ವಿಷಯಕ್ಕೆ ಹೋಗು

ಪುಟ:Shataka Samputa.pdf/೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

2

ಶತಕ ಸಂಪುಟ

ಕರಣಕ್ಕಾಳಾಗಿ ಹಾಳಾಗುತೆ ಬರುದೊರೆವೋದೆಂ ಬಳಲ್ದೆಂ ಬಿಗುರ್ತೆಂ ಮರುಳಾದೆಂ ದೇವ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೫ ||

ಸ್ತ್ರೀಮಾತ್ರಂ ನೇತ್ರದತ್ತಲ್ ಸುಳಿದೊಡೆ ಮನವಿರ್ಭಾಗಮಾಗುತ್ತೆ ತಾಪ1- ಸ್ತೋಮಂ ಕೈಮೀರೆ ಲಜ್ಜಾರಸಮುಡುಗಿ ವಿವೇಕಂ ಕಳಲ್ದೋಡಿ ರಾಗಂ ಕೈಮಿಕ್ಕಾನಾವನೇನೆಂದರೆಯದ ತೆರನಂ ಮಾಡುತಿರ್ದಪ್ಪುದಿಂತೀ ಕಾಮಂ ಕಾಮಾರಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದನ್ನಂ || ೬ ||

ಏಪೊಳ್ತುಂ ಗಾತ್ರಮಂ ಶೋಷಿಸುತೆ ಕರಣಮಂ ಕಂದಿಸುತ್ತುಂ ನಿರರ್ಥಂ ತಾಪವ್ರಾತಕ್ಕೆ ಪಕ್ಕಾಗಿಸುತಮಳಗುಣಸ್ತೋಮಮಂ ಖಂಡಿಸುತ್ತುಂ ಪಾಪಪ್ರಾರಂಭಕರ್ತೃತ್ವಮನೆನಗೆನಿಸಂ ಮಾಡುತಿರ್ದಪ್ಪುದಿಂತೀ ಕೋಪಂ ಶಾಂತಾತ್ಮ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೭ ||

ಧನಮಂ ಸ್ತ್ರೀ ಪುತ್ರರಂ ಕೆಮ್ಮನೆ ಕಿಡುವ ಗೃಹ ಕ್ಷೇತ್ರಮಂ ಮಿತ್ರರಂ ವ- ಸ್ತ್ರನಿಕಾಯಾಕಲ್ಪಮಂ ಮುಂತೆನಗೆನುತೆ ಕರಂ ಕಾಂಕ್ಷೆಯಿಂ ಕೂರ್ಮೆಯಿಂದೆ- ಳ್ಳನಿತುಂ ಪುಣ್ಯಕ್ಕೆ ಮಾಡಲ್ ಕುಡದೆ ಕಿಡಿಸುವೀ ಲೋಭಮಂ ದಾನಿ ನೀಂ ಛೇ- ದನೆಯಂ ಮಾಡುತ್ತೇ ಪಂಪಾಪುರದರಸ ವಿರೂಪಾಕ್ಷ ರಕ್ಕಿಪ್ಪುದೆನ್ನಂ || ೮ ||

ದೇಹೋಹಂ ಎಂದು ಮಕ್ಕ೨ಳ್ ಮನೆ೨ ಧನವಳಿಯಲ್ ಕಂದಿಸುತ್ತುರ್ಬುವಾಶಾ- ವ್ಯೂಹಕ್ಕಿಂಬಾಗಿಸುತ್ತುಂ ನೆನೆದು ಮರುಗಿಸುತ್ತುಂ ಮುಸುಂಕಿರ್ದ ಮಿಥ್ಯಾ- ಸ್ನೇಹಾರಂಭಾನುಕೂಲಂ ನುಡಿಗೆಡೆಗುಡದಿರ್ದಪ್ಪುದೊತ್ತಂಬದಿಂದೀ ಮೋಹಂ ಮೋಹಾರಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೯ ||

ಅದನೇನೆಂಬೆಂ ಗುಣವ್ರಾತಮನೆ ಪರೆಯುತುಂ ವಿದ್ಯೆಯಂ ಖಂಡಿಸುತ್ತುಂ ಕದಡುತ್ತುಂ ಚಿತ್ತಮಂ ಬುದ್ಧಿಯನುರದರೊಯಟ್ಟುತ್ತೆ ಕಾಯ್ದಪ್ಪುದೆನ್ನೀ ಮದಮಾತಂಗಂ ಮಹಾರೋಹಕ ನಿಜಚರಣಸ್ತಂಭದೊಳ್ ಕಟ್ಟಿ ಸೈತಿ- ಟ್ಟು ದಯಾಂಭೋರಾಶಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೧೦ ||