ಪುಟ:Sankeerana vachanasamputa 10.pdf/೫೦೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಸಂಕೀರ್ಣ ವಚನಸಂಪುಟ : ಐದು ೭೬೩ ಅಯ್ಯ, ಇಂತು ನಿರಂಜನ ಮಹಾಲಿಂಗಾನುಭಾವಸೂತ್ರವ ಎರಡೆಂಬತ್ತೆಂಟುಕೋಟಿ ಹರಗುರು ವಾಕ್ಯಪ್ರಮಾಣವಚನಾನುಭಾವವ ಪ್ರಕಟಿಸಿ ಈ ಒಂದು ವಚನಾರ್ಥದಲ್ಲಿ ಅತಿಗೋಪ್ಯದಿಂದ ಅನಾದಿ ನಿಃಕಳಂಕ ನಿಶೂನ್ಯ ನಿರಂಜನ ನಿರಾವಯ ಶರಣಸೂತ್ರವಿಡಿದು ನಿರಾಯಾಸಂ ಆಯಾಸಂಗಳೇನು ತೋರದೆ ಈ ವಚನಾರ್ಥದ ಆದಿ-ಅಂತ್ಯವನರುಹಿಸಿಕೊಟ್ಟೆವು ನೋಡ. ಆ ವಿಚಾರವೆಂತೆಂದಡೆ: ಶ್ರೀ ಮದ್ಗುರು ಕಾರುಣ್ಯವೇದ್ಯನು, ವಿಭೂತಿ, ರುದ್ರಾಕ್ಷಧಾರಕನು, ಪಂಚಾಕ್ಷರೀ ಭಾಷಾಸಮೇತನು, ಲಿಂಗಾಂಗಸಂಬಂಧಿ, ನಿತ್ಯಲಿಂಗಾರ್ಚಕನು, ಅರ್ಪಿತದಲ್ಲಿ ಅವಧಾನಿ, ಪಾದೋದಕ-ಪ್ರಸಾದಗ್ರಾಹಕನು, ಗುರುಭಕ್ತಿ ಸಂಪನ್ನನು, ಏಕಲಿಂಗ ನಿಷ್ಕಾಪರನು, ಚರಲಿಂಗ ಲೋಲುಪ್ತನು, ಶರಣ ಸಂಗಮೆಶ್ವರನು, ತ್ರಿವಿಧಕ್ಕಾಯತನು, ತ್ರಿಕರಣಶುದ್ಧನು, ತ್ರಿವಿಧ ಲಿಂಗಾಂಗಸಂಬಂಧಿ, ಅನ್ಯದೈವದ ಸ್ಮರಣೆಯ ಹೊದ್ದ, ಭವಿಸಂಗವ ಮಾಡ, ಭವಿಪಾಕವ ಕೊಳ್ಳ, ಪರಸ್ತ್ರೀಯರ ಬೆರಸ, ಪರಧನವನೊಲ್ಲ, ಪರನಿಂದ್ಯವನಾಡ, ಅಮೃತವ ನುಡಿಯ, ಹಿಂಸೆಯ ಮಾಡ, ತಾಮಸಭಕ್ತರ ಸಂಗವವಾಡ, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನ ಮುಂತಾದವೆಲ್ಲವ ಸಮರ್ಪಿಸಿ ಪ್ರಸಾದ ಮುಂತಾಗಿ ಭೋಗಿಸುವ, ಜಂಗಮನಿಂದವ ಸೈರಿಸ, ಪ್ರಸಾದನಿಂದ್ಯವ ಕೇಳ, ಅನ್ಯರನಾಸೆಗೈಯ್ಯ, ಪಾತ್ರಾಪಾತ್ರವನರಿದೀವ, ಚತುರ್ವಿಧಪದವಿಯ ಹಾರೈಸ, ಅರಿಷಡ್ವರ್ಗಕ್ಕೆ ಅಳುಕ, ಕುಲಾದಿಮದಂಗಳ ಬಗೆಗೊಳ್ಳ, ದೈತಾದ್ವತವ ನುಡಿವನಲ್ಲ, ಸಂಕಲ್ಪ-ವಿಕಲ್ಪವ ಮಾಡುವನಲ್ಲ, ಕಾಲೋಚಿತವ ಬಲ್ಲ, ಕ್ರಮಯುಕ್ತವಾಗಿ ಷಟ್‌ಸ್ಥಲಭರಿತ, ಸರ್ವಾಂಗಲಿಂಗಿ, ದಾಸೋಹಂ ಸಂಪನ್ನ- ಇಂತೀ ಛಾಪನ್ನದಿರವ ಅಂತರಂಗದಲ್ಲಿ ಒಳಕೊಂಡು ಬಹಿರಂಗದಲ್ಲಿ ನಡೆದಂತೆ ನುಡಿದು, ನುಡಿದಂತೆ ನಡೆದು, ಸಬ್ಬಕ್ಕಿ-ಜ್ಞಾನ-ವೈರಾಗ್ಯ ಸಂಪನ್ನತ್ವದಿಂದ ಸಕಲಪ್ರಮಥಗಣಂಗಳಿಂದ ಕೀರ್ತಿಸಿಕೊಳ್ಳುತ್ತ, ಆ ಆದಿಪ್ರಮಥರ ಕೀರ್ತನೆ ವಿಚಾರವಂತೆಂದಡೆ: