ವಿಷಯಕ್ಕೆ ಹೋಗು

ಪುಟ:Uttara Karnataka Janapada Kathegalu.pdf/೧೦೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

102

ಜನಪದ ಕಥೆಗಳು

ಸವರು," ``ಅನ್ನಕ್ಕೆ ಮೊಸರು ಕಲೆಸು ಎನ್ನುತ್ತ ಅಜ್ಜಿಯನ್ನು ಜಗ್ಗಾಡಿ ಎಬ್ಬಿಸಿದವು. ಆಕೆಯ ಸೆರಗು ಒಂದು ಹಿಡಿದಿದೆ, ಕೈ ಮತ್ತೊಂದು ಹಿಡಿದಿದೆ. ಹಿಂದೆ ನೂಕುವುದು ಒಂದು, ಮುಂದೆ ಎಳೆಯುವುದು ಬೇರೊಂದು. ಎಲ್ಲ ಕೂಡಿ ಅಜ್ಜಿಯನ್ನು ಅಡಿಗೆ ಮನೆಗೆ ಕರೆದೊಯ್ದವು.

``ನಂಗೂ ಅಜ್ಜಿ, ಉಪ್ಪಿನಕಾಯಿ ಎಂದು ತೊದಲುತ್ತ ಇನ್ನೊಂದು ಕೂಸು ತಪ್ಪುಹೆಜ್ಜೆ ಹಾಕುತ್ತ ಅಜ್ಜಿಯ ಬಳಿಗೆ ಬಂದಿತು. ``ಇದಾವ ಹೊಸದನಿ ಎಂದು ಅಜ್ಜಿ ನೋಡಿದರೆ, ಕಡಲೆ ಹಿಟ್ಟಿನ ಗೊಂಬೆ, ಜೀವತಳೆದು ಎದ್ದು ಬಂದಿದೆ ! ಆಶ್ಚರ್ಯವೆನಿಸಿತು ಅಜ್ಜಿಗೆ.

``ಗೊಂಬೆಯ ಹೆಣವನ್ನು ಮುಂದಿರಿಸಿಕೊಂಡು ಅತ್ತು ಕಣ್ಣೀರು ಸುರಿದು ಮನಸ್ಸು ಹಗುರಮಾಡಿಕೊಳ್ಳಬೇಕೆಂದರೆ ಹಿಟ್ಟಿನ ಗೊಂಬೆಯೂ ಜೀವಂತವಾಗಬೇಕೆ? ಅಳುವುದು ನನ್ನ ದೈವದಲ್ಲಿಲ್ಲ ಎಂದುಕೊಂಡಳು.