ವಿಷಯಕ್ಕೆ ಹೋಗು

ಪುಟ:Shataka Samputa.pdf/೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

3

ಪರರೈಶ್ವರ್ಯಕ್ಕಸೂಯಂಗೊಳುತೆ ಪರರ ಬಲ್ಪಿಂಗೆ ಸಂತಾಪಿಸುತ್ತುಂ ಪರರಿಂದಂ ಮಿಕ್ಕು ಬಾಳಲ್ ಬಯಸಿ ಕುದಿದು ಬೇಳಾಗಿ ಬೆಂಬೀಳುತಿರ್ದುಂ ಪರಚಿಂತಾಕ್ಷೋಭೆಯಿಂ ಮತ್ಸರದೊಡನೆ ಕರಂ ಗಾಸಿಯಾದಪ್ಪೆನೀ ಮ- ತ್ಸರಮಂ ತರ್ಗೊತ್ತಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೧೧ ||

ಮನವೆನ್ನಂ ದುರ್ವಿಕಾರಕ್ಕೆಳೆದಪುದು ಮನಂ ಮಾನಮಂ ನುರ್ಗಿದತ್ತೀ ಮನವಾಶಾವಹ್ನಿಯೊಳ್ ನೂಂಕಿದಪುದು ಮನವೀ ಮಾಯೆಯಂ ಬಿಟ್ಟು ನಿಮ್ಮಂ ನೆನೆಯಲ್ ತಾನೀಯದಯ್ಯೋ ಶಿವನೆ ಭವನೆ ಕಾರುಣ್ಯವಾರಾಶಿಯೆನ್ನೀ ಮನಮಂ ಸಯ್ತಿಟ್ಟು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೧೨ ||

ಪ್ರತ್ಯಕ್ಷಂ ಸತ್ತು ಹೋಗುತ್ತಿದೆ ನರನಿಕರಂ ೧ತಾನಿದಂ೧ ಕಂಡು ಕಂಡುಂ ನಿತ್ಯತ್ವಂಬೆತ್ತ ಪಾಂಗಿಂ ಪಳಿವ ಮುಳಿವ ಕಾಮಿಪ್ಪ ಕೋಪಿಪ್ಪ ಲೋಭಿ- ಪ್ಪತ್ಯಂತಂ ಗರ್ವಿಪೆನ್ನೀ ಮನಕೆ ಪರಮ ವೈರಾಗ್ಯಮಂ ಕೊಟ್ಟು ಸತ್ಯಂ ಸತ್ಯಂ ಸತ್ಯಾತ್ಮ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೧೩ ||

ಇನಿತುಂ ವೈರಾಗ್ಯದತ್ತಲ್ ನೆನೆಯದೆ ಮದದತ್ತಲ್ ಮಹಾಮೋಹದತ್ತಲ್ ಧನದತ್ತಲ್ ಧಾನ್ಯದತ್ತಲ್ ಸತಿಸುತಪಿತರತ್ತಲ್ ಸದಾ ಲೋಭದತ್ತಲ್ ನೆನೆಯುತ್ತಿರ್ದಪ್ಪುದೆನ್ನೀ ಮನವಿದನೆಡೆಗೊಂಡಳ್ಕರೆಂ ದೇವ ನೀವಿಂ- ತೆನಿತುಂ ತೀವಿರ್ದು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೧೪ ||

ಸುವಿಚಾರಕ್ಕೊರ್ಮೆಯುಂ ೨ಸೇರದು೨ ನಡೆಯಿಪುದತ್ಯಾಗ್ರಹವ್ಯಾಪ್ತಿಯಿಂ ತಾ- ನವಿಚಾರಕ್ಕೆಂದೊಡೆಂಟಂ ನಿಮಿರ್ವುದು ಬಯಲಂ ಭಾವಿಸುತ್ತಿರ್ಪುದಾತ್ಮೋ- ದ್ಭವಮೂಲಚ್ಛೇದನೋಪಾಯವನೆಣಿಸದು ಮದ್ಬುದ್ಧಿಯೀ ಬುದ್ಧಿಯಂ ಶಂ- ಭುವೆ ಸಂತಂ ಮಾಡಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೧೫ ||

ಇನಿತುಂ ತಾನಲ್ಲದಾರಂ ಬಗೆಯದು ಮದಮಂ ಗರ್ವಮಂ ಕೂಡಿಕೊಂಡಿ- ರ್ದೆನಿತುಂ ಮುಂಗಾಣದತ್ಯುದ್ಧತತರಮುಖವಾಗಿರ್ಪುದೋರಂತೆ ವಿದ್ವ-