ಈ ಪುಟವನ್ನು ಪರಿಶೀಲಿಸಲಾಗಿಲ್ಲ.
ಪ್ರಾಣಿ ಕಥೆಗಳು
171
ಮನೆಯ ಮುಂದೆ ಒಬ್ಬ ಸಾಧು ಹೊರಟಿದ್ದನು. ಅವನನ್ನು ಕೇಳಿದಳು ಅಕ್ಕ -
``ನನ್ನ ತಮ್ಮ ನನ್ನನ್ನು ಕರೆಯ ಬಂದಿದ್ದಾನೆ. ನಾನು ಹೇಗೆ ಹೋಗಲಿ ? ತತ್ತಿ ನನ್ನ ಬೆನ್ನು ಹತ್ತುತ್ತದೆ.
ಸಾಧು ಏಳು ಹರಳುಗಳನ್ನು ಮಂತ್ರಿಸಿಕೊಟ್ಟನು. ಅವುಗಳನ್ನು ಉಪಯೋಗಿಸುವ ವಿಧಾನವನ್ನು ಹೇಳಿದನು -
``ಈ ಏಳು ಹರಳು ಒಗೆಯಿರಿ. ಏಳುಹರಿ ನೆಲ ದಾಟಿ ಹೋಗುವಿರಿ. ಅದೇ ರೀತಿಯಲ್ಲಿ ಅಕ್ಕ ತಮ್ಮ ನಿಶ್ಚಿಂತೆಯಿಂದ ತಮ್ಮೂರು ತಲುಪಿದರು.