ವಿಷಯಕ್ಕೆ ಹೋಗು

ಪುಟ:Shataka Samputa.pdf/೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

8

ಶತಕ ಸಂಪುಟ

ನಡುಗುತ್ತುಂ ಕೆಮ್ಮಿ ಕೊಮ್ಮುತ್ತೊಡಲನೊಲೆಯುತುಂ ಮುಗ್ಗಿ ಬಳ್ದುಂ ನಿತಾಂತಂ ಕೆಡೆವಲ್ಲಿಂ ಮುನ್ನ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೩೮ || ತೆರಪಿಲ್ಲಂ ಸಾವು ಭೋಂಕೆಂದಡಸಿದ ಪದದೊಳ್ ಭಕ್ತಿಸಂಧಾನವೆಲ್ಲಿ- ತ್ತರಿವೆಲ್ಲಿತ್ತರ್ಥವೆಲ್ಲಿತ್ತಮಳಗುಣವದೆಲ್ಲಿತ್ತೋ ಸದ್ಧರ್ಮವೆಲ್ಲಿ- ತ್ತೊರಪೆಲ್ಲಿತ್ತೋಜೆಯೆಲ್ಲಿತ್ತತುಳಬಲಮದೆಲ್ಲಿತ್ತದಕ್ಕಂಜಿ ನಿಮ್ಮಂ ಮರೋವೊಕ್ಕೆಂ ದೇವ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೩೯ ||

ಕಿವಿಕಣ್ಗಳ್ ಕೆತ್ತು ಬಾಯೊರ್ಗುಡಿಸಿ ಕರೆಯೆ ಪೆರ್ಗೂರಿಡುತ್ತೆಯೆ ಬಂದಿ- ರ್ದವರಂಜಲ್ ಶ್ವಾಸಮೇರುತ್ತಿಳಿಯುತುಮಿರೆಯಂತಲ್ಲಿ ಕೈ ಕಾಲ್ಗಳೊಳ್ ಜೀ- ವವನಂಟಂಟೆಲ್ಲಿಯುಂ ಕಾಣದೆಯಕಟಕಟಯ್ಯೋ ಗಡಾ ಸತ್ತನೆಂಬೀ ಪವಣಿಂದಂ ಮುನ್ನ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೪೦ ||

ದೇವಾ ನಾನೇವೆನೆಂದೆಂದಬಲೆಯಳುತೆ ತಾಂ ಪೋಗೆ ಪಿಂದಂ ಜನಂಗಳ್ ಸಾವೀತಂಗಾಯ್ತೆನುತುಂ ಮರುಗಿ ಬರೆ ತನುಜಾಳಿಯುಂ ಬಂಧುವರ್ಗಂ ತಾವೆತ್ತಂ ಮತ್ತೆ ಶೋಕಂ ಮುಸುಕಿ ನಡೆಯೆ ತತ್ಕಷ್ಟದೊಳ್ ಕಾಷ್ಠರೂಪಿ ಬೇವಲ್ಲಿಂ ಮುನ್ನ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೪೧ ||

ಜನನೀಗರ್ಭಾಂಡದಿಂ ಬರ್ಪತಿವಿಷಮತರಕ್ಲೇಶಮಂ ಬಾಲ್ಯದೊಳ್ ಮಾ- ಳ್ಪ ನಿಷೇಧವ್ರಾತಮಂ ಯೌವನವಿಕಳತೆಯಂ ಮುಪ್ಪಿನಾ ಹೇಯಮಂ ಸಾ- ವನಿರೋಧಸ್ತೋಮಮಂ ಕಂಡಲಸಿದೆನದಿರ್ದೆಂ ಪೇಸಿದೆಂ ನೊಂದೆನೋರಂ ತನುಗೆಟ್ಟೆಂ ದೇವ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೪೨ ||

೧ಆನೆಂತೆಂತಕ್ಕೆ೧ ಬಂದೆಂ ಮನುಜಭವದೊಳೆಂತಕ್ಕನೂನಾಂಗಸಂಗಂ ತಾನಾಯ್ತೆಂತಕ್ಕೆ ಕೂಡಿತ್ತಘಟಿತಘಟಿತಂ ಸತ್ಕುಲಂ ಮತ್ತಮೆಂತ- ಕ್ಕಾ ನಿಮ್ಮಂಘ್ರಿದ್ವಯಕ್ಕಾನೆರಗಿದೆನಿನಿತಾಯಾಸದಿಂ ಬಂದೆನಯ್ ಸ- ತ್ಯಾನಂದಜ್ಯೋತಿ ಪಂಪಾಪುರದರಸ ವಿರೂಪಾಕ್ಷ ರಕ್ಷಿಪ್ಪುದೆನ್ನಂ || ೪೩ || ಶರಣಾರ್ ನೀಂ ಕಾವರಾರ್ ನೀಂ ಗತಿ-ಮತಿ-ಪತಿಯಾರ್ ನೀಂ ಕೃಪಾಂಬೋಧಿಯಾರ್ ನೀಂ ಗುರುವಾರ್ ನೀಂ ಗೋತ್ರವಾರ್ ನೀಂ ಜನನಿ-ಜನಕರಾರ್ ನೀಂ