ಪ್ರಾಣಿ ಕಥೆಗಳು
173
ಹಳ್ಳಕ್ಕೆ ಬಂದು ಈಸಾಡುತ್ತಿದ್ದೇನೆ.
ನಾನೇಕೆ ಸಾಯುವೆನು ?
ಒಕ್ಕಲಿಗನು ಆ ಗುಬ್ಬಿಯನ್ನು ಊರಲ್ಲಿ ತೆಗೆದುಕೊಂಡು ಹೋಗಿ, ಗಾಣಿಗನ ಗಾಣದ ಗಾಲಿಯಲ್ಲಿ ಹಾಕಿದನು. ಮತ್ತೆಯೂ ಅದು ಫಡಫಡಿಸಿತು. ಕೇಳಿದನು-
``ಸತ್ತೆಯೇನು ಗುಬ್ಬಿ ?
ತನ್ನ ದಾಟಿಯಲ್ಲಿಯೇ ಗುಬ್ಬಿ ಮರುನುಡಿಯಿತು.
``ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಿನಲ್ಲಿ ಈಸಾಡಿ
ಈಗ ಎಣ್ಣೆ ಹೂಸಿಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?
ಹೊಲದವನು ಗುಬ್ಬಿಯನ್ನು ಮನೆಗೊಯ್ದು ಒಲೆಯಮೇಲಿನ ಸಳಮಳಿಸುವ ನೀರಿನ ಭಾಂಡೆಯಲ್ಲಿ ಚೆಲ್ಲಿದನು. ಅಲ್ಲಿಯೂ ಗುಬ್ಬಿಯ ಫಡಫಡಾಟ ನಡೆದೇ ಇತ್ತು. ``ಸತ್ತೆಯಾ ಗುಬ್ಬಿ ಎಂದು ಕೇಳಿದನು. ಗುಬ್ಬಿ ಹೇಳಿತು -
``ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಇಲ್ಲಿ ಬಿಸಿಬಿಸಿ ನೀರಿನಿಂದ
ಎರಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?
ಗುಬ್ಬಿಯನ್ನು ಹೆಂಡತಿಯ ಕೈಗಿತ್ತು, ಇದನ್ನು ಕೊಯ್ದು ಅಡಿಗೆ ಮಾಡಲು ಹೊಲದವನು ತಿಳಿಸಿದನು. ಹೆಂಡತಿಯು ಮರುಕ್ಷಣದಲ್ಲಿ ಅಡಿಗೆಮಾಡಿ ಗಂಡನಿಗೆ ಉಣಬಡಿಸಿದಳು. ಉಂಡ ಬಳಿಕ ಹೊಟ್ಟೆಯಲ್ಲಿ ಫಡಫಡಿಸುತ್ತಿರುವ ಗುಬ್ಬಿಯನ್ನು ಕುರಿತು ಗಂಡನು ಕೇಳಿದನು -
``ಸತ್ತೆಯಾ ಗುಬ್ಬಿ ?