ವಿಷಯಕ್ಕೆ ಹೋಗು

ಪುಟ:Shataka Samputa.pdf/೧೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

17

ಗುರುವೇ ನೀನಿತ್ತು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೮೪ ||

ಅಪರಿಚ್ಛಿನ್ನಂ ಸ್ವತಂತ್ರಂ ನಿರವಧಿಯಮಳಂ ಶಂಕರಂ ನಿತ್ಯನಾನಂ- ದಪದಂ ಶಾಂತಾರ್ಕಕೋಟಿಪ್ರಭನಜರನಚಿಂತ್ಯಂ ಪರಂಧಾಮರೂಪಂ ವಿಪುಳಜ್ಞಾನಾಬ್ಧಿ ಸತ್ಯಂ ನಿರುಪಮನಿಧಿ ನೀನೆಂಬಭಿಜ್ಞಾನಮಂ ನೀಂ ಕೃಪೆಯಂ ಮಾಡುತ್ತೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೮೫ ||

ಸ್ಥೂಲಂ ಸೂಕ್ಷ್ಮಂ ಸುಸೂಕ್ಷ್ಮಂ ಸುಲಭಸುಲಭಂ ಪುಣ್ಯಪಾಪಪ್ರದೂರಂ ನೀಲಗ್ರೀವಂ ಚಿದಾತ್ಮಂ ಭವನಭವನನೂನಾದ್ಯನಾದ್ಯಂತಶೂನ್ಯಂ ಕಾಲಘ್ನಂ ಕಾಲರೂಪಂ ನತನಕರವಿಪಜ್ಜಾಲವಿಚ್ಛೇದಲೀಲಾ ಲೋಲಂ ನೀಂ ನೀನೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೮೬ ||

ಶಿವ ಸರ್ವಾಧಾರ ಗಂಗಾಧರ ಪುರಹರ ಸರ್ವಜ್ಞ ಸರ್ವೇಶ ಗೌರೀ- ಧವ ನೀಲಗ್ರೀವ ಕಾಲಾಂತಕ ಪಶುಪತಿ ಫಾಲಾಕ್ಷ ಭೋಗೀಂದ್ರಭೂಷಾ- ಭವ ರುದ್ರೇಶಾನ ಭರ್ಗ ಪ್ರಮಥನಿಧಿ ಮಹಾದೇವ ಮಾರಾರಿ ನಿತ್ಯೋ- ತ್ಸವ ಸತ್ಯಪ್ರೇಮಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೮೭ ||

ಗಿರಿಶ ಶ್ರೀಕಂಠ ದಕ್ಷಾಧ್ವರಹರ ವೃಷಭಾರೂಢ ಕಾಪಾಲಿಯಂಧಾ- ಸುರವೈರಿ ವ್ಯೋಮಕೇಶ ಕ್ರತುಕುಲನೃಪತಿ ಸ್ಥಾಣು ಭೂತೇಶ ಪಂಚಾ- ವರಣಪ್ರತ್ಯಕ್ಷ ಪಂಚಾನನ ಮೃಡ ಗಜಚರ್ಮಾಂಬರ ಶ್ರೇಷ್ಠ ವಿಶ್ವೋ- ದರ ಸದ್ಯೋಜಾತ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೮೮ ||

ಹರ ಭೀಮ ತ್ರ್ಯಕ್ಷ ಭಕ್ತವ್ರಜಹೃದಯ ಪಿನಾಕಿ ತ್ರಿಶೂಲಿ ತ್ರಿಕಾಲಾ- ಕ್ಷರ ನಿರ್ದೇಹಾಭವಾ ಧೂರ್ಜಟಿ ಜಟಿಲ ಶಿರೋಮಾಲಿ ಶಂಭು ಪ್ರಪಂಚೋ- ತ್ತರ ಪಂಚಬ್ರಹ್ಮ ಪಂಚಾಧಿಕ ಹಿಮಕರಚೂಡಾಮಣೀ ವೀರಭದ್ರೇ- ಶ್ವರ ಕಾಲಾತೀತ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೮೯ ||

ವರಕಾರುಣ್ಯಾಬ್ಧಿ ಷಡ್ದರ್ಶನಹಿತ ಪರಮಸ್ವಾಮಿ ಸರ್ವಜ್ಞ೧ ಪಂಚಾ-