ವಿಷಯಕ್ಕೆ ಹೋಗು

ಪುಟ:Mysore-University-Encyclopaedia-Vol-6-Part-4.pdf/೨೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ನಿರ್ಧ‍ರಿಸುವುದರಲ್ಲಿ ಸಕ್ರಿಯಾಪಾತ್ರವಹಿಸಲಾಗುವುದಿಲ್ಲ. ಬದಲಾಗಿ ಪ್ರತಿಯೊಂದು ಕೆಲಸಕ್ಕೂ ಸ‌‌ರ್ಕಾರವನ್ನೇ ಎದುರು ನೋಡುವ ಅಸಹಾಯಕ ಪರಿಸ್ಥಿತಿಯಲ್ಲಿರುತ್ತಾರೆ. ಇದು ತಪ್ಪುಬೇಕಾದರೆ ರಾಜಕೀಯ ಅಧಿಕಾರದ ವಿಕೇಂದ್ರೀಕರಣಕ್ಕೆ ಸಹಾಯಕವಾಗುವ ಗ್ರಾಮ ಘಟಕಗಳಿವೆ. ಗಾಂಧಿಯವರ ದ್ರಷ್ಟಿಯಲ್ಲಿ ಪ್ರತಿ ಗ್ರಾಮವೂ ಸ್ವಾಯತ್ತತೆಯ ಘಟಕವಾಗಬೇಕು. ಅವರು ದೇಶದ ಮುಂದಿಟ್ಟ ಗ್ರಾಮಸ್ವರಾಜ್ಯದ ಚಿತ್ರವಿದು.

ನನ್ನ ಕಲ್ಪನೆಯ ಗ್ರಾಮಸ್ವರಾಜ್ಯವೆಂದರೆ ಅದೊಂದು ಪರಿಪೂರ್ಣಗಣರಾಜ್ಯ. ತನ್ನ ಪ್ರಧಾನ ಅಗತ್ಯವಾದಲ್ಲಿ ಅದು ನೆರೆಹೊರೆಯವರಿಂದ ಸ್ವತಂತ್ರ್ಯ. ಆದರೂ ಅಗತ್ಯವಾದಲ್ಲಿ, ಎಷ್ಟೋ ವಿಷಯಗಳಲ್ಲಿ ಗ್ರಾಮಗಳು ಪರಸ್ಪರಾವಲಂಬಿಯಾಗಿರುತ್ತವೆ. ಹೀಗೆ ತನ್ನ ಆಹಾರ ಬೆಳೆಯುವುದು, ಬಟ್ಟೆಗಾಗಿ ಹತ್ತಿ ಬೆಳೆಯುವುದು, ಪ್ರತಿ ಹಳ್ಳಿಯ ಮೊದಲ ಗಮನ. ದನಕರುಗಳಿಗಾಗಿ ಕಾವಲು, ಮಕ್ಕಳಗಾಗಿಯೂ ಪ್ರೌಢರಿಗಾಗಿಯೂ ಆಟಕ್ಕೂಮನೋರಂಜನೆಗೂ ಸ್ಥಳ ಇರಬೇಕು. ಇದಕ್ಕೆಲ್ಲೆ ಆಗಿ ಭೂಮಿ ಮಿಕ್ಕರೆ ಅದರಲ್ಲಿ ಗಾಂಜಾ, ತಂಬಾಕು,ಆಫೀಮುಗಳ ಹೊರತಾಗಿ ಉಪಯೋಗಕರ ಹಣದ ಬೆಳೆಗಳನ್ನು ಬೆಳೆಯಬಹುದು. ಹಳ್ಳಿಹಳ್ಳಿಯಲ್ಲೂ ನಾಟಕಮಂದಿರ, ಶಾಲೆ, ಸಭಾಭವನ ಇದ್ದವು; ಶುದ್ಧವಾದ ನೀರಿನ ಪೂರೈಕೆಯ ಕೇಂದ್ರ ಇದ್ದೀತು. ಮೂಲಶಿಕಣದ ಅವಧಿಯ ಪೂರ್ಣ ಶಿಕ್ಷಣ ಕಡ್ಡಾಯವಿದ್ದೀತು. ಸಾಧ್ಯವಿದ್ದಷ್ಟು ಮಟ್ಟಿಗೂ ಪ್ರತಿಯೊಂದು ಕೆಲಸವನ್ನು ಸಹಕಾರತತ್ತ್ವದ ಆಧಾರದ ಮೇಲೆ ಕೈಗೊಳ್ಳಲಾದೀತು. ಘಟ್ಟಘಟ್ಟಗಳ ಆಸ್ಪೃಶ್ಯತೆಯುಳ್ಳ ಇಂದಿನಂಥ ಜಾತಿಗಳಿರುವುದಿಲ್ಲ. ಸತ್ಯಾಗ್ರಹ ಹಾಗೂ ಅಸಹಕಾರ ತಂತ್ರವುಳ್ಳ ಆಹಿಂಸೆಯೇ ಗ್ರಾಮಸಮಾಜದ ಆಧಾರಶಕ್ತಿ. ಹಳ್ಳಿಯಲ್ಲಿ ಇಡಲಾದ ಒಂದು ಖಾತೆಯಿಂದ ಸರದಿ ಪ್ರಕಾರ ಆರಿಸಲಾಗುವ, ಎಲ್ಲರಿಗೂ ಅನಿವಾರ್ಯವಾದ, ಗ್ರಾಮರಶಕ್ಷಕ ಪಡೆ ಇದ್ದೀತು. ಹಳ್ಳಿಯಲ್ಲಿ ಯೋಗ್ಯಕನಿಷ್ಠ ಅರ್ಹತೆಗಳುಳ್ಳ ಎಲ್ಲ ಪ್ರೂಢ ಸ್ತ್ರೀಪುರುಷರೂ ವರ್ಷಕ್ಕೊಮ್ಮೆ ಚುನಾಯಿಸುವ ಐವರ ಪಂಚಾಯಿತಿ ಹಳ್ಳಿಯ ಆಡಳಿತವನ್ನು ನಡೆಸಿಕೊಂಡು ಹೋಗುವುದು. ಆಡಳಿತಕ್ಕೆ ಬೇಕಾದ ಅಧಿಕಾರ, ವ್ಯಾಪ್ತಿ ಎರಡೂ ಈ ಮಂಡಳಿಗೆ ಇರುವುವು. ಪ್ರಚಲಿತ ಅರ್ಥದ ಶಿಕ್ಷೆಯ ಪದ್ಧತಿ ಇರುವುದಿಲ್ಲವಾದ್ದರಿಂದ ಪಂಚಾಯಿತಿಯೇ ಶಾಸಕಾಂಗ ನ್ಯಾಯಾಂಗ ಕಾರ್ಯಾಂಗಗಳಾಗಿ ತನ್ನ ಒಂದು ವರ್ಷದ ಅಧಿಕಾರಾವಧಿಯಲ್ಲಿ ಕೆಲಸ ಮಾಡೀತು. ಇಲ್ಲಿ ವ್ಯಕ್ತಿಸ್ವಾತಂತ್ರ್ಯದ ಆಧಾರದ ಮೇಲೆ ಪರಿಪೂರ್ಣ ಜನತಂತ್ರವಿದೆ. (ಆಧಾರ : ಹರಿಜನ, ಜುಲೈ 26,1942)

ಗ್ರಾಮ ಗಣರಾಜ್ಯಗಳ ಮಹಾ ಒಕ್ಕೂಟವೇ ಭಾರತರಾಷ್ಟ್ರ. ಅಸಂಖ್ಯ ಹಳ್ಳಿಗಳುಳ್ಳ ಈ ರಚನೆಯಲ್ಲಿ ಸದಾ ವ್ಯಾಪಕವೃತ್ತಗಳಿರುತ್ತವೆ; ಆರೋಹಣ ವೃಲತ್ತಗಳಿರುವುದಿಲ್ಲ. ಬದುಕು ಪಿರಮಿಡಿನಂತಿರುವುದಿಲ್ಲ. ಅದು ಸಾಗರ ಸಮವೃತ್ತದಂತೆ. ಅದರ ಕೇಂದ್ರಬಿಂದು ವ್ಯಕ್ತಿ. ಆತ ತನ್ನ ಹಳ್ಳಿಗಾಗಿ ಆಳಿಯಲೂ ಸದ್ಧ. ಗ್ರಾಮಗಳ ಶಮೂಹಕ್ಕಾಗಿ ನಾಶವಾಗಲು ಹಳ್ಳಿ ಸದ್ಧ. ಕೊನೆಗೆ ಇಡೀ ಜೀವನ ಒಂದು ಅಹಂಬಾರದಿಂದ ಆಬ್ರಮಣಕಾರಿಗಳಗುವುದಲ್ಲ. ಅವರು ಸದಾ ವಿನಿಮ್ರರು. ಸಾಗರ ಸಮವೃತ್ತದ ಗಾಂಭೀರ್ಯದಲ್ಲಿ ಪಾಲುಗೊಂಡವರು.

ಆದ್ದರಿಂದ ಹೊರಗಿನ ವೃತ್ತ ಒಳಗಿನ ವೃತ್ತವನ್ನು ತುಳಿಯಲು ತನ್ನ ಅಧಿಬಾರವನ್ನು ಉಪಯೋಗಿಸುವುದಿಲ್ಲ. ಆದರ ಬದಲಾಗಿ ತಾನೂ ಅದಕ್ಕೆ ಶಕ್ತಿ ನೀಡುತ್ತದೆ.ಅದರಿಂದ ತಾನೂ ಶಕ್ತಿ ಪಡೆಯುತ್ತದೆ. ಇದೆಲ್ಲ ಅಸಾಧ್ಯವಾದ ಆದರ್ಶ ಎಂದು ನೀವು ನನ್ನನ್ನು ಮೂದಲಿಸಬಹುದು. ಮನುಷ್ಯಮಾತ್ರರು ಗುರುತಿಸಲಾದ ಯೂಕ್ಲಿಡನ ಬಿಂದುವಿಗೇ ಆಳಿಯದ ಬೆಲೆ ಇರುವುದಾದರೆ ಗುರುತಿಸಲಾದ ಯೂಕ್ಲಿಡನ ಬಿಂದುವಗೇ ಆಳಿಯದ ಬೆಲೆ ಇರುವುದಾದರೆ ಮಾನವಕುಲ ಉಳಿಯುವಂಥ ನನ್ನ ಚತ್ರಕ್ಕೂ ತನ್ನದೇ ಆದ ಮೌಲ್ಯವುಂಟು. ಚಿತ್ರವನ್ನು ಪರಿಪೂರ್ಣವಾಗಿ ಎಂದೂ ಸಾಧಿಸಲಾಗದಿದ್ದರೂ ಭಾರತ ಈ ನೈಜ ಚಿತ್ರಕ್ಕಾಗಿ ಬದುಕಲಿ, ನಮಗೆ ಬೇಕಾದುದರ ಯೋಗ್ಯ ಚಿತ್ರವಿಲ್ಲದೆ ನಾವು ಅದರತ್ತ ಧಾವಿಸುವುದು ಸಾಧ್ಯವಿಲ್ಲ. ಭಾರತದ ಪ್ರತಿಯೊಂದು ಹಳ್ಳಿಯಲ್ಲೂ ಎಂದಾದರೊಂದು ದಿನ ಪ್ರಜಾರಾಜ್ಯವಾಗಬೇಕಾಗಿದ್ದರೆ ನನ್ನ ಈ ಚಿತ್ರವೆ ಸರಿ ಎನ್ನುತ್ತೇನೆ. ಇದರಲ್ಲಿ ಕೊನೆಯದೂ ಮೊದಲಿನದೂ ಪರಸ್ಪರ ಸಮಾನ; ಅರ್ಥಾತ್ ಪ್ರಥಮ ಅಂತಿಮ ಯಾವುದು ಇದರಲ್ಲಿಲ್ಲ.(ಆಧಾರ: ಹರಿಜನ ಜುಲೈ 22,1946)

ಪ್ರಗಾಪ್ರಭುತ್ವದ ಯಶಸ್ಸಯ ವಿಕೇಂದ್ರೀಕರಣವನ್ನು ಅವಲಂಬಿಸಿದೆ ಎಂಬುದು ಗಾಂಧಿಯವರ ಸ್ಪಷ್ಟ ಆಭಿಮತ, ವಿಕೇಂದ್ರೀಕೃತ ವ್ಯವಸ್ಥೆಯಲ್ಲಿ ಮಾತ್ರ ಅಹಿಂಸೆಯ ಆಚರಣೆ ಸಾಧ್ಯ ಅಹಿಂಸೆ ಆಧಾರವಾಗಿರದ ಪ್ರಜಾತಂತ್ರ ನಿಜವಾದ ಪ್ರಜಾಪ್ರಭುತ್ವವಾಗುವುದೇ ಇಲ್ಲ.

ರಾಜಕೀಯ ಅಧಿಕಾರದ ಜೊತೆಯಲ್ಲಿ ಆರ್ಥಿಕಶಕ್ತಿಯ ವಕೇಂದ್ರೀಕರಣವೂಆಗಬೇಕು. ವಿಕೇಂದ್ರೀಕರಣವೂ ಆಗಬೇಕು. ವಿಕೇಂದ್ರೀಕೃತ ಆರ್ಥವ್ಯವಸ್ಥೆ ಎಂದರೆ ಮನ್ಯುಷ್ಯನ ಶ್ರಮಶಕ್ತಿ ಆಧಾರವಾಗಿರುವ ಸಣ್ಣ ಉದ್ಯಮಗಳ ವ್ಯವಸ್ಥತ. ಜನತೆಗೆ ಉಪಯುಕ್ತವಾದ ಎಲ್ಲ ಅಗತ್ಯ ಬಳಕೆಯ ವಸ್ತುಗಳ ಉತ್ಪಾದನೆ ಕುಟ್ಟೀರಗಳಲ್ಲಿ ಅಥವಾ ಸಣ್ಣ ಸಣ್ಣ ಘಟಕಗಳಲ್ಲಿ ಆಗುತ್ತದೆ.

ಭಾರತದಂಥ ಜನಬಾಹುಳ್ಯವಿರುವ ದೇಶದಲ್ಲಿ ಕೋಟಿ ಕೋಟಿ ಕೈಗಳೂ ಲಕ್ಷೋಪಲಕ್ಷ ಕುಟೀರಗಳಲ್ಲಿ ಉತ್ಪಾದಿಸಿದ ವಸ್ತುಗಳ ಒಟ್ಟು ಗಾತ್ರ ಆಗಾಧವಾದ ಜನರ ಆವಶ್ಯಕತೆಗಳನ್ನು ಪೊರೈಸುತ್ತದೆ. ಶ್ರಮಶಕ್ತಿಗೆ ಪೂರಕವಾಗಿ ಸಣ್ಣ ಯಂತ್ರಗಳಿಗೆ ಅವಕಾಶವಿರುತ್ತದೆ. ಇಂಥ ವ್ಯವಸ್ಥೆಯಲ್ಲಿ ಮಧ್ಯವರ್ತಿಗಳಿಂದ ‍ಶೋಷಣೆ ಅಥವಾ ಲಾಭಬಡುಕತನ ಇರುವುದಿಲ್ಲ. ಉತ್ಪಾದನೆ ವಿತರಂಎಗಳು ಒಟ್ಟಿಗೆ ಆಗಿ ಪರಮಾವಧಿ ಉದ್ಯೋಗ ಪ್ರಾಪ್ತಿ ಹಾಗೂ ನ್ಯಾಯೋಚಿತ ವಿತರಣೆ ಆಗುತ್ತದೆ.

ಅನಿವಾರ್ಯವಾಗಿ ಹಲವು ಬೃಹತ್ ಕೈಗಅರಿಕೆಗಳು ಇರಬೇಕಾದ ಸಂದರ್ಭದಲ್ಲಿ ಅದರ ಮಾಲೀಕತ್ವದಲ್ಲಿ ಕಾರ್ಮಿಕರ ಸಹಭಾಗಿತ್ವ ಇರಬೇಕು. ಮಾಲೀಕರು ಉದ್ಯಮದ ಧರ್ಮದರ್ಶಿಗಳಾಗಿ ವರ್ತಿಸಿ ಕಾರ್ಮಿಕರ ಸಹಭಾಗಿತ್ವ ಇರಬೇಕು. ಮಾಲೀಕರು ಉದ್ಯಮದ ಧರ್ಮದರ್ಶಿಗಳಾಗಿ ವರ್ತಿಸಿ ಕಾರ್ಮಿಕವರ್ಗಕ್ಕೆ ಸಮಪಾಲು ನೀಡಬೇಬು. ಮಾಲೀಕ ವರ್ಗ ಹಾಗೇ ನಡೆದುಕೊಳ್ಳದಿದ್ದ ಪಕ್ಷದಲ್ಲಿ ಅಂಥ ಭಾರೀ ಉದ್ಯಮಗಳು ಸರ್ಕಾರದ ಒಡೆತನಕ್ಕೆ ಒಳಪಡುತ್ತವೆ. ಸರ್ಬಾರದ ಆಧೀನದಲ್ಲಿದ್ದರೂ ಅದರ ಆಡಳಿತ ಮಂಡಲಿಯಲ್ಲಿರತಕ್ಕದ್ದು. ಮುಷ್ಟಿಯಲ್ಲಿರದೆ ಕಾರ್ಮಿಕರ ಪ್ರಾತಿನಿಧ್ಯವುಳ್ಳ ದಕ್ಷ ಆಡಳಿತ ಮಂಡಲಿಯಲ್ಲಿರತಕ್ಕದ್ದು.

ಗಾಂಧಿಯವರ ಕಲ್ಪನೆಯ ಸಮಾಜ ಜಾತಿರಹಿತ ಹಾಗೂ ವರ್ಗರಹಿತ ಸಮಾಜ. ಎಲ್ಲ ಜನರ ಸರ್ವಾಂಗೀಣ ವಿಕಾಸಕ್ಕೆ ಇದರಲ್ಲಿ ಆದ್ಯ ಗಮನ. ಸ್ತ್ರೀಪುರುಷರು ರಾಷನಿರ್ಮಾಣ ಕಾರ್ಯದಲ್ಲಿ ಸಹಾಭಾಗಿಗಳು.

ಸ್ವರಾಜ್ಯದ ರಾಜಕಾರಣ ಸೇವಾಪರವಾದ ರಾಜಕಾರಣ. ನೀತಿಬಾಹಿರವಾದ ರಾಜಕಾರಣ ಪಾಶವೀ ರಾಜಕೀಯವಾದ್ದರಿಂದ ಅದು ಸಮಾಜಘಾತಕ. ಸಅಧನ, ಗುರಿ ಇವೆರಡೂ ಪವಿತ್ರವಾಗಿದ್ದಲ್ಲಿ ರಾಜಬಾರಣ ಪರಿಶುದ್ಧವಾಗಿರುತ್ತದೆ. ಜನತೆಯಿಂದ ಚುನಅಯಿತರಾದ ಪ್ರತಿನಿಧಿಗಳು ಪ್ರಾಮಾಣಿಕವಾಗಿ ಸೇವಾತತ್ತರರಾಗಿದ್ದರೆ ಅವರು ನಡೆಸುವ ಸರ್ಕಾರ ಸೇವಾಸಾಧನವಾಗುತ್ತದೆ. ವಿವಿಧ ಘಟ್ಟಗಳಲ್ಲಿ ಜನರು ಪ್ರತ್ಯಕ್ಷವಾಗಿ ವ್ಯಷ್ಟಿ ಹಾಗೂ ಸಮಷ್ಟಿ ಹಿತಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡುವುದರಿಂದ ಸಮಾಜದ ಅಭ್ಯುದಯ ಉಂಟಾಹುತ್ತದೆ. ಅದು ಸ್ವರಾಜ್ಯವು ಸುರಾಜ್ಯವೂ ಆಗಿರುತ್ತದೆ.

ಗಾಂಧಿಯವರ ಸ್ವರಾಜ್ಯದ ಕಲ್ಪನೆ ಕೇವಲ ಭಾರತಕ್ಕೆ ಸೀಮಿತವಾಗಿರದೆ ಇಡೀ ಮಾನವಜನಾಂಗಕ್ಕೆ ಅನ್ವಯಿಸುತ್ತದೆ. ದೊಡ್ಡವು, ಚಿಕ್ಕವು ಎಂಬ ಭೇದವಿಲ್ಲದೆ ಎಲ್ಲ ರಾಜ್ಯಗಳೂ ಸರಿಸಮಾನವಾದವು. ಎಲ್ಲ ದೇಶಗಳಲ್ಲೂ ರಾಜ್ಯವ್ಯವಸ್ಥೆ ಸತ್ಯ ಅಹಿಂಸೆ, ವಿಕೇಂದ್ರೀಕರಣ ಇವುಗಳ ಆಧಾರದ ಮೇಲೆ ರಚಿತವಾದರೆ ವಿಶ್ವಶಾಂತಿ ಶಾಶ್ವತವಾಗಿರುತ್ತದೆ. ಮಾನವ ಸ್ವಾತಂತ್ರ್ಯದ ದಿಗಂತ ವಿಸ್ತಾರವಾಗುತ್ತದೆ. (ಬಿ.ಆರ್.ಪಿ)

ಗಾಂಧೀ ದೃಷ್ಟಿಯಲ್ಲಿ ಸತ್ಯಾಗ್ರಹ: ಮಹಾತ್ಮ ಗಾಂಧಿಯವರು ಭಾರತವನ್ನು ಬ್ರಿಟಿಷ್ ಸಾಮ್ರಾಜ್ಯಶಾಹಿಯಿಂದ ವಿಮೋಚನೆಗೊಳಿಸಿದ ರಾಷ್ಟ್ರನಾಯಕರು. ೧೯ನೆಯ ಶತಮಾನದ ಯುರೋಪಿನ ಕೈಗಾರಿಕಾ ಕ್ರಾಂತಿ ಹಾಗೂ ಸಾಮ್ರಾಜ್ಯಶಾಹಿ ರಾಜಕೀಯ ವಿಸ್ತರಣಗಳ ಪರಿಣಾಮವಾಗಿ ಏಷ್ಯ ಆಫ್ರಿಕ ಖಂಡಗಳಲ್ಲಿಯ ಬಹು ಭಾಗ ದಾಸ್ಯಕ್ಕೆ ಒಳಗಾಗಿತ್ತು. ದಕ್ಷಿಣ ಆಫ್ರಿಕದಲ್ಲಿದ್ದ ಭಾರತೀಯ ವರ್ತಕರ ವಕೀಲರಾಗಿ ಅಲ್ಲಿಗೆ ಹೋಗಿದ್ದ ಗಾಂಧೀಯವರು ಅಲ್ಲಿಯ ಹೋಗಿದ್ದ ಗಾಂಧೀಯವರು ಅಲ್ಲಿಯ ಬ್ರಿಟಿಷ್ ಸಾಮ್ರಾಜ್ಯ ಶಾಹಿ ವರ್ಣೀಯರನ್ನು ಅತ್ಯಂತ ಹೀನದಾಸ್ಯಕ್ಕೆ ಗುರಿಮಾಡಿ ಅವರ ನಾಗರಿಕ ಹಕ್ಕುಗಳನ್ನೆಲ್ಲದಮನ ಮಾಡಿದ್ದನ್ನು ಕಂಡು ಮೊದಲ ಬಾರಿಗೆ ಪ್ರತಿಭಟಿಸಿ ನಿಲ್ಲುವ ಸಾಹಸ ಮಾಡಿದರು.ಅಸಂಖ್ಯಾತ ಬಡ ಕೂಲಿಗಾರರ ಸಮೂಹವನ್ನು ಸಂಘಟಿಸಿ, ಅಲ್ಲಿ ನೆಲೆಸಿದ್ದ ಇತರ ಬುದ್ಧಿ ಜೀವಿಗಳ ನೆರವನ್ನೂ ಪಡೆದ ನಿಶ್ಯಸ್ತ್ರ ಸಾಮೂಹಿಕ ಪ್ರತಿಭಟನಾಸಮಾರವೊಂದನ್ನು ಪ್ರಾರಂಭಿಸಿದರು. ಮಾನವನ ನೈತಿಕಶಕ್ತಿಗಳನ್ನು ಜಾಗೃತಗೊಳಿಸಿ ಆತ್ಮಗೌರವದ ನಿಷ್ಠೆಯನ್ನು ಉಜ್ವಲಗೊಳಿಸಿ ಸಾಮಾನ್ಯ ಜನತೆ ಪ್ರಬಲ ಸಶಸ್ತ್ರ ಸಾಮ್ರಾಜ್ಯ ಸರ್ಕಾರದ ಅನ್ಯಾಯ