ಪ್ರಾಣಿ ಕಥೆಗಳು
169
ಹೇಳಿತು. ಅದನ್ನು ಕೇಳಿ, ನಡೆದಂಥ ಲಗ್ನಬಿಡಿಸಿ ನಾಗೇಂದ್ರನಿಗೆ ಮಗಳನ್ನು ಕೊಡಬೇಕು ಎಂದು ಜನರು ಅಭಿಪ್ರಾಯ ಪಟ್ಟರು. ಅದರಂತೆ ಆ ಹೆಣ್ಣುಮಗಳನ್ನು ನಾಗೇಂದ್ರನ ಬೆನ್ನುಹಚ್ಚಿ ಬಿಟ್ಟರು.
ಭಾರಂಗ ಭಾವಿಯಲ್ಲಿ ಒಂದು ವಿಶಾಲವಾದ ಮನೆಯಿತ್ತು. ನಾಗೇಂದ್ರನು ಅವಳಿಗೆ ಯಾವರೀತಿಯಿಂದಲೂ ಕೊರತೆ ಮಾಡಲಿಲ್ಲ. ವರುಷ ತುಂಬುವಷ್ಟರಲ್ಲಿ ಅವಳಿಗೊಂದು ಗಂಡುಮಗು ಹುಟ್ಟಿತು. ನಾಗೇಂದ್ರ ಅವಳಿಗೆ ಹೇಳಿದನು - ``ಹಾಲನ್ನು ಸಳಮಳನೆ ಕುದಿಸಿ ಕಬ್ಬಿಣ ಬುಟ್ಟಿಗೆ ಹೊಯ್ಯು. ನಾನು ಮೇಯಲಿಕ್ಕೆ ಹೋಗುತ್ತೇನೆ. ಹೊರಗಿನಿಂದ ನಾನು ಬಂದ ಕೂಡಲೇ ಬಾವಿಯ ಹತ್ತಿರ ಗಂಟೆ ಘಣ್ ಅನ್ನುತ್ತದೆ. ಆಗ ಹಾಲು ತಂದು ಹೊರಗಿಟ್ಟು ತಟ್ಟೆ ಮುಚ್ಚಿಬಿಡು."
ಈ ರೀತಿಯಾಗಿ ಆಕೆ ನಾಗೇಂದ್ರನ ಸೇವೆ ಮಾಡುತ್ತ ಇದ್ದಳು. ಆಕೆಯ ತಮ್ಮನೊಬ್ಬನು ಚಂಡು ತಕ್ಕೊಂಡು ಹೊರಗೆ ಆಡಲಿಕ್ಕೆ ಹೋದಾಗ ಆ ಚೆಂಡು ಹಿರಿಯ ಹೆಣ್ಣುಮಗಳ ಕೊಡಕ್ಕೆ ಬಡಿದು ಕೊಡ ಒಡೆದು ಹೋಯಿತು. ಹೀಗೆ ಮಾಡುವೆಯೆಂದೇ ನಿಮ್ಮಕ್ಕನನ್ನು ನಾಗೇಂದ್ರನು ಒಯ್ದಿದ್ದಾನೆ - ಎಂದು ಆಕೆ ಹಂಗಿಸಿದಳು. ಹುಡುಗನು ಮನೆಗೆ ಬಂದು -
``ಅವ್ವಾ, ಅವ್ವಾ, ನಮ್ಮಕ್ಕನನ್ನು ನಾಗೇಂದ್ರ ಒಯ್ದಿದ್ದಾನಂತೆ. ನಮ್ಮಕ್ಕನನ್ನು ನೋಡಲಿಕ್ಕೆ ನಾನು ಹೋಗಲೇಬೇಕು ಎಂದನು ತಾಯಿಗೆ.
``ನೀನೊಬ್ಬನೇ ಮಗ ನಮಗೆ. ನೀನೂ ಒಬ್ಬ ಹೋಗಿಬಿಟ್ಟರೆ ಹೇಗಪ್ಪ" ಎಂದು ತಾಯಿ ಪರಿಪರಿಯಿಂದ ಬೇಡಿಕೊಂಡರೂ ಅವನು ಹೋಗಿಯೇಬಿಟ್ಟನು.
ಭಾರಂಗ ಬಾವಿಗೆ ಹೋದನು. ಗಂಟೆ ಗಣ್ ಅಂದಿತು. ಹಾಲನ್ನು ಕಬ್ಬಿಣ ಬುಟ್ಟಿಯಲ್ಲಿಟ್ಟು ಓಡಿಹೋಗಿ ತಟ್ಟಿಮುಚ್ಚಿಕೊಂಡಳು. ``ಅಕ್ಕಾ ! ಅಕ್ಕಾ ! ಎಂದು ಹುಡುಗನು ಕೂಗಹತ್ತಿದನು. ಹೆಣ್ಣುಮಗಳು ಬಂದು ತಟ್ಟೆತೆರೆದು ಕೇಳಿದಳು - ``ತಮ್ಮಾ, ನೀನೇಕೆ ಬಂದಿ ? ಇಷ್ಟರಲ್ಲಿ ನಾಗೇಂದ್ರ ಬಂದರೆ ನಿನ್ನನ್ನು ಕೊಂದು ಹಾಕುತ್ತಾನೆ ಎಂದಳು ಅಕ್ಕ.
``ನಿನ್ನ ಭೆಟ್ಟಿಯಾಗುವದಕ್ಕೆ ನಾನು ಬಂದಿದ್ದೇನೆ ತಮ್ಮನ ಹೇಳಿಕೆ.
``ಬಂದರೆ ಒಳ್ಳೆಯದಾಯಿತು. ಈಗ ಲಗೂನೇ ಇಲ್ಲಿಂದ ಹೋಗು ಎಂದು ಅಕ್ಕ ದುಂಬಾಲ ಬಿದ್ದಳು.
ಅಷ್ಟರಲ್ಲಿ ನಾಗೇಂದ್ರ ಅಲ್ಲಿಗೆ ಬಂದನು. ಗಂಟೆ ಗಣ್ ಅಂದಿತು. ಹಾಲನ್ನು ಕಬ್ಬಿಣ ಬುಟ್ಟಿಯಲ್ಲಿ ಹಾಕಿ ತಟ್ಟೆ ಮುಚ್ಚಿಕೊಳ್ಳುವಷ್ಟರಲ್ಲಿ ನಾಗೇಂದ್ರ ಕೇಳುತ್ತಾನೆ. - ``ಯಾರೋ ಬಂದಂತೆ ಕಾಣುತ್ತದೆ. ``ನನ್ನ ತಮ್ಮ ಎಂದು ಹೆಣ್ಣುಮಗಳು