ವಿಷಯಕ್ಕೆ ಹೋಗು

ಪುಟ:Uttara Karnataka Janapada Kathegalu.pdf/೧೧೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

112

ಜನಪದ ಕಥೆಗಳು


``ನಾನು ಹುಚ್ಚಿ ಸತ್ತವರನ್ನು ನೆನೆಯಲಿಲ್ಲ. ಬಿದ್ದು ಹೋದ ಹಲ್ಲುಗಳನ್ನು ನೆನಪಿಸಿಕೊಂಡು ಹಾಗೆ ನುಡಿದೆ - ಏನು ಹೋದೆಯೋ ನನ್ನ ರುಚಿಗಾರ - ಸವಿಗಾರ ಎಂದು. ಮುದಿಕೆ ಅರ್ಥವನ್ನು ಸ್ಪಷ್ಟಗೊಳಿಸಿದಳು.

``ಅಹುದೇ ಅಜ್ಜಿ ? ನಾನು ಬೇರೆಯೇ ತಿಳಿದಿದ್ದೆನಲ್ಲ ! ಎಂದು ನೆರೆಯವಳು ವಿಷಯವನ್ನು ಪೂರ್ತಿಗೊಳಿಸಿದಳು.