ವಿಷಯಕ್ಕೆ ಹೋಗು

ಪುಟ:Shataka Samputa.pdf/೧೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

14

ಶತಕ ಸಂಪುಟ

ಕಾ- ನನದೊಳ್ ಕಾಮಂಗಳೊಳ್ ತಣ್ಣೆಳಲೊಳೆ ಬಿಸಿಲೊಳ್ ಜಾಗ್ರದೊಳ್ ಸ್ವಪ್ನದೊಳ್ ಮೂ- ಚರ್ಛ್ನೆಯೊಳ್ ದಾರಿದ್ರ್ಯದೊಳ್ ಸಂಪದದೊಳೆ ಸುಖದೊಳ್ ದುಃಖದೊಳ್ ದೇವ ನಿಮ್ಮಂ ನೆನೆಯುತ್ತಿರ್ಪಂತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೬೯ ||

ಭರದಿಂದಂ ಭೀತಿಯಿಂದಂ ಶರಣವಚನದಿಂದಾಸೆಯಿಂ ಭಾಷೆಯಿಂದ- ಚ್ಚರಿಯಿಂ ಡಂಭಿಂ ವೃಥಾಳಾಪದಿನಸವಸದಿಂ ಕಾಮದಿಂ ಕೋಪದಿಂ ಕೂ- ರ್ಪರ ದಾಕ್ಷಿಣ್ಯಂಗಳಿಂ ಖ್ಯಾತಿಯಿನನುದಿನವೆಲ್ಲಂದದಿಂ ದೇವ ನಿಮ್ಮಂ ಸ್ಮರಿಯಿಪ್ಪಂತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೭೦ ||

ಚದುರಿಂದಂ ವೇಷಮಂ ತೋರದೆ ನಿಜಗುಣಮಂ ಬೀರದತ್ಯುಷ್ಣಮಂ ಹೇ- ರದೆ ಡಂಭಿಂ ಸಾರದೆಂತುಂ ಶರಣವಚನಮಂ ಮೀರದತ್ತಿತ್ತಲುಂ ಜಾ- ರದೆ ಬೇರೋಂದಿಚ್ಛೆಯಿಂ ಕೀರದೆ ಪರವಶದಿಂ ತಾರದೀ ಭಕ್ತಿಯಂ ಮಾ- ರದೆ ಬಾಳ್ವಂತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೭೧ ||

ಇದನೊಲ್ವೆಂ ದೈನ್ಯಮಂ ಸೂಡದೆ ಪರವಧುವಂ ನೋಡದೇನೊಂದುಮಂ ಬೇ- ಡದೆಯಾರಂ ಮಿಥ್ಯೆಯಿಂ ಕಾಡದೆ ಪರಸುಖದೊಳ್ ಬಾಡದುದ್ರೇಕದೊಳ್ ಕೋ- ಡದೆ ಪಾಪಾಂಭೋಧಿಯೊಳ್ ಕೂಡದೆ ಚಪಳತೆಯಂ ನೀಡದತ್ಯಾಶೆಯಂ ಮಾ- ಡದೆ ಬಾಳ್ವಂತಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೭೨ || ಸತಿ ಕಾರುಣ್ಯಂ ಕುಮಾರಂ ಮತಿ ಸಖನುರು ಸತ್ಯಂ ಪ್ರಧಾನಂ ವಿವೇಕಂ ಸ್ತುತಿ ಭಂಡಾರಂ ಸುಧರ್ಮಂ ಕರಿತುರಗರಥಾಖ್ಯಂ ನಿರಾಶಾ-ಸ್ವದೇಶಂ