ವಿಷಯಕ್ಕೆ ಹೋಗು

ಪುಟ:Shataka Samputa.pdf/೨೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

೨೬

ಜಿಸುವೀಶಪ್ರಭುವೀತನೀತನೆ ವಿರೂಪಾಕ್ಷಂ ಲಲಾಟೇಕ್ಷಣಂ* || ೨೮ ||

ಜಿತಪುಷ್ಪಾಯುಧನೀತನೀತನೆ ಸರೋಜಾತಾಕ್ಷ ವಾಣೀಶವ- ದಿತ ಸರ್ವೇಶ್ವರನೀತನೀತನೆ ಸಹಸ್ರಾಕ್ಷಪ್ರಮುಖ್ಯಾಮರಾ- ರ್ಚಿತಪಾದಾಂಬುಜನೀತನೀತನೆ ಕಪಾಳಾಭೀಳಮಾಳಾವಿಮಂ- ಡಿತವಕ್ಷಃಸ್ಥಳನೀತನೀತನೆ ವಿರೂಪಾಕ್ಷಂ ಲಲಾಟೇಕ್ಷಣಂ || ೨೯ ||

ನತದೇವಾಧಿಪನೀತನೀತನೆ ವಿರಿಂಚೋಪೇಂದ್ರಮಧ್ಯಸ್ಥಿತೋ- ದ್ಧತಲಿಂಗೋದ್ಭವನೀತನೀತನೆ ಸಹಸ್ರಾಂಶುಪ್ರಮುಖ್ಯರ್ಕಳು- ನ್ನತತೇಜೋನಿಧಿಯೀತನೀತನೆ ಪರಂಜ್ಯೋತಿಸ್ವರೂಪಪ್ರಕಾ- ಶಿತಪುಣ್ಯೋದಯನೀತನೀತನೆ ವಿರೂಪಾಕ್ಷಂ ಲಲಾಟೇಕ್ಷಣಂ || ೩೦ ||

ತ್ರಿಜಗತ್ಪುಜಿತನೀತನೀತನೆ ಸುರರ್ ಕೊಂಡಾಡೆ ದಿವ್ಯಾಸ್ತ್ರಮಂ ವಿಜಯಂಗಿತ್ತವನೀತನೀತನೆ ಮನಂ ಮುಟ್ಟಿರ್ಪ ನಿಷ್ಕಾಮಭ ಕ್ತಜನಕ್ಕಾಶ್ರಯನೀತನೀತನೆ ಲಸತ್ ಸಾಮಥರ್ಯ್ದಿಂದಂ ಶಿರೋ- ವ್ರಜಮಂ ತಾಳ್ದವನೀತನೀತನೆ ವಿರೂಪಾಕ್ಷಂ ಲಲಾಟೇಕ್ಷಣಂ || ೩೧ ||

ವೇದಕ್ಕುನ್ನತನೀತನೀತನೆ ಹರಿಬ್ರಹ್ಮಾದಿಗಳ್ ಮಾಳ್ಪ ಸಂ- ವಾದಕ್ಕಗ್ಗಳನೀತನೀತನೆ ಶರಣ್ಬೊಕ್ಕಿರ್ದ ಭಕ್ತಾಳಿಯಂ ಕಾದುಂ ರಕ್ಷಿಪನೀತನೀತನೆ ಗಣವ್ರಾತಕ್ಕೆ ತಾಯ್ತಂದೆ ತಾ- ನಾದಾ ಶಂಕರನೀತನೀತನೆ ವಿರೂಪಾಕ್ಷಂ ಲಲಾಟೇಕ್ಷಣಂ || ೩೨ ||

ಶ್ರೀ ಗಂಗಾಧರನಂ ಶಶಾಂಕಶಿಖಿಮಾರ್ತಂಡತ್ರಿಣೇತ್ರಾಂಕನಂ