ವಿಷಯಕ್ಕೆ ಹೋಗು

ಪುಟ:Uttara Karnataka Janapada Kathegalu.pdf/೧೬೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ನೀತಿ ಕಥೆಗಳು

159

ಹಾಗೆ ಬಿಗಿಹಿಡಿಯುವಾಗ, ಹುಣ್ಣು ಬಿದ್ದಿದ್ದರಿಂದ ಅಸಹ್ಯವಾದ ನೋವುಂಟಾಗುವದು. ಅದೆಷ್ಟು ರಭಸದಿಂದ ಚಂಗನೆ ನೆಗೆದು ಬಂದವರ ಮೈಮೇಲೆ ಹೋಗುವದೋ, ಅಷ್ಟೇ ವೇದನೆಯಿಂದ ``ಆಂ„„„ ಎಂದು ನರಳಿ ಹಿಂದಿರುಗಿ ಬರತೊಡಗಿತು.

ಗುದದ್ವಾರದಲ್ಲಿ ಬಿದ್ದ ಹುಣ್ಣಿನ ನೋವಿಗಂಜಿ ಅದು, ರಭಸದಿಂದ ಬೊಗಳಿ ಬಂದವರ ಮೇಲೆ ಹೋಗುವುದನ್ನು ಒಮ್ಮೆಲೇ ಕಡಿಮೆ ಮಾಡಿತು. ಅಲ್ಲಿಯವರಿಗೆ ಆ ಹುಣ್ಣು ಮಾಯಿಸುವ ಉಪಾಯವನ್ನೇ ಮಾಡಲಿಲ್ಲ ಗೌಡರು.

``ಕಳೆನೋಡಿ ಕೇರು ಹಾಕಿದರೆ ಹಾದಿಗೆ ಬಾರದವರಾರು ಎಂದು ಗೌಡರು ಮೇಲಿಂದ ಮೇಲೆ ಮಾತಿನಲ್ಲಿ ನುಡಿಯತೊಡಗಿದರು. ಕೇಳಿದವರಿಗೆ ಅದು ಸತ್ಯವೂ ಅನಿಸಿತು.