದಾಗಲೇ ವ್ಯಕ್ತಿಯ ಒಳಿತು; ದುಡಿಮೆಯ ಬಾಳೇ ಸಾಥ೯ಕವಾದ್ದು-ಎಂಬುದು ಅವರು ಗ್ರಹಿಸಿದ ತತ್ತ್ವ, ಬ್ರಹ್ಮಚಯ೯ವನ್ನು ಅವರು ಅನುಷ್ಠಾನಕ್ಕೆ ತಂದರು. ತಮ್ಮ ಸಂಸಾರದೊಂದಿಗೂ ಸ್ನೇಹಿತರೊಂದಿಗೂ ಅವರು ಫೀನಿಕ್ಸ್ ಆಶ್ರಮವನ್ನೂ 1910ರಲ್ಲಿ ಟಾಲ್ಸ್ ಟಾಯ್ ಆಶ್ರಮವನ್ನೂ ಸ್ಥಾಪಿಸಿದರು. ದೇಹ ಮನಸ್ಸುಗಳೆರಡರ ಸಾಮರಸ್ಯ ಸಾದಿಸಿದರು. ಗುಡಿಸುವುದು, ಮಚ್ಚೆ ಹೊಲಿಯುವುದು, ಕೃಷಿ, ಮುದ್ರಣ-ಹೀಗೆ ಎಲ್ಲ ಬಗೆಯ ಕೆಲಸಗಳನ್ನೂ ಮಾಡಿದರು. ಯಾವ ಕೆಲಸವೂ ತುಚ್ಚವಲ್ಲ, ಯಾವುದೂ ದೊಡ್ಡದಲ್ಲ- ಎಂಬುದು ಅವರು ಸ್ವತಃ ಕಲಿತ, ಕಲಿಸಿದ ಪಾಠ. ಅವರೊಬ್ಬ ವಸ್ತುನಿಷ್ಠ ಆದಶ೯ವಾದಿ.