7
ಜಲಮಂ ಪೊರ್ದಿರ್ಪ ಶೈವಾಲದ ತೆರದೆ ಕರಂ ದೀಪಿಕಾಚ್ಛಾಯೆಯೆಂತು- ಜ್ಜ್ವಲವಾಂತಾ ಚಂದ್ರಲಕ್ಷಂ ಮುಕುರದೊಳಗೆ ತೋರ್ಪಾ ಪ್ರತಿಚ್ಛಾಯೆಯೆಂತಂ- ತಲೆಯುತ್ತುಂ ಪತ್ತಿ ಬೆನ್ನಂ ಬಿಡದಿದೆ ಘನಸಂಸಾರವೀ ಮಾಯೆಯಂ ನಿ- ರ್ಮಲ ನೀನೇ ತೀರ್ಚಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ ||೩೩||
ನೆಳಲೊಳ್ ಪೋರ್ವಂತಿರಾಕಾಶಮನವಯವದಿಂದೀಸುವಂತುರ್ವಿಯಂ ತಾಂ ತೊಳೆವಂತಭ್ರಾಳಿಯಂ ಕಂಡರಿಸುವ ತೆರದಿಂ ಧೂಮಮಂ ಸೀಳ್ವ ಪಾಂಗಿಂ ಬಳಲುತ್ತಿರ್ದಪ್ಪೆನೀ ಮಾಯೆಯ ಮನೆಯ ದುವಾಳಿಂದೆ ನಿರ್ಮಾಯ ನಿತ್ಯೋ- ಜ್ಜ್ವಳ೧ ನಿಸ್ತ್ರೈಗುಣ್ಯ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೩೪ ||
ಮದದಿಂದಂ ಪೊಳ್ತು ಪೋಗುತ್ತಿದೆ ಶಿವಶಿವ ಮಾತ್ಸರ್ಯದಿಂ ಪೊಳ್ತು ಪೋಗು-
ತ್ತಿದೆ ಆಹಾ ಪೊಳ್ತು ಪೋಗುತ್ತಿದೆ ಮುಸುಕಿದ ತತ್ಕಾಮದಿಂ ಪೊಳ್ತು ಪೋಗು-
ತ್ತಿದೆ ಲೋಭವ್ಯಾಪ್ತಿಯಿಂ ಕೋಪದಿನರಿಯದೆ ದುರ್ಮೋಹದಿಂ ಪೊಳ್ತುಪೋಗು-
ತ್ತಿದೆ ತಂದೇ ತಂದೆ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೩೫ ||
ಎರೆದೇವೆಂ ಪೊರ್ದಿಯೇವೆಂ ನಿರುತದೆ ನೆನದೇವೆಂ ಮನಂ ಮುಟ್ಟಿಯೇವೆಂ ಕರೆದೇವೆಂ ಕೂರ್ತುಮೇವೆಂ ಬಿಡದತಿಭರದಿಂ ನಂಬಿಯೇವೆಂ ಶಿವಾ ಮದ್ ಗುರುವೆ ಇನ್ನೇವೆನೇವೆಂ ನಿಜಕರುಣವಣಂ ಪೊರ್ದದಸ್ಪೃಶ್ಯನಂ ಶಂ- ಕರ ನೀಂ ಕೈಕೊಂಡು ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೩೬ ||
ತವೆ ರೋಗಂ ಪತ್ತಿ ಗಾತ್ರಂ ಧರಣಿಗೆ ಕೆಡೆದಿರ್ಪಲ್ಲಿಯುಗ್ರದ್ವಿಪಂ ಬಂ- ದವಿಚಾರಂ ಕಾಯ್ದು ಬಲ್ಪಿಂದೊದೆಯೆ ಮುದುಡಿ ಬೀಳ್ವಲ್ಲಿ ಕಾಳ್ಕಿಚ್ಚು ಸುತ್ತಂ ಕವಿತಂದಾ ಪೊಳ್ತು ನಾಲ್ಕುಂ ದೆಸೆಗೆ ಪರಿದು ಬೇವದೆ ನೀವಲ್ಲದಾರ್ ಕಾ- ವವರಿಂ ಕಾಮಾರಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೩೭ ||
ಎಡೆಗೊಂಡೀ ಮುಪ್ಪುದೋರಲ್ ನೆರೆ ನೆಗೆದು ಸಿರಂದೂಗಿ ಬೆನ್ ಬಾಗಿಯೆಂತ- ಕ್ಕಡಿಯೆತ್ತಲ್ಕಾರದೆತ್ತಂ ದಡದಡಿಸಿ ಕರಂ ಜೋಲ್ದು ಕೋಲೂರಿ ನಿಂದುಂ