ವಿಷಯಕ್ಕೆ ಹೋಗು

ಪುಟ:Mysore-University-Encyclopaedia-Vol-6-Part-4.pdf/೧೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಗಾಂಧೀ, ಮೋಹನ್ ದಾಸ್ ಕರಮ್ ಚಂದ್ ಅಸಂಖ್ಯಾತ ಜನರಿಗೆ ತಮ್ಮ ಹರಿದ ಬಟ್ಟೆಯ ಬದಲು ಖಾದಿ ಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ಇದ್ದನ್ನು ಕಂಡು ಅವರ ಮನಸ್ಸು ಬಲು ನೊಂದಿತು.ಅಂಥವರಿಗೆ ಒಂದು ತುಂಡು ದಟ್ಟಿಯಿದ್ದರೂ ಸಾಕಿತ್ತು. ಹಾಗಿರುವಾಗ ತಾವಾದರೂ ಹೇಗೆ ಮೈ ತುಂಬ ಬಟ್ಟೆ ತೊಟ್ಟುಕೊಂಡಾರು? 1921ರಲ್ಲಿ ಗಾಂಧಿಯವರೂ ತುಂಡುಲುಂಗೀಧಾರಿಯಾದರು. ಆಸಹಕಾರ ಚಳವಳಿಯನ್ನು ಬಲಪಡಿಸಿದರು. ಆಸಹಕಾರ ಧಾರ್ಮಿಕ ಹಾಗೂ ನೈತಿಕ ಚಳವಳಿಯಾದರೂ ಸರ್ಕಾರವನ್ನು ಉರುಳಿಸುವುದೇ ಅದರ ಧ್ಯೇಯ ಎಂದು ಸಾರಿದರು. ಬ್ರಿಟಿಷ್ ಚಕ್ರಾಧಿಪತ್ಯವನ್ನು ಸೈತಾನನ ಪ್ರಭುತ್ವವೆಂದು ಕರೆದರು.

          1922ರಲ್ಲಿ ಗಾಂಧಿಯವರು ಗುಜರಾತಿನ ಬಾರ್ಡೋಲಿ ಜಿಲ್ಲೆಯಲ್ಲಿ ಸಾಮೂಹಿಕ ಕರನಿರಾಕರಣೆಯ ಚಳವಳಿಯ ನಾಯಕತ್ವ ವಹಿಸಲು ನಿರ್ಧರಿಸಿದರು.ಆದರೆ ಆ ಸಮಯಕ್ಕೆ ಸರಿಯಾಗಿ ಉತ್ತರ ಪ್ರದೇಶದ ಚೌರಿಚೌರಾದಲ್ಲಿ ಜನರು ಹಿಂಸಾಕಾರ್ಯದಲ್ಲಿ ತೊಡಗಿದರು. ಪೋಲೀಸರು ಮೇಲೆ ಹಲ್ಲೆ ಮಾಡಿದರು. ಜನರಿನ್ನೂ ಅಹಿಂಸಾತ್ಮಕ ಚಳವಳಿಗೆ ಸಿದ್ಧರಾಗಿಲ್ಲವೆಂದು ಗಾಂಧಿಯವರಿಗೆ ಮನವರಿಕೆಯಾಗಿ ಸಾಮೂಹಿಕ ಚಳವಳಿಯನ್ನು ನಿಲ್ಲಿಸಿದರು. ಗಾಂಧಿಯವರು ಪ್ರಾಯಶ್ಚಿತ್ತರೂಪವಾಗಿ ಐದು ದಿನಗಳು ಉಪವಾಸ ಕೈಗೊಂಡರು.

1922ರ ಮಾರ್ಚ್ 13ರಂದು ಸರ್ಕಾರ ಅವರನ್ನು ಬಂಧಿಸಿತು.ಗಾಂಧಿಯವರು ಯಂಗ್ ಇಂಡಿಯ ಪತ್ರಿಕೆಯಲ್ಲಿ ಬರೆದಿದ್ದ ಲೇಖನಗಳು ರಾಜದ್ರೋಹಾತ್ಮಕವೆಂದು ಆದು ಆಪಾದಿಸಿತು. ನ್ಯಾಯಾಲಯ ಅವರಿಗೆ ಆರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿತು.ಪುಣೆಯ ಕಾರಾಗೃಹದಲ್ಲಿ ಎರಡು ವರ್ಷ ಕಳೆದ ಮೇಲೆ ಗಾಂಧಿಯವರಿಗೆ ಅಂತ್ರಪುಚ್ಛವ್ಯಾಧಿಗಾಗಿ ಶಸ್ತ್ರಚಿಕಿತ್ಸೆ ನಡೆಯಬೇಕಾಗಿದ್ದುದರಿಂದ ಅವರು ಬಿಡುಗಡೆ ಹೊಂದಿದರು.

       ಆ ವೇಳೆಗೆ ಖಿಲಾಫತ್ ಚಳವಳಿ ವಿಫಲವಾಗಿತ್ತು. ವಿಧಾನಮಂಡಗಳನ್ನು ಪ್ರವೇಶಿಸಿ ಅಲ್ಲಿಂದ ಸರ್ಕಾರವನ್ನು ವಿರೋಧಿಸಬೇಕೆಂಬವದು ಕಾಂಗ್ರೆಸಿನ ಬಹುಮತಾಭಿ ಪ್ರಾಯವಾಗಿತ್ತು. ಗಾಂಧಿಯವರು ರಾಜಕೀಯದಿಂದ ದೂರವಾದರು. ಖಾದಿ ಪ್ರಚಾರಕ್ಕೆ ಅವರು ಹೆಚ್ಚು  ಗಮನ ನೀಡಿದರು. 1924ರಲ್ಲಿ ಬೆಳಗಾಂವಿನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಗಾಂಧಿಯವರು ಅಧ್ಯಕ್ಷರಾಗಿದ್ದರು.
 1927ರಲ್ಲಿ ಇರ್ವಿನ್ ವೈಸ್ ರಾಯ್ ಆಗಿದ್ದಾಗ-ಭಾರತದ ರಾಜ್ಯಾಂಗ ಸುಧಾರಣೆಗಳಿಗಾಗಿ ಸರ್ ಜಾನ್ ಸೈಮನ್ ಅಧ್ಯಕ್ಷತೆಯಲ್ಲಿ ಸರ್ಕಾರ ಒಂದು ಆಯೋಗವನ್ನು ನೇಮಿಸಿತು.ಒಬ್ಬನಾದರೂ ಭಾರತೀಯ ಸದಸ್ಯನಿದ ಆ ಆಯೋಗವನ್ನು ಭಾರತೀಯರು ವಿರೋಧಿಸಿದರು. ಕಾಂಗ್ರೆಸ್ ಬಹಿಷ್ಕಾರ ಹಾಖಿತು. ಭಾರತದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲು ಬ್ರಿಟಿಷ್ ಮತ್ತು ಭಾರತೀಯ ಪ್ರತಿನಿಧಿಗಳನ್ನೊಳಗೊಂಡ ದುಂಡುಮೇಜಿನ ಪರಿಷತ್ತೊಂದು ನಡೆಯುವುದಾಗಿ ಪ್ರಕಟನೆ ಹೊರಬಿತ್ತು. ಭಾರತಕ್ಕೆ ಅಧಿರಾಜ್ಯ ಸ್ಥಾನವನ್ನು (ಡೊಮಿನಿಯನ್ ಸ್ಟೇಟಸ್) ನೀಡುವುದಾಗಿ ಪರಿಷತ್ತು ತೀರ್ಮಾನಿಸುವ ಬಗ್ಗೆ ವೈಸ್ ರಾಯ್ ಯಿಂದ ಭರವಸೆ ಬರಲಿಲ್ಲ. ಸಂಪೂರ್ಣ ಸ್ವರಾಜ್ಯವೇ ತನ್ನ ಗುರಿಯೆಂದು ಕಾಂಗ್ರೆಸ್ ಘೋಷಿಸಿತು. ಮತ್ತೊಂದು ಮಹಾ ಚಳವಳಿಗಾಗಿ ಸಿದ್ಧತೆಗಳು ನಡೆದುವು.
 1930 ಮಾರ್ಚ್ 12ರಂದು ಗಾಂಧಿಯವರು ತಮ್ಮ ಸುಪ್ರಸಿದ್ಧ ಉಪ್ಪಿನ ಸತ್ಯಾಗ್ರಹವನ್ನಾರಂಭಿಸಿದರು. 78 ಮಂದಿ ಅನುಯಾಯಿಗಳೊಂದಿಗೆ ಗಾಂಧಿಯವರು ಅಹಮದಾಬಾದಿನಿಂದ 384 ಕಿಮೀ ದೂರದಲ್ಲಿ ಸಮುದ್ರ ದಂಡೆಯಲ್ಲಿರುವ ದಂಡಿಗೆ ಹೊರಟರು. ಉಪ್ಪಿನ ತಯಾರಿಕೆಯಲ್ಲಿ ಸರ್ಕಾರ ಹೊಂದಿದ್ದ ಏಕಸ್ವಾಮ್ಯವನ್ನು ವಿರೋಧಿಸಿ ಕಾನೂನು ಭಂಗ ಮಾಡುವುದು ಅವರ ಉದ್ದೇಶ. ಏಪ್ರಿಲ್ 6ರಂದು ಅವರು ದಂಡಿಯನ್ನು ತಲಪಿ,ಸಮುದ್ರಸ್ನಾನ ಮಾಡಿ ನೈಸರ್ಗಿಕ ಉಪ್ಪನ್ನು ಕೈಯಲ್ಲಿ ಹಿಡಿದು.ನಾಡಿನಾದ್ಯಂತ ಜನರು ಗಾಂಧಿಯವರ ಮಾಡಿ ಕರೆಯಂತೆ ಸತ್ಯಾಗ್ರಹವನ್ನಾಚರಿಸಿದರು. ಸುಮಾರು ಒಂದು ಲಕ್ಷ ಜನ ದಸ್ತಗಿರಿಯಾದರು .ಮೇ4ರಂದು ಗಾಂಧಿಯವರ ದಸ್ತಗಿರಿಯಾಯಿತು. 1931ರ ಜನವರಿ 26ರ ವರೆಗೂ ಸರ್ಕಾರ ಅರನ್ನು ಸೆರೆಯಲ್ಲಿಟ್ಟಿತ್ತು.ಸತ್ಯಾಗ್ರಹವನ್ನು ಅಂತ್ಯಗೊಳಿಸುವ ಬಗ್ಗೆ ಮಾರ್ಚ್ 5ರಂದು ಗಾಂಧಿ-ಇರ್ವಿನ್ ಒಪ್ಪಂದಕ್ಕೆ ಸಹಿಯಾಯಿತು.ಸತ್ಯಾಗ್ರಹಿಗಳು ಬಿಡುಗಡೆಯಾದರು. ಕೆಲವೊಂದು ಮಿತಿಗಳೊಳಗೆ,ಸ್ವಂತ ಉಪಯೋಗಕ್ಕಾಗಿ ಉಪ್ಪನ್ನು ತಯಾರಿಸಲು ಆವಕಾಶ ಲಭ್ಯವಾಯಿತು.
 1931ರಲ್ಲಿ ಲಂಡನಿನಲ್ಲಿ ನಡೆದ ಎರಡನೆಯ ದುಂಡುಮೇಜಿನ ಪರಿಷತ್ತಿನಲ್ಲಿ ಭಾಗವಹಿಸಲು ಗಾಂಧಿಯವರು ಪ್ರಯಾಣ ಬೆಳೆಸಿದರು. ಅವರ ಭೇಟಿಯಿಂದಾಗಿ ಇಂಗ್ಲೆಂಡ್-ಭಾರತಗಳ ಸಾಮಾನ್ಯ ಜನಗಳ ನಡುವೆ ಹೆಚ್ಚು ನಿಕಟ ಬಾಂಧವ್ಯ ಬೆಳೆಯಿತು.ಆದರೆ ಸಮ್ಮೇಳನದಲ್ಲಿ ಅಲ್ಪಸಂಖ್ಯಾತರಿಗೆ ಸರ್ಕಾರ ವಿಶೇಷ ಪ್ರಾಮುಖ್ಯ ನೀಡಿತು.ಭಾರತೀಯರಿಗೆ ಸ್ವಯಮಾಡಳಿತ ನೀಡಿವುದಕ್ಕಿಂತ ಇದಕ್ಕೇ ಆದ್ಯ ಗಮನ ನೀಡುವುದಕ್ಕೆ ಗಾಂಧಿಯವರು ಒಪ್ಪಲಿಲ್ಲ.ಸರ್ಕಾರ ಅನಾವಶ್ಯಕವಾಗಿ ಭಾರತದ ಜನಗಳ ನಡುವೆ ಕೋಮುವಾರು ಭೇದಭಾವವನ್ನು ಬೆಳೆಸುತ್ತಿದೆಯೆಂಬ ವಿಷಯ ಅವರಿಗೆ ಮನವರಿಕೆಯಾಯಿತು.ಬ್ರಿಟನ್ ತನ್ನ ಅಧಿಕಾರವನ್ನು ಹಿಂದೆಗೆದು ಕೊಂಡರೆ ಕೋಮುವಾರು ಸಮಸ್ಯೆಗಳೆಲ್ಲ ತಾವಾಗಿಯೇ ಬಗೆಹರಿದಾವೆಂಬುದು ಅವರಭಾವನೆ.ಅದರೆ ಅವರ ವಾದ ಫಲಿಸಲಿಲ್ಲ.ಸಮ್ಮೇಳನದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಎತ್ತಿ ಹಿಡಿಯುವವರ ಸಂಖ್ಯೆಯೇ ಹೆಚ್ಚಾಗಿರುವಂತೆ ಸರ್ಕಾರ ತಂತ್ರ ಹೂಡಿತ್ತು.
    1931ರ ಕೊನೆಯಲ್ಲಿ ಗಾಂಧಿಯವರು ಹಿಂದಿರುಗಿದಾಗ ಭಾರತದ ರಾಜಕೀಯ ಪರಿಸ್ಥಿತಿ ತೀವ್ರವಾಗಿತ್ತು.ಹಲುವು ನಾಯಕರು ಬಂಧಿತರಾಗಿದ್ದರು.ನಿಷೇಧಾಜ್ನೆಗಳು ಜಾರಿಯಲ್ಲಿದ್ದುವು.ಆಗ ವೈಸ್ ರಾಯ್ ಆಗಿದ್ದ ವಿಲಿಂಗ್ಡನನಿಗೆ ಗಾಂಧಿಯವರು ಪತ್ರ ಬರೆದರು.ಪರಿಸ್ಥಿತಿ ಕೈಮೀರದಂತೆ ಯತ್ನಿಸಬೇಕೆಂದೂ ಅನಿವಾರ್ಯವಾದರೆ ಕಾಂಗ್ರೆಸ್ಸು ಸತ್ಯಾಗ್ರಹ ಹೋರಾಟವನ್ನು ಮತ್ತೆ ಆರಂಭಿಸಲಾಗುವುದೆಂದೂ ಎಚ್ಚರಿಸಿದರು.
         ಆದರೆ ಸರ್ಕಾರ ಲಕ್ಷಿಸಲಿಲ್ಲ.1932ರ ಜನವರಿ 4ರಂದು ಗಾಂಧಿಯವರು ದಸ್ತಗಿರಿಯಾದರು.ಪಟೇಲರನ್ನೂ ಅವರನ್ನೂ ಸರ್ಕಾರ ಪುಣೆಯ ಎರವಾಡ ಸೆರೆಮನೆಯಲ್ಲಿಟ್ಟಿತು. ಹರಿಜನರನ್ನು ಪ್ರತ್ಯೇಕ ಗೊಳಿಸಲು ಸರ್ಕಾರ ಕೈಗೊಳ್ಳಲಿದ್ದ ಕ್ರಮವೊಂದನ್ನು